SIR ವಿವಾದ: ECI ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು ಅರ್ಜಿದಾರರಿಗೆ 10 ದಿನಗಳ ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್..!

ಎಸ್‌ಐಆರ್‌ಗೆ ಸಂಬಂಧಿಸಿದ ನಿರ್ಧಾರಗಳು ಮತ್ತು ಆದೇಶಗಳ ಕುರಿತು ಚುನಾವಣಾ ಆಯುಕ್ತರಾದ ಸುಖ್ಬೀರ್ ಸಿಂಗ್ ಸಂಧು ಹಾಗೂ ವಿವೇಕ್ ಜೋಶಿ ಅವರು 10 ತಿಂಗಳ ಅವಧಿಯಲ್ಲಿ ಕನಿಷ್ಠ 14 ಆಕ್ಷೇಪಗಳನ್ನು ದಾಖಲಿಸಿದ್ದರು.
Chief Election Commissioner Gyanesh Kumar, Election commissioners Sukhbir Singh Sandhu and Vivek Joshi.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ.
Updated on: 

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ಸಮರ್ಥಿಸಿಕೊಂಡು ಚುನಾವಣಾ ಆಯೋಗ ಸಲ್ಲಿಸಿರುವ ಅಫಿಡವಿಟ್‌ಗೆ ಪ್ರತಿಕ್ರಿಯೆಯಾಗಿ ಮರುಹೇಳಿಕೆ ಸಲ್ಲಿಸಲು ಅರ್ಜಿದಾರರಿಗೆ ಸುಪ್ರೀಂ ಕೋರ್ಟ್ ಮಂಗಳವಾರ 10 ದಿನಗಳ ಕಾಲಾವಕಾಶ ನೀಡಿದೆ.

ಎಸ್‌ಐಆರ್‌ ಪ್ರಕ್ರಿಯೆಗೆ ಕಾನೂನುಬದ್ಧ ಅನುಮತಿ ಇದೆ ಮತ್ತು ಚುನಾವಣಾ ಆಯೋಗದ ಮೂವರು ಸದಸ್ಯರೂ ಸರ್ವಾನುಮತದಿಂದ ಸಂಬಂಧಿತ ಆದೇಶಗಳಿಗೆ ಅನುಮೋದನೆ ನೀಡಿದ್ದಾರೆ ಎಂದು ಆಯೋಗ ತನ್ನ ಅಫಿಡವಿಟ್‌ನಲ್ಲಿ ಪ್ರತಿಪಾದಿಸಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಮತ್ತು ವಿ. ಮೊಹನಾ ಅವರನ್ನೊಳಗೊಂಡ ಪೀಠವು, ಬಿಹಾರದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ನಡೆಯುವ ವೇಳೆ ಸುಪ್ರೀಂ ಕೋರ್ಟ್‌ನ ಅನುಮೋದನೆಯಿಲ್ಲದೆ ಮತದಾರರ ನೋಂದಣಿಗೆ ಬಳಸುವ ನಮೂನೆ-6ರಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಆರೋಪಿಸಿ ರಾಜ್ಯಸಭಾ ಸದಸ್ಯೆ ದೋಲಾ ಸೇನ್ ಸಲ್ಲಿಸಿರುವ ಹೊಸ ಅರ್ಜಿಯ ವಿಚಾರವಾಗಿ ಚುನಾವಣಾ ಆಯೋಗ ಸೇರಿದಂತೆ ಸಂಬಂಧಪಟ್ಟವರಿಗೆ ನೋಟಿಸ್ ಜಾರಿಗೊಳಿಸಿದೆ.

ದೋಲಾ ಸೇನ್ ಪರವಾಗಿ ಹಾಜರಾದ ಹಿರಿಯ ವಕೀಲೆ ಮನೇಕಾ ಗುರುಸ್ವಾಮಿ, ನಮೂನೆ-6ರಲ್ಲಿನ ಬದಲಾವಣೆಗಳಿಗೆ ಸುಪ್ರೀಂ ಕೋರ್ಟ್ ಅನುಮೋದನೆ ನೀಡಿದೆ ಎಂದು ಚುನಾವಣಾ ಆಯೋಗ ತಪ್ಪಾಗಿ ಹೇಳಿಕೊಂಡಿದೆ ಎಂದು ಪೀಠದ ಗಮನಕ್ಕೆ ತಂದರು.

ಈ ವೇಳೆ ಮುಖ್ಯ ನ್ಯಾಯಮೂರ್ತಿಗಳು ಎಲ್ಲ ಅಂಶಗಳನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದರು. ಸೋಮವಾರ ತಡರಾತ್ರಿ ಚುನಾವಣಾ ಆಯೋಗ ಸಲ್ಲಿಸಿದ ಪ್ರತಿಕ್ರಿಯೆಗೆ ಮರುಹೇಳಿಕೆ ಸಲ್ಲಿಸುವಂತೆ ಮೊದಲ ಅರ್ಜಿದಾರ ರಾಕೇಶ್ ಕುಮಾರ್ ಸಿಂಗ್ ಪರ ಹಾಜರಾದ ಹಿರಿಯ ವಕೀಲ ವಿಕಾಸ್ ಸಿಂಗ್ ಅವರಿಗೆ ಪೀಠ ನಿರ್ದೇಶನ ನೀಡಿತು.

Chief Election Commissioner Gyanesh Kumar, Election commissioners Sukhbir Singh Sandhu and Vivek Joshi.
SIR ವಿವಾದದ ಬೆನ್ನಲ್ಲೇ SSR ಘೋಷಿಸಿದ ಚುನಾವಣಾ ಆಯೋಗ: 17 ರಾಜ್ಯಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ; ಕರ್ನಾಟಕದ ಕಥೆಯೇನು?

ಉಪ ಚುನಾವಣಾ ಆಯುಕ್ತ ಭಾನು ಪ್ರಕಾಶ್ ಯೆಟೂರು ಅವರ ಮೂಲಕ ಸಲ್ಲಿಸಲಾದ 248 ಪುಟಗಳ ಅಫಿಡವಿಟ್‌ನಲ್ಲಿ, ಮತದಾರರ ನೋಂದಣಿಗೆ ಬಳಸುವ ನಮೂನೆ-6ಕ್ಕೆ ತಿದ್ದುಪಡಿ ಮಾಡಲಾಗಿದೆ ಎಂಬ ಆರೋಪವನ್ನು ಚುನಾವಣಾ ಆಯೋಗ ತಳ್ಳಿಹಾಕಿದೆ. ಕಾನೂನಿನಲ್ಲಿ ನಿಗದಿಪಡಿಸಿರುವ ನಮೂನೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಅದು ಸ್ಪಷ್ಟಪಡಿಸಿದೆ.

ಚುನಾವಣಾ ಆಯೋಗದ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡುವ ಪ್ರಯತ್ನ ದುರದೃಷ್ಟಕರ” ಎಂದು ಅಫಿಡವಿಟ್‌ನಲ್ಲಿ ಹೇಳಲಾಗಿದೆ.

ಈ ಅಫಿಡವಿಟ್ ಸಲ್ಲಿಸುವ ನಿರ್ಧಾರಕ್ಕೆ ಮೂವರು ಚುನಾವಣಾ ಆಯುಕ್ತರೂ ಸರ್ವಾನುಮತದಿಂದ ಅನುಮೋದನೆ ನೀಡಿದ್ದಾರೆ ಎಂದೂ ಆಯೋಗ ತಿಳಿಸಿದೆ.

ಎಸ್‌ಐಆರ್‌ಗೆ ಸಂಬಂಧಿಸಿದ ನಿರ್ಧಾರಗಳು ಮತ್ತು ಆದೇಶಗಳ ಕುರಿತು ಚುನಾವಣಾ ಆಯುಕ್ತರಾದ ಸುಖ್ಬೀರ್ ಸಿಂಗ್ ಸಂಧು ಹಾಗೂ ವಿವೇಕ್ ಜೋಶಿ ಅವರು 10 ತಿಂಗಳ ಅವಧಿಯಲ್ಲಿ ಕನಿಷ್ಠ 14 ಆಕ್ಷೇಪಗಳನ್ನು ದಾಖಲಿಸಿದ್ದರು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ಸೆಪ್ಟೆಂಬರ್ 25ರಂದು ವರದಿ ಮಾಡಿತ್ತು. ತಮ್ಮ ಗಮನಕ್ಕೆ ತರದೆ ಅಥವಾ ಶಿಫಾರಸು ಪಡೆಯದೆ ಕೆಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂಬ ಆಕ್ಷೇಪಗಳು ದಾಖಲಾಗಿದ್ದವು ಎಂದು ವರದಿ ತಿಳಿಸಿತ್ತು.

ಈ ವರದಿಯ ಬಳಿಕ ಪ್ರತಿಪಕ್ಷಗಳು ಮತ್ತು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರತಿಭಟನೆ ನಡೆಸಿದ್ದವು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತೆಗೆದುಹಾಕಬೇಕು ಎಂದು ಆಗ್ರಹಿಸಿದ್ದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com