ಬಾಲಿವುಡ್ ನಟ ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ: ಮೂವರು ಆರೋಪಿಗಳಿಗೆ ಅ. 31ರವರೆಗೆ ಪೊಲೀಸ್ ಕಸ್ಟಡಿ!

ಈ ಪ್ರಕರಣದಲ್ಲಿ ಬಂಧಿತರಾದ ಮೂವರು ಪ್ರಮುಖ ಆರೋಪಿಗಳನ್ನು ರಾಜಸ್ಥಾನದ ಕೋಟಾದಿಂದ ಬುಧವಾರ ಮುಂಜಾನೆ ಮುಂಬೈಗೆ ಕರೆತರಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
Three accused
ಮೂವರು ಆರೋಪಿಗಳು
Updated on: 

ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ನ್ಯಾಯಾಲಯವೊಂದು ಮೂವರು ಆರೋಪಿಗಳನ್ನು ಅಕ್ಟೋಬರ್ 31ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಈ ಪ್ರಕರಣದಲ್ಲಿ ಬಂಧಿತರಾದ ಮೂವರು ಪ್ರಮುಖ ಆರೋಪಿಗಳನ್ನು ರಾಜಸ್ಥಾನದ ಕೋಟಾದಿಂದ ಬುಧವಾರ ಮುಂಜಾನೆ ಮುಂಬೈಗೆ ಕರೆತರಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳನ್ನು ರಸ್ತೆ ಮಾರ್ಗವಾಗಿ ಕೋಟಾದಿಂದ ಮುಂಬೈಗೆ ಕರೆತರಲಾಯಿತು. ಮುಂಬೈಗೆ ತಲುಪಿದ ಕೂಡಲೇ, ಕಡ್ಡಾಯ ವೈದ್ಯಕೀಯ ಪರೀಕ್ಷೆಗಾಗಿ ಅವರನ್ನು ಜಿ.ಟಿ. ಆಸ್ಪತ್ರೆಗೆ (GT Hospital) ಕರೆದೊಯ್ಯಲಾಯಿತು.

ವೈದ್ಯಕೀಯ ತಪಾಸಣೆಯ ನಂತರ ವಿಚಾರಣೆಗಾಗಿ ಮುಂಬೈ ಅಪರಾಧ ವಿಭಾಗದ (Mumbai Crime Branch) ದರೋಡೆ ವಿರೋಧಿ ಘಟಕದ (Anti-Extortion Cell - AEC) ಕಚೇರಿಗೆ ಕರೆದೊಯ್ಯಲಾಯಿತು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

Three accused
ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ: ಬ್ಯಾಂಡೇಜ್ ಧರಿಸಿರುವ ನಟನ ಫಸ್ಟ್ ಇಮೇಜ್; ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಡಿಸಿಎಂ ಏಕನಾಥ್ ಶಿಂಧೆ; Video

ಆರೋಪಿಗಳನ್ನು ಹರಿಯಾಣದ ಸೋನಿಪತ್‌ನ ರೆಹಾನ್ ಅಲಿಯಾಸ್ ಸುಕ್ಕಾ, ಮುಂಬೈನಲ್ಲಿ ವಾಸಿಸುತ್ತಿರುವ ಬಿಹಾರದ ಬೇಗುಸರಾಯ್ ಮೂಲದ ರಿತಿಕ್ ಕುರ್ಮಿ ಹಾಗೂ ಹರಿಯಾಣದ ಫೂಲ್ ಸಿಂಗ್ ಎಂದು ಗುರುತಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಕೋಟಾ ನಗರ ಪೊಲೀಸರು ಇವರನ್ನು ಮುಂಬೈ ಪೊಲೀಸರಿಗೆ ಹಸ್ತಾಂತರಿಸಿದ್ದರು. ಮುಂಬೈ ಪೊಲೀಸರು ಅವರನ್ನು ಔಪಚಾರಿಕವಾಗಿ ಬಂಧಿಸಿ, ಅಲ್ಲಿನ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ್ದರು. ಅವರನ್ನು ಮುಂಬೈಗೆ ಕರೆತರುವ ಸಲುವಾಗಿ ನ್ಯಾಯಾಲಯವು 'ಟ್ರಾನ್ಸಿಟ್ ರಿಮಾಂಡ್' (ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಕರೆದೊಯ್ಯಲು ಅನುಮತಿ) ನೀಡಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com