CJP ನಾಯಕರ ಅತಿಕ್ರಮಣ ಪ್ರಕರಣ ಅಪರಾಧ ವಿಭಾಗಕ್ಕೆ ವರ್ಗಾವಣೆ: ನ್ಯಾಯಾಂಗ ಬಂಧನ ಬೆನ್ನಲ್ಲೇ ಪೊಲೀಸರ ಶಾಕ್

ಈ ಪ್ರಕರಣವನ್ನು ಅಪರಾಧ ವಿಭಾಗದ ಅಂತಾರಾಜ್ಯ ಘಟಕಕ್ಕೆ ವಹಿಸಲಾಗಿದೆ. ಪ್ರತಿಭಟನೆಗೆ ಸಂಬಂಧಿಸಿದಂತೆ ಪೊಲೀಸರು ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದರು.
CJP leader Saurav Das at a court proceeding, in New Delhi. Cockroach Janta Party leaders Saurav Das and Ashutosh Ranka
ದೆಹಲಿ ನ್ಯಾಯಾಲಯದ ವಿಚಾರಣೆಯ ವೇಳೆ ಸಿಜೆಪಿ ನಾಯಕ ಸೌರವ್ ದಾಸ್. ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಯಕರಾದ ಸೌರವ್ ದಾಸ್ ಮತ್ತು ಆಶುತೋಷ್ ರಂಕಾ ಅವರನ್ನು ಮತ್ತೆ ಎರಡು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು.
Updated on: 

ಜಂತರ್ ಮಂತರ್‌ನಲ್ಲಿ ಅತಿಕ್ರಮಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಾಕ್ರೋಚ್ ಜನತಾ ಪಾರ್ಟಿ (CJP) ನಾಯಕರಾದ ಸೌರವ್ ದಾಸ್ ಮತ್ತು ಆಶುತೋಷ್ ರಂಕಾ ವಿರುದ್ಧದ ಪ್ರಕರಣವನ್ನು ದೆಹಲಿ ಪೊಲೀಸರು ಹೆಚ್ಚಿನ ತನಿಖೆಗಾಗಿ ಅಪರಾಧ ವಿಭಾಗಕ್ಕೆ ವರ್ಗಾಯಿಸಿದ್ದಾರೆ. ಇವರ ನ್ಯಾಯಾಂಗ ಬಂಧನದ ಅವಧಿಯನ್ನು ಎರಡು ದಿನ ವಿಸ್ತರಿಸಿದ ಕೆಲವೇ ಸಮಯದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಈ ಪ್ರಕರಣವನ್ನು ಅಪರಾಧ ವಿಭಾಗದ ಅಂತಾರಾಜ್ಯ ಘಟಕಕ್ಕೆ ವಹಿಸಲಾಗಿದೆ. ಪ್ರತಿಭಟನೆಗೆ ಸಂಬಂಧಿಸಿದಂತೆ ಪೊಲೀಸರು ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದರು. ಒಂದು ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಸಂಸತ್ ಮಾರ್ಗ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಸಾರ್ವಜನಿಕ ಸೇವಕರ ಆದೇಶ ಉಲ್ಲಂಘನೆ, ಅತಿಕ್ರಮಣ, ಸಾರ್ವಜನಿಕ ಸೇವಕರ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಹಲ್ಲೆ, ಗಾಯಗೊಳಿಸುವುದು ಮತ್ತು ಅಪರಾಧ ಸಂಚು ಸೇರಿದಂತೆ ವಿವಿಧ ಆರೋಪಗಳನ್ನು ದಾಖಲಿಸಲಾಗಿತ್ತು.

ಜಂತರ್ ಮಂತರ್‌ಗೆ ತಲುಪಲು ಖಾಸಗಿ ಆವರಣದ ಮೂಲಕ ಅತಿಕ್ರಮಣ ಮಾಡಿರುವುದು ಹಾಗೂ ಶಾಂತಿ ಕಾಪಾಡುವುದಾಗಿ ನೀಡಿದ್ದ ಬಾಂಡ್‌ಗಳ ಷರತ್ತುಗಳನ್ನು ಉಲ್ಲಂಘಿಸಿರುವ ಆರೋಪದ ಮೇರೆಗೆ ಅಕ್ಟೋಬರ್ 14ರಂದು ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಸೌರವ್ ದಾಸ್ ಮತ್ತು ಆಶುತೋಷ್ ರಂಕಾ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇದಕ್ಕೂ ಒಂದು ದಿನ ಮೊದಲು ಜಂತರ್ ಮಂತರ್ ನ್ನು ಅಧಿಕೃತ ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ಕೈಬಿಡಲಾಗಿತ್ತು.

ಅವರ ಸಹಚರ ಅಜಿಂಕ್ಯ ಶಿಂಧೆ ಅವರಿಗೆ ಆರು ತಿಂಗಳ ಕಾಲ ಶಾಂತಿ ಮತ್ತು ಉತ್ತಮ ನಡವಳಿಕೆಯನ್ನು ಕಾಪಾಡುವಂತೆ ಸೂಚಿಸಿ, ವೈಯಕ್ತಿಕ ಬಾಂಡ್ ಹಾಗೂ 5,000 ರೂಪಾಯಿಗಳ ಜಾಮೀನು ಖಾತರಿಯ ಮೇಲೆ ಬಿಡುಗಡೆ ಮಾಡಲಾಗಿತ್ತು.

CJP leader Saurav Das at a court proceeding, in New Delhi. Cockroach Janta Party leaders Saurav Das and Ashutosh Ranka
CJP ಮುಖಂಡರಿಗಿಲ್ಲ ಬಿಡುಗಡೆ ಭಾಗ್ಯ: ಅಶುತೋಷ್ ರಾಂಕಾ, ಸೌರವ್ ದಾಸ್ ಗೆ ಇನ್ನೂ 2 ದಿನ ಜೈಲೇ ಗತಿ!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಘೋಷಣೆಗಳನ್ನು ಕೂಗಿ, ರಾಷ್ಟ್ರಧ್ವಜವನ್ನು ಹಾರಿಸಿದ ಆರೋಪದ ಹಿನ್ನೆಲೆಯಲ್ಲಿ ಅಕ್ಟೋಬರ್ 13ರಂದು ಸೌರವ್ ದಾಸ್ ಮತ್ತು ಆಶುತೋಷ್ ರಂಕಾ, ಅಜಿಂಕ್ಯ ಶಿಂಧೆ ಸೇರಿದಂತೆ ಸಿಜೆಪಿಯ ಇತರ ಸದಸ್ಯರನ್ನು ವಶಕ್ಕೆ ಪಡೆಯಲಾಗಿತ್ತು. ಪ್ರತಿಭಟನಾಕಾರರು ಖಾಸಗಿ ಆವರಣದ ಮೂಲಕ ಅಧಿಕೃತ ಪಟ್ಟಿಯಿಂದ ಕೈಬಿಡಲಾಗಿದ್ದ ಜಂತರ್ ಮಂತರ್ ಪ್ರದೇಶವನ್ನು ಪ್ರವೇಶಿಸಿ, ಪೊಲೀಸರ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ್ದಾರೆ ಎಂದು ದೆಹಲಿ ಪೊಲೀಸರು ಆರೋಪಿಸಿದ್ದಾರೆ.

ಸೋಮವಾರ ಸೌರವ್ ದಾಸ್ ಮತ್ತು ಆಶುತೋಷ್ ರಂಕಾ ಅವರನ್ನು ಮಂದಿರ್ ಮಾರ್ಗ ಪೊಲೀಸ್ ಠಾಣೆಯಲ್ಲಿರುವ ಹೊಸದಾಗಿ ನೇಮಕಗೊಂಡ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು. ದಾಖಲೆಗಳಲ್ಲಿನ ವ್ಯತ್ಯಾಸದ ಕಾರಣ ಜಾಮೀನು ಖಾತರಿಯನ್ನು ತಿರಸ್ಕರಿಸಿದ ಹಿನ್ನೆಲೆಯಲ್ಲಿ ಅವರ ನ್ಯಾಯಾಂಗ ಬಂಧನವನ್ನು ಎರಡು ದಿನಗಳ ಕಾಲ ವಿಸ್ತರಿಸಲಾಯಿತು ಎಂದು ಅವರ ವಕೀಲರು ತಿಳಿಸಿದ್ದಾರೆ.

CJP leader Saurav Das at a court proceeding, in New Delhi. Cockroach Janta Party leaders Saurav Das and Ashutosh Ranka
'ಲಾರೆನ್ಸ್ ಬಿಷ್ಣೋಯ್ ಸಾಹೇಬ್': ಗ್ಯಾಂಗ್‌ಸ್ಟರ್‌ಗೆ ಅಷ್ಟೊಂದು ಗೌರವವಿದೆಯೇ? ದೆಹಲಿ ಪೊಲೀಸರ ವಿರುದ್ಧ ದೀಪ್ಕೆ ಆಕ್ರೋಶ; Video

ನ್ಯಾಯಾಂಗ ಪ್ರಕ್ರಿಯೆಯನ್ನು ಪದೇಪದೆ ವಿಳಂಬಗೊಳಿಸಲಾಗುತ್ತಿದೆ, ಜಾಮೀನು ಖಾತರಿಗಳನ್ನು ತಿರಸ್ಕರಿಸಿರುವುದರಿಂದ ಇಬ್ಬರೂ ಕಾರ್ಯಕರ್ತರು ಬಂಧನದಲ್ಲೇ ಉಳಿಯುವಂತಾಗಿದೆ ಎಂದು ಸಿಜೆಪಿ ನಾಯಕರು ಆರೋಪಿಸಿದ್ದಾರೆ.

ಪಕ್ಷದ ಕಾನೂನು ವ್ಯವಹಾರಗಳ ಮುಖ್ಯಸ್ಥೆ ರತ್ನಾ ಸಿಂಗ್ ಅವರು ಈ ನಿರ್ಧಾರವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಇಬ್ಬರ ಪರ ವಾದಿಸುತ್ತಿರುವ ವಕೀಲ ಅಭಿಕ್ ಚಿಮ್ನಿ, ಛಾಯಾಚಿತ್ರಗಳಲ್ಲಿನ ವ್ಯತ್ಯಾಸದ ಕಾರಣ ಜಾಮೀನು ಖಾತರಿಯನ್ನು ತಿರಸ್ಕರಿಸಲಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com