ಅಪ್ರಾಪ್ತೆ ಮೇಲೆ ಅತ್ಯಾಚಾರ-ಕೊಲೆ: ಅಪರಾಧ ಕೃತ್ಯ ಮರುಸೃಷ್ಟಿ ವೇಳೆ ಬಂಗಾಳದಲ್ಲಿ ಹೈಡ್ರಾಮಾ; ಎಸ್ಕೇಪ್ ಆಗಲು ಯತ್ನಿಸಿದ ಆರೋಪಿ ಎನ್‌ಕೌಂಟರ್‌ಗೆ ಬಲಿ..!

ತಕ್ಷಣವೇ ಆರೋಪಿಯನ್ನು ಚಾಂದ್‌ಪಾರಾ ಗ್ರಾಮೀಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
The incident took place on Monday night in Gaighata, where he was taken for reconstruction of the crime.
ಆಸ್ಪತ್ರೆ ಆವರಣದಲ್ಲಿರುವ ಪೊಲೀಸ್ ಸಿಬ್ಬಂದಿ.
Updated on: 

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬೊಂಗಾವ್ ಪ್ರದೇಶದಲ್ಲಿ 17 ವರ್ಷದ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ಆರೋಪಿಯೊಬ್ಬನನ್ನು ಪೊಲೀಸರು ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿದ್ದಾರೆ.

ಪ್ರಹ್ಲಾದ್ ದಾಸ್ (23) ಎಂಬ ಆರೋಪಿಯನ್ನು ಪೊಲೀಸರು ಎನ್ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ. ಇಂದು ಮುಂಜಾನೆ ಗೈಘಾಟಾದಲ್ಲಿ ಅಪರಾಧ ನಡೆದ ಸ್ಥಳದ ಮರುಸೃಷ್ಟಿ ಮಾಡುವ ವೇಳೆ ಈ ಘಟನೆ ಸಂಭವಿಸಿದೆ.

ಸೋಮವಾರ ರಾತ್ರಿ ಗೈಘಾಟಾ ಪ್ರದೇಶದಲ್ಲಿ ಅಪರಾಧ ನಡೆದ ಸ್ಥಳದ ಮರುಸೃಷ್ಟಿಗಾಗಿ ಆರೋಪಿಯನ್ನು ಕರೆದೊಯ್ಯಲಾಗಿತ್ತು. ಈ ವೇಳೆ ಆತ ಏಕಾಏಕಿ ಪೊಲೀಸ್ ಅಧಿಕಾರಿಯೊಬ್ಬರ ಸರ್ವಿಸ್ ರಿವಾಲ್ವರ್ ಕಸಿದುಕೊಂಡು ಪೊಲೀಸರ ಮೇಲೆ ಗುಂಡು ಹಾರಿಸಿದ್ದಾನೆ. ಇದಕ್ಕೆ ಪ್ರತಿಯಾಗಿ ಪೊಲೀಸರು ಗುಂಡು ಹಾರಿಸಿದ್ದಾರೆ.

ತಕ್ಷಣವೇ ಆರೋಪಿಯನ್ನು ಚಾಂದ್‌ಪಾರಾ ಗ್ರಾಮೀಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಆರೋಪಿಯು ಪೊಲೀಸ್ ಅಧಿಕಾರಿಯ ರಿವಾಲ್ವರ್ ಅನ್ನು ಹೇಗೆ ಕಸಿದುಕೊಳ್ಳಲು ಸಾಧ್ಯವಾಯಿತು ಮತ್ತು ಗುಂಡಿನ ದಾಳಿಗೆ ಕಾರಣವಾದ ಘಟನೆಗಳು ಯಾವ ರೀತಿಯಲ್ಲಿ ನಡೆದವು ಎಂಬುದರ ಕುರಿತು ತನಿಖೆ ನಡೆಸುವ ಸಾಧ್ಯತೆಯಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಆರೋಪಿ ನಡೆಸಿದ ದಾಳಿಯಲ್ಲಿ ಯಾವುದೇ ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿಲ್ಲ. ಆತ ಗುಂಡು ಹಾರಿಸಿದಾಗ ಪೊಲೀಸರು ಸಮೀಪದ ಕಾಲುವೆಯೊಂದರ ಬಳಿ ಆಶ್ರಯ ಪಡೆದಿದ್ದರು ಎಂದು ಮಾಹಿತಿ ನೀಡಿದ್ದಾರೆ.

The incident took place on Monday night in Gaighata, where he was taken for reconstruction of the crime.
ಅತ್ಯಾಚಾರ ಆರೋಪಿ ಜತೆ ನಂಟು: ಮಹಾರಾಷ್ಟ್ರ ಮಹಿಳಾ ಆಯೋಗದ ಅಧ್ಯಕ್ಷೆ ರೂಪಾಲಿ ಚಕಂಕರ್‌ ರಾಜೀನಾಮೆ

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಮೃತ ಆರೋಪಿಯ ಕುಟುಂಬದವರು ಆಸ್ಪತ್ರೆಗೆ ಆಗಮಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗೈಘಾಟಾ ಪ್ರದೇಶದಲ್ಲಿ ಭಾನುವಾರ ಬೆಳಿಗ್ಗೆ ನೆರೆಮನೆಯೊಂದರ ಹೊರಗೆ 17 ವರ್ಷದ ಬಾಲಕಿಯ ಮೃತದೇಹ ಪತ್ತೆಯಾಗಿತ್ತು. ಇದರಂತೆ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಆರೋಪದ ಮೇಲೆ ಯುವಕನನ್ನು ಬಂಧಿಸಲಾಗಿತ್ತು.

ಬಾಲಕಿ ಶನಿವಾರ ರಾತ್ರಿ ಮನೆಯ ಸಮೀಪ ನಡೆದ ಸಂಗೀತ ಕಾರ್ಯಕ್ರಮಕ್ಕೆ ತೆರಳಿದ್ದಳು. ಕಾರ್ಯಕ್ರಮದ ಸ್ಥಳದಿಂದ ಆಕೆಗೆ ದೂರವಾಣಿ ಕರೆ ಬಂದ ಹಿನ್ನೆಲೆಯಲ್ಲಿ ಹೊರಟುಹೋದಳು. ಆದರೆ, ಆ ರಾತ್ರಿ ಮನೆಗೆ ಮರಳಿರಲಿಲ್ಲ.

ಪಶ್ಚಿಮ ಬಂಗಾಳದಲ್ಲಿ ಕಳೆದ ಮೂರು ತಿಂಗಳ ಅವಧಿಯಲ್ಲಿ ಅಪರಾಧ ನಡೆದ ಸ್ಥಳದ ಮರುಸೃಷ್ಟಿ ವೇಳೆ ಪೊಲೀಸರಿಂದ ಬಂದೂಕು ಕಸಿದುಕೊಂಡು ತಪ್ಪಿಸಿಕೊಳ್ಳಲು ಯತ್ನಿಸಿದ ಅತ್ಯಾಚಾರ ಆರೋಪಿಯೊಬ್ಬ ಪೊಲೀಸ್ ಗುಂಡಿನ ದಾಳಿಯಲ್ಲಿ ಮೃತಪಟ್ಟಿರುವುದು ಇದು ಎರಡನೇ ಘಟನೆಯಾಗಿದೆ.

ಜುಲೈನಲ್ಲಿ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 11 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ಆರೋಪಿ ಕೂಡ ಇದೇ ರೀತಿಯ ಘಟನೆಯಲ್ಲಿ ಮೃತಪಟ್ಟಿದ್ದ.

ಅಪರಾಧ ನಡೆದ ಸ್ಥಳದ ಮರುಸೃಷ್ಟಿ ವೇಳೆ ಪೊಲೀಸ್ ಅಧಿಕಾರಿಯ ರಿವಾಲ್ವರ್ ಕಸಿದುಕೊಂಡು ಸಿಬ್ಬಂದಿಯ ಮೇಲೆ ಗುಂಡು ಹಾರಿಸಿದ್ದ ಎಂದು ಆರೋಪಿಸಲಾಗಿತ್ತು. ಈ ವೇಳೆ ಪೊಲೀಸರು ನಡೆಸಿದ ಪ್ರತಿದಾಳಿಯಲ್ಲಿ ಆತ ಮೃತಪಟ್ಟಿದ್ದ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com