ದೆಹಲಿ: SIR ವಿರುದ್ಧ ಇಸಿಐ ಪ್ರಧಾನ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ, ಹಲವಾರು ಪ್ರತಿಭಟನಾಕಾರರ ಬಂಧನ! Video

ಎಸ್‌ಐಆರ್ ಪ್ರಕ್ರಿಯೆ ವೇಳೆ ಮತದಾರರ ಪಟ್ಟಿಯಿಂದ ಲಕ್ಷಾಂತರ ಮತದಾರರ ಹೆಸರನ್ನು ತೆಗೆದುಹಾಕಲಾಗಿದೆ ಎಂದು ಆರೋಪಿಸಿ ಪ್ರತಿಭಟನಾ ಮೆರವಣಿಗೆ ಆಯೋಜಿಸಲಾಗಿತ್ತು
Protesters Detained
ಪ್ರತಿಭಟನಾಕಾರರ ಬಂಧನ
Updated on: 

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಕೇಂದ್ರ ಚುನಾವಣಾ ಆಯೋಗದ ಕಚೇರಿಯವರೆಗೂ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ಹಲವಾರು ಪ್ರತಿಭಟನಾಕಾರರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಎಸ್‌ಐಆರ್ ಪ್ರಕ್ರಿಯೆ ವೇಳೆ ಮತದಾರರ ಪಟ್ಟಿಯಿಂದ ಲಕ್ಷಾಂತರ ಮತದಾರರ ಹೆಸರನ್ನು ತೆಗೆದುಹಾಕಲಾಗಿದೆ ಎಂದು ಆರೋಪಿಸಿ ಪ್ರತಿಭಟನಾ ಮೆರವಣಿಗೆ ಆಯೋಜಿಸಲಾಗಿತ್ತು. ಈ ಪ್ರತಿಭಟನೆ ವೇಳೆ ಹಲವಾರು ಪ್ರತಿಭಟನಾಕಾರರನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ಪೀಪಲ್ ಆಗನೇಸ್ಟ್ ಎಸ್‌ಐಆರ್ ಶುಕ್ರವಾರ ಆಯೋಜಿಸಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರನ್ನು ಆಹ್ವಾನಿಸಲಾಗಿತ್ತು. ದೆಹಲಿಯ ಕನ್ನಾಟ್ ಪ್ಲೇಸ್‌ನಲ್ಲಿರುವ ಬಾಂಗ್ಲಾ ಸಾಹಿಬ್ ಗುರುದ್ವಾರದಿಂದ ಪಟೇಲ್ ಚೌಕ್ ಬಳಿಯ ಚುನಾವಣಾ ಆಯೋಗದ ಕಚೇರಿಗೆ ಮೆರವಣಿಗೆ ನಡೆಸಲು ವಿದ್ಯಾರ್ಥಿಗಳು, ರೈತರು ಮತ್ತು ನಾಗರಿಕ ಸಮಾಜ ಗುಂಪುಗಳ ಒಕ್ಕೂಟವು ಯೋಜಿಸಿತ್ತು.

ಪ್ರಜಾಪ್ರಭುತ್ವವನ್ನು ಪುನರ್ ಸ್ಥಾಪಿಸಲು, ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ತೆಗೆದುಹಾಕುವಂತೆ ಒತ್ತಾಯಿಸಲು ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅನ್ನು ರದ್ದುಗೊಳಿಸುವಂತೆ ಒತ್ತಡ ಹೇರಲು ಈ ಮೆರವಣಿಗೆ ನಡೆಸಲಾಯಿತು. SIR ಪ್ರಕ್ರಿಯೆ ಕಾನೂನುಬಾಹಿರವಾಗಿದೆ ಎಂದು ವೇದಿಕೆ ಆರೋಪಿಸಿದೆ.

ಸಿಇಸಿ ಜ್ಞಾನೇಶ್ ಕುಮಾರ್ ಟೀಕೆಗೆ ಗುರಿಯಾಗುತ್ತಿರುವುದು ಏಕೆ? ಚುನಾವಣಾ ಆಯೋಗದ ಸುತ್ತಲಿನ ವಿವಾದದ ನಡುವೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ದಿ ಇಂಡಿಯನ್ ಎಕ್ಸ್‌ಪ್ರೆಸ್‌ನ ತನಿಖಾ ವರದಿಯ ಪ್ರಕಾರ, SIR ಪ್ರಕ್ರಿಯೆಗೆ ಸಂಬಂಧಿಸಿದ ನಿರ್ಧಾರಗಳು ಮತ್ತು ಕಾರ್ಯವಿಧಾನಗಳಿಗೆ ಸಂಬಂಧಿಸಿದಂತೆ ಚುನಾವಣಾ ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ 10 ತಿಂಗಳ ಅವಧಿಯಲ್ಲಿ ಕನಿಷ್ಠ 14 ಬಾರಿ ಆಕ್ಷೇಪಣೆಗಳನ್ನು ಎತ್ತಿದ್ದಾರೆ.

Protesters Detained
ಭಾರತದ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ ಮಾಡಲ್ಲ: SIR ಪ್ರತಿಭಟನೆ ಬಗ್ಗೆ ಮಾರ್ಕೊ ರುಬಿಯೊ ಹೇಳಿಕೆ

ಚುನಾವಣಾ ಆಯೋಗವು ಆರೋಪಗಳನ್ನು ತಿರಸ್ಕರಿಸಿದೆ. ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ಸೇರಿದಂತೆ ಪ್ರಮುಖ ನಿರ್ಧಾರಗಳನ್ನು ಪೂರ್ಣ ಆಯೋಗವು ಸರ್ವಾನುಮತದಿಂದ ತೆಗೆದುಕೊಂಡಿದೆ ಎಂದು ಸಮರ್ಥಿಸಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com