ಸುದೀರ್ಘ ಹಿರಿತನವಿದ್ದರೂ ಮಾತಿನಲ್ಲಿ ಖರ್ಗೆ ತೋರಿದ ಸಣ್ಣತನ ಕ್ಷಮಾರ್ಹವಲ್ಲ: ಕುಮಾರಸ್ವಾಮಿ ತರಾಟೆ!

ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ' ಎಂದು ಪುರಂದರದಾಸರು ಸುಮ್ಮನೆ ಹೇಳಿದ್ದಲ್ಲ, ಬಹುಶಃ ಇಂಥ ನಾಲಿಗೆಗಳನ್ನು ತಿದ್ದಬೇಕು ಎಂಬ ಉದ್ದೇಶದಿಂದಲೇ ಹೇಳಿರಬೇಕು. ಖರ್ಗೆ ಅವರ ಈ ಹೇಳಿಕೆಯನ್ನು ಖಂಡಿಸುತ್ತೇನೆ ಎಂದಿದ್ದಾರೆ.
Mallikarjuna Kharge, HD Kumaraswamy
ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ ಕುಮಾರಸ್ವಾಮಿ
Updated on: 

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುವ ಭರದಲ್ಲಿ ಅವರ ತಂದೆಯವರ ಬಗ್ಗೆ ಹೇಳಿಕೆ ನೀಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕೇಂದ್ರ ಸಚಿವ ಎಚ್. ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕ ಜೀವನದಲ್ಲಿ ಸುದೀರ್ಘ ಹಿರಿತನವಿದ್ದರೂ ಮಾತಿನಲ್ಲಿ ಅವರು ತೋರಿದ ಸಣ್ಣತನ ಕ್ಷಮಾರ್ಹವಲ್ಲ ಎಂದಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು, ರಾಷ್ಟ್ರದ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಅವಹೇಳನಕಾರಿ ಮಾತ್ರವಲ್ಲ, ರಾಜಕೀಯ ಶಿಷ್ಟಾಚಾರದ ಸ್ಪಷ್ಟ ಉಲ್ಲಂಘನೆ. ಅವರ ಮಾತು ಮಾನವೀಯತೆಯ ಅಣಕ ಹಾಗೂ ಅವರಲ್ಲಿ ಅಡಗಿರುವ ನಿಗೂಢ ಕ್ರೂರ ಮನಃಸ್ಥಿತಿಯ ಪ್ರತೀಕ. ಅದುವೇ ಇಂತಹ ನುಡಿಮುತ್ತುಗಳನ್ನು ನುಡಿಸಿರಬೇಕು ಎಂದು ಹರಿಹಾಯ್ದಿದ್ದಾರೆ.

ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ' ಎಂದು ಪುರಂದರದಾಸರು ಸುಮ್ಮನೆ ಹೇಳಿದ್ದಲ್ಲ, ಬಹುಶಃ ಇಂಥ ನಾಲಿಗೆಗಳನ್ನು ತಿದ್ದಬೇಕು ಎಂಬ ಉದ್ದೇಶದಿಂದಲೇ ಹೇಳಿರಬೇಕು. ಖರ್ಗೆ ಅವರ ಈ ಹೇಳಿಕೆಯನ್ನು ಖಂಡಿಸುತ್ತೇನೆ ಎಂದಿದ್ದಾರೆ.

Mallikarjuna Kharge, HD Kumaraswamy
'ಮೋದಿ ಏನ್ ಅವರ ಅಪ್ಪನೂ ಹೋಗ್ತಾರೆ': ಪಾಟ್ನಾ ಕಾರ್ಯಕ್ರಮದಲ್ಲಿ ಖರ್ಗೆ ಹೇಳಿಕೆ; ಭುಗಿಲೆದ್ದ ಆಕ್ರೋಶ, Video

ಪ್ರಧಾನಿಗಳ ತಂದೆಯವರನ್ನು ರಾಜಕೀಯ ಟಾರ್ಗೆಟ್ ಮಾಡಿಕೊಂಡು ಖರ್ಗೆ ಅವರು ನೀಡಿರುವ ಹೇಳಿಕೆಯನ್ನು ಸಹಿಸಲು ಸಾಧ್ಯವಿಲ್ಲ. ಸಾರ್ವಜನಿಕ ಜೀವನದಲ್ಲಿ ಸುದೀರ್ಘ ಹಿರಿತನವಿದ್ದರೂ ಮಾತಿನಲ್ಲಿ ಅವರು ತೋರಿದ ಸಣ್ಣತನ ಕ್ಷಮಾರ್ಹವಲ್ಲ ಎಂದು ಕಿಡಿಕಾರಿದ್ದಾರೆ.

ಅವರ ವರ್ತನೆ ಕೇವಲ ಹತಾಶೆಯಷ್ಟೇ ಅಲ್ಲ, ನಾಚಿಕೆಗೇಡಿತನದ್ದು. ಇದು ಕಾಂಗ್ರೆಸ್ ಪಕ್ಷದ ಅಧಃಪತನದ ಪರಮಾವಧಿ. ಖರ್ಗೆ ಅವರು ಪ್ರಧಾನಿಗಳ ಕ್ಷಮೆ ಕೇಳಿ ತಮ್ಮ ಹಿರಿತನದ ಮರ್ಯಾದೆ ಉಳಿಸಿಕೊಳ್ಳಬೇಕು ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com