ಸಂಸತ್ ಭವನದ ನಾರ್ತ್ ಬ್ಲಾಕ್‌ನಲ್ಲಿ ಅಗ್ನಿ ಅವಘಡ; ಬೆಂಕಿ ನಂದಿಸಲು ಸ್ಥಳಕ್ಕೆ ಧಾವಿಸಿದ 6 ಅಗ್ನಿಶಾಮಕ ವಾಹನ!

ಕಟ್ಟಡದಿಂದ ಹೊಗೆ ಬರುತ್ತಿರುವ ಬಗ್ಗೆ ದೆಹಲಿ ಅಗ್ನಿಶಾಮಕ ಸೇವೆಗೆ ಇಂದು ಬೆಳಗ್ಗೆ 11.10 ಕ್ಕೆ ಕರೆ ಬಂದಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Six fire trucks rush to douse blaze at Delhi's North Block
ಸಂಸತ್ ಭವನದ ನಾರ್ತ್ ಬ್ಲಾಕ್‌ನಲ್ಲಿ ಅಗ್ನಿ ಅವಘಡ
Updated on: 

ನವದೆಹಲಿ: ದೆಹಲಿಯ ಸಂಸತ್ ಭವನದ ಸಮೀಪದಲ್ಲೇ ಇರುವ ಕೇಂದ್ರ ಸಚಿವಾಲಯದ 'ನಾರ್ತ್ ಬ್ಲಾಕ್'(North Block) ಕಟ್ಟಡದ ಮೇಲ್ಛಾವಣಿಯಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ಆರು ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಯತ್ನಿಸುತ್ತಿವೆ.

ಕಟ್ಟಡದಿಂದ ದಟ್ಟವಾದ ಹೊಗೆ ಬರುತ್ತಿರುವುದನ್ನು ಗಮನಿಸಿದ ನಂತರ, ಆರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದವು.

ಕಟ್ಟಡದಲ್ಲಿ ನವೀಕರಣ ಕಾಮಗಾರಿ ನಡೆಯುತ್ತಿದ್ದು, ಒಳಭಾಗದಲ್ಲಿದ್ದ ಕೆಲವು ವಸ್ತುಗಳನ್ನು ತೆರವುಗೊಳಿಸುವ ಕೆಲಸಗಳು ನಡೆಯುತ್ತಿದ್ದವು. ಬಹುಶಃ ಇದೇ ಬೆಂಕಿ ಕಾಣಿಸಿಕೊಳ್ಳಲು ಕಾರಣವಾಗಿರಬಹುದು ಎಂದು ದೆಹಲಿ ಅಗ್ನಿಶಾಮಕ ಸೇವೆ ತಿಳಿಸಿದೆ.

Six fire trucks rush to douse blaze at Delhi's North Block
ದೆಹಲಿ: ಶಾಲೆಯೊಳಗೆ ಬೆಂಕಿ ಹಚ್ಚಿಕೊಂಡ 12ನೇ ತರಗತಿ ವಿದ್ಯಾರ್ಥಿನಿ; 3 ಪುಟಗಳ ನೋಟ್ ಪತ್ತೆ

ಕಟ್ಟಡದಿಂದ ಹೊಗೆ ಬರುತ್ತಿರುವ ಬಗ್ಗೆ ದೆಹಲಿ ಅಗ್ನಿಶಾಮಕ ಸೇವೆಗೆ ಇಂದು ಬೆಳಗ್ಗೆ 11.10 ಕ್ಕೆ ಕರೆ ಬಂದಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಸತ್ತಿನತ್ತ ತೆರಳುತ್ತಿದ್ದ ಶಿವಸೇನಾ ಸಂಸದ ಮಿಲಿಂದ್ ದಿಯೋರಾ ಅವರು ನಾರ್ತ್ ಬ್ಲಾಕ್‌ನ ಹಿಂಭಾಗದಿಂದ ದಟ್ಟ ಹೊಗೆ ಏಳುತ್ತಿರುವುದನ್ನು ಗಮನಿಸಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

ತಮ್ಮ ‘ಎಕ್ಸ್’ ಖಾತೆಯಲ್ಲಿ ದಟ್ಟ ಕಪ್ಪು ಹೊಗೆ ಆವರಿಸಿರುವ ಚಿತ್ರವನ್ನು ಹಂಚಿಕೊಂಡಿರುವ ದಿಯೋರಾ, ಎಲ್ಲರೂ ಸುರಕ್ಷಿತವಾಗಿರಲಿ ಎಂದು ಹಾರೈಸಿದ್ದು, ತುರ್ತು ಸೇವೆಗಳು ತ್ವರಿತವಾಗಿ ಸ್ಪಂದಿಸುತ್ತಿವೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com