"ಮೋದಿ ಕಾ ಬಾಪ್ ಭಿ ಜಾಯೇಗಾ": ಖರ್ಗೆ ಹೇಳಿಕೆ ಖಂಡಿಸಿ ದೇಶಾದ್ಯಂತ ಬಿಜೆಪಿ ಪ್ರತಿಭಟನೆ; ಕ್ಷಮೆಯಾಚಿಸಬೇಕು ಎಂದು ಆಗ್ರಹ!

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿಯೂ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಖರ್ಗೆ ಅವರು ಕ್ಷಮೆಯಾಚಿಸಬೇಕೆಂದು ಒತ್ತಾಯಿಸುತ್ತಿದೆ.
BJP Holds Protests Across Country, Seeks Mallikarjung Kharge's Apology Over "Baap" Jibe
ಬಿಜೆಪಿ ಪ್ರತಿಭಟನೆ
Updated on: 

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ "ವಿವಾದಾತ್ಮಕ" ಹೇಳಿಕೆ ನೀಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ, ಬಿಜೆಪಿ ಸೋಮವಾರ ಎಲ್ಲಾ ರಾಜ್ಯಗಳಲ್ಲಿ ತಮ್ಮ ಪಕ್ಷದ ಪ್ರಧಾನ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಿತು.

ಭಾನುವಾರ ಪಾಟ್ನಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, "ಮೋದಿ ಕಾ ಬಾಪ್‌ ಭಿ ಜಾಯೇಗಾ" (ಮೋದಿ ಏನ್ ಅವರ ಅಪ್ಪನೂ ಹೋಗುತ್ತಾನೆ) ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದರು. ಖರ್ಗೆ ಹೇಳಿಕೆ ವಿರುದ್ಧ ಆಡಳಿತಾರೂಢ ಬಿಜೆಪಿ ಕೆಂಡಾಮಂಡಲವಾಗಿದೆ.

ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್, ಸೋನಿಯಾ ಗಾಂಧಿ ಮತ್ತು ಸ್ವತಃ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಈ ಹಿಂದೆ ಅವಹೇಳನಕಾರಿ ಪದಗಳನ್ನು ಬಳಸಿದಾಗ ಬಿಜೆಪಿ ನಾಯಕರು ಏಕೆ ಆಕ್ರೋಶ ವ್ಯಕ್ತಪಡಿಸಲಿಲ್ಲ ಎಂದು ಪ್ರಶ್ನಿಸಿದೆ.

BJP Holds Protests Across Country, Seeks Mallikarjung Kharge's Apology Over "Baap" Jibe
"ಮೋದಿ ಕಾ ಬಾಪ್ ಭಿ ಜಾಯೇಗಾ" ಹೇಳಿಕೆ: ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ BJPತೀವ್ರ ಆಕ್ರೋಶ, ದೇಶಾದ್ಯಂತ ಸಮರಕ್ಕೆ ಮುಂದು..!

ಬಿಹಾರದಲ್ಲಿ, ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ, ಖರ್ಗೆ ಅವರ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನಾ ಮೆರವಣಿಗೆ ನಡೆಸಿದರು ಮತ್ತು ಅವರ ರಾಜೀನಾಮೆಗೆ ಆಗ್ರಹಿಸಿದರು.

ಕಾಂಗ್ರೆಸ್ ಅಧ್ಯಕ್ಷರ ಪ್ರತಿಕೃತಿಯನ್ನು ದಹಿಸಿದ ಬಿಜೆಪಿ, ಜಮ್ಮುವಿನಲ್ಲೂ ಬಿಜೆಪಿ ಕಾರ್ಯಕರ್ತರು ಖರ್ಗೆ ಅವರ ಪೋಸ್ಟರ್‌ಗಳನ್ನು ಸುಟ್ಟುಹಾಕಿ ಘೋಷಣೆಗಳನ್ನು ಕೂಗಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿಯೂ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಖರ್ಗೆ ಅವರು ಕ್ಷಮೆಯಾಚಿಸಬೇಕೆಂದು ಒತ್ತಾಯಿಸುತ್ತಿದೆ.

ಖರ್ಗೆ ಹೇಳಿಕೆ ಖಂಡಿಸಿದ ರಾಜನಾಥ್ ಸಿಂಗ್

ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ಖಂಡಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಪ್ರಧಾನಿ ಮೋದಿ ಅವರ ದಿವಂಗತ ತಂದೆಯ ಕುರಿತಾದ ಟೀಕೆಗಳಿಂದ ತಮಗೆ ತೀವ್ರ ಆಘಾತವಾಗಿದೆ ಹೇಳಿದ್ದಾರೆ.

ಇದು ಅತ್ಯಂತ ನೋವುಂಟುಮಾಡುವ ಸಂಗತಿ... ಈ ಸಂಪೂರ್ಣ ಪ್ರಕರಣದಲ್ಲಿ ಅತ್ಯಂತ ಆಘಾತಕಾರಿ ವಿಷಯವೆಂದರೆ, ಈ ಹೇಳಿಕೆ ನೀಡಿದ್ದು ಕಾಂಗ್ರೆಸ್‌ನ ಸಾಮಾನ್ಯ ಕಾರ್ಯಕರ್ತರೋ ಅಥವಾ ಯುವ ನಾಯಕರೋ ಅಲ್ಲ; ಬದಲಾಗಿ, ದೇಶದ ಅತ್ಯಂತ ಹಳೆಯ ರಾಜಕೀಯ ಪಕ್ಷವೆಂದು ಹೇಳಿಕೊಳ್ಳುವ ಪಕ್ಷದ ರಾಷ್ಟ್ರೀಯ ಅಧ್ಯಕ್ಷರೇ ಇಂತಹ ಮಾತುಗಳನ್ನು ಆಡಿದ್ದಾರೆ" ಎಂದು ರಾಜನಾಥ್ ಸಿಂಗ್ ಹೇಳಿದರು.

ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಕೇವಲ ಒಬ್ಬ ವ್ಯಕ್ತಿ ಅಥವಾ ಒಂದು ಕುಟುಂಬಕ್ಕೆ ಮಾಡಿದ ಅವಮಾನವಲ್ಲ, ಬದಲಿಗೆ ಎಐಸಿಸಿ ಅಧ್ಯಕ್ಷರು ಇಡೀ ಭಾರತವನ್ನು ಅವಮಾನಿಸಿದ್ದಾರೆ" ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com