CJPಗೆ ಬಿಗ್ ರಿಲೀಫ್: ಅಶುತೋಷ್ ರಾಂಕಾ, ಸೌರವ್ ದಾಸ್ ಬಿಡುಗಡೆ ಮಾಡುವಂತೆ SEM ಆದೇಶ

ಅಶುತೋಷ್ ರಾಂಕಾ, ಸೌರವ್ ದಾಸ್ ಅವರ ನ್ಯಾಯಾಂಗ ಬಂಧನ ಅವಧಿ ಇಂದು ಅಂತ್ಯಗೊಂಡ ಹಿನ್ನಲೆಯಲ್ಲಿ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು.
Ashutosh Ranka - Saurav Das
ಅಶುತೋಷ್ ರಂಕಾ - ಸೌರವ್ ದಾಸ್
Updated on: 

ನವದೆಹಲಿ: ಅಕ್ರಮವಾಗಿ ಜಂತರ್ ಮಂತರ್ ಪ್ರವೇಶಿಸಿದ ಆರೋಪದ ಮೇಲೆ ಬಂಧಿತರಾಗಿರುವ 'ಕಾಕ್ರೋಚ್ ಜನತಾ ಪಾರ್ಟಿ' (CJP) ಮುಖಂಡರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರನ್ನು ಬಿಡುಗಡೆ ಮಾಡುವಂತೆ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್(Special Executive Magistrate) ಬುಧವಾರ ಆದೇಶಿಸಿದೆ.

ಅಶುತೋಷ್ ರಾಂಕಾ, ಸೌರವ್ ದಾಸ್ ಅವರ ನ್ಯಾಯಾಂಗ ಬಂಧನ ಅವಧಿ ಇಂದು ಅಂತ್ಯಗೊಂಡ ಹಿನ್ನಲೆಯಲ್ಲಿ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು. ಅಲ್ಲದೆ ನ್ಯಾಯಾಂದ ಬಂಧನ ಅವಧಿಯನ್ನು ಇನ್ನೂ ಮೂರು ದಿನ ವಿಸ್ತರಿಸುವಂತೆ ದೆಹಲಿ ಪೊಲೀಸರು ಮನವಿ ಮಾಡಿದರು. ಆದರೆ ಪೊಲೀಸರ ಮನವಿ ತಿರಸ್ಕರಿಸಿದ ಎಸ್ಇಎಂ, ಅಶುತೋಷ್ ರಾಂಕಾ, ಸೌರವ್ ದಾಸ್ ಅವರನ್ನು ಬಿಡುಗಡೆ ಮಾಡುವಂತೆ ಆದೇಶಿಸಿದೆ.

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವಾಗ ನಿರ್ಬಂಧಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ, ಅಕ್ಟೋಬರ್ 13 ರಂದು ಈ ಇಬ್ಬರನ್ನು ಬಂಧಿಸಲಾಗಿತ್ತು. ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

Ashutosh Ranka - Saurav Das
ಸೌರವ್ ದಾಸ್, ಆಶುತೋಷ್ ರಂಕಾಗೆ ಹಿನ್ನಡೆ: CJP ನಾಯಕರ ನ್ಯಾಯಾಂಗ ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಾಪಸ್; ದೆಹಲಿ ಹೈಕೋರ್ಟ್ ಹೇಳಿದ್ದೇನು?

ಇಂದು ಬೆಳಗ್ಗೆ ದೆಹಲಿ ಹೈಕೋರ್ಟ್ ದಾಸ್ ಮತ್ತು ರಾಂಕಾ ಅವರ ನ್ಯಾಯಾಂಗ ಬಂಧನದ ವಿಷಯದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿತ್ತು. ಎಸ್‌ಇಎಂ (SEM) ಮುಂದೆ ನಿಗದಿಯಾಗಿರುವ ವಿಚಾರಣೆಯ ಫಲಿತಾಂಶಕ್ಕಾಗಿ ಕಾಯುವಂತೆ ಆರೋಪಿಗಳಿಗೆ ಕೋರ್ಟ್ ಸೂಚಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com