ಗರ್ಭಿಣಿ ಪತ್ರಕರ್ತೆಯನ್ನು'ತಳ್ಳಿದ' ಆರೋಪ: ರಾಹುಲ್ ಗಾಂಧಿಯಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್!

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜಾಯ್ಮಾಲ್ಯ ಬಾಗ್ಚಿ ಅವರನ್ನೊಳಗೊಂಡ ನ್ಯಾಯಪೀಠ, ರಾಹುಲ್ ಗಾಂಧಿ ಮತ್ತಿತರ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.
Supreme Court- Rahul Gandhi
ಸುಪ್ರೀಂ ಕೋರ್ಟ್-ರಾಹುಲ್ ಗಾಂಧಿ
Updated on: 

ನವದೆಹಲಿ: ಅಕ್ಟೋಬರ್ 12 ರಂದು ಉನ್ನತ ನ್ಯಾಯಾಲಯ ಕಡೆಗೆ ಪ್ರತಿಭಟನೆ ಸಾಗುತ್ತಿದ್ದಾಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಗರ್ಭಿಣಿ ಪತ್ರಕರ್ತೆಯೊಬ್ಬರನ್ನು ತಳ್ಳಿದ್ದಾರೆ ಎಂದು ಆರೋಪಿಸಿ ಸಲ್ಲಿಸಲಾದ ಅರ್ಜಿಯೊಂದಕ್ಕೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಮಂಗಳವಾರ ರಾಹುಲ್ ಗಾಂಧಿ ಮತ್ತಿತರಿಂದ ಪ್ರತಿಕ್ರಿಯೆ ಕೇಳಿದೆ.

ಹಿರಿಯ ವಕೀಲ ಗೌರವ್ ಭಾಟಿಯಾ ಅವರು ಈ ವಿಷಯವನ್ನು ನ್ಯಾಯಪೀಠದ ಗಮನಕ್ಕೆ ತಂದ ನಂತರ, ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜಾಯ್ಮಾಲ್ಯ ಬಾಗ್ಚಿ ಅವರನ್ನೊಳಗೊಂಡ ನ್ಯಾಯಪೀಠ, ರಾಹುಲ್ ಗಾಂಧಿ ಮತ್ತಿತರ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.

ನ್ಯಾಯಾಲಯದ ಆವರಣದಲ್ಲಿ ಮಹಿಳಾ ಪತ್ರಕರ್ತೆಯೊಬ್ಬರೊಂದಿಗೆ ಅಸಭ್ಯವಾಗಿ ವರ್ತಿಸಲಾಗಿದೆ (ದೈಹಿಕವಾಗಿ ತಳ್ಳಾಡಲಾಗಿದೆ) ಎಂದು ಭಾಟಿಯಾ ನ್ಯಾಯಪೀಠಕ್ಕೆ ತಿಳಿಸಿದರು. ಈ ಸಂಬಂಧ ಈಗಾಗಲೇ ಬಾಕಿ ಇರುವ ಅರ್ಜಿಯೊಂದರಲ್ಲಿ ಹೊಸದಾಗಿ ಮನವಿಯೊಂದನ್ನು ಸಲ್ಲಿಸಲಾಗಿದೆ ಎಂದು ಅವರು ಹೇಳಿದರು.

ಅರ್ಜಿಯಲ್ಲಿ ಉಲ್ಲೇಖಿಸಿರುವಂತೆ, ರಾಹುಲ್ ಗಾಂಧಿ, ಪತ್ರಕರ್ತೆಯನ್ನು ಗೇಟ್‌ನತ್ತ ಬಲವಾಗಿ ತಳ್ಳಿದ ಪರಿಣಾಮ ಅವರು ಸಮತೋಲನ ಕಳೆದುಕೊಂಡು ಬಿದ್ದುಹೋದರು. ಬೀಳುವಾಗ ತಮ್ಮ ಕೈಗಳನ್ನು ಊರಿ ತಡೆಹಿಡಿದುಕೊಂಡರು. ಭದ್ರತಾ ಸಿಬ್ಬಂದಿ, ಪತ್ರಕರ್ತರು ಮತ್ತಿತರರು ನೋಡುತ್ತಿರುವಂತೆಯೇ, ಜನಸಂದಣಿ ಹೆಚ್ಚಿದ್ದ ಸ್ಥಳದಲ್ಲಿ ಈ ಘಟನೆ ನಡೆದಿದೆ. ಮಹಿಳೆ ತಡೆಯುವಂತೆ ಕೋರಿಕೊಂಡಿದ್ದರೂ ಈ ಘಟನೆ ನಡೆದಿದ್ದು, ಇದು ಕೇವಲ ಜನಸಂದಣಿಯಲ್ಲಿ ಉಂಟಾದ ನೂಕುನುಗ್ಗಲಿನ ಪರಿಣಾಮವಲ್ಲ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಈ ಹಲ್ಲೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ರಾಹುಲ್ ಗಾಂಧಿ ಮತ್ತಿತರ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸಲು ನಿರ್ದೇಶನ ನೀಡುವಂತೆ ಹಾಗೂ ಪರಿಹಾರ ಒದಗಿಸುವಂತೆ ಈ ಅರ್ಜಿಯಲ್ಲಿ ಕೋರಲಾಗಿದೆ.

ಅಕ್ಟೋಬರ್ 16 ರಂದೇ ಭಾಟಿಯಾ ಅವರು ಈ ವಿಷಯವನ್ನು ನ್ಯಾಯಪೀಠದ ಮುಂದೆ ಪ್ರಸ್ತಾಪಿಸಿದ್ದರು. ಸುಪ್ರೀಂ ಕೋರ್ಟ್ ಆವರಣದಲ್ಲಿ ರಾಹುಲ್ ಗಾಂಧಿ ತಳ್ಳಿದ ಪರಿಣಾಮ ಮೂರು ತಿಂಗಳ ಗರ್ಭಿಣಿಯಾಗಿದ್ದ ಪತ್ರಕರ್ತೆ ಆಸ್ಪತ್ರೆಗೆ ದಾಖಲಾಗಬೇಕಾಯಿತು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸುವಂತೆ ಅವರು ನ್ಯಾಯಾಲಯವನ್ನು ಕೋರಿದ್ದರು.

Supreme Court- Rahul Gandhi
ಗರ್ಭಿಣಿ ಪತ್ರಕರ್ತೆಯನ್ನು ತಳ್ಳಿದ ಆರೋಪ: ರಾಹುಲ್ ಗಾಂಧಿ ವಿರುದ್ಧ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ

ಅಕ್ಟೋಬರ್ 12 ರಂದು, ಮತದಾರರ ಪಟ್ಟಿಯಿಂದ ದೊಡ್ಡ ಪ್ರಮಾಣದಲ್ಲಿ ಹೆಸರುಗಳನ್ನು ಕೈಬಿಟ್ಟಿರುವ ಆರೋಪ ಮತ್ತು ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣಾ ಪ್ರಕ್ರಿಯೆಯಲ್ಲಿ (Special Intensive Revision - SIR) ನಡೆದಿರುವ ಅಕ್ರಮಗಳ ಕುರಿತು ಅರ್ಜಿ ಸಲ್ಲಿಸಲು ರಾಹುಲ್ ಗಾಂಧಿ ಅವರು ವಿರೋಧ ಪಕ್ಷದ ಪ್ರಮುಖ ನಾಯಕರು ಮತ್ತು ಅವರ ಬೆಂಬಲಿಗರೊಂದಿಗೆ ಸುಪ್ರೀಂ ಕೋರ್ಟ್‌ಗೆ ಆಗಮಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com