

ನವದೆಹಲಿ: ಕೇಂದ್ರ ಸರ್ಕಾರ ದೀಪಾವಳಿ ಹಬ್ಬಕ್ಕೂ ಮುನ್ನವೇ ತನ್ನ ನೌಕರರಿಗೆ ಭರ್ಜರಿ ಗಿಫ್ಟ್ ನೀಡಿದ್ದು, ತುಟ್ಟಿಭತ್ಯೆ (DA)ಯನ್ನು ಶೇಕಡಾ ಮೂರರಷ್ಟು ಹೆಚ್ಚಿಸಲು ಅನುಮೋದನೆ ನೀಡಿದೆ.
ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ. 3ರಷ್ಟು ಹೆಚ್ಚಳ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಬುಧವಾರ ತಿಳಿಸಿದ್ದಾರೆ.
ಈ ಪರಿಷ್ಕೃತ ತುಟ್ಟಿಭತ್ಯೆಯು 2026ರ ಜುಲೈ 1ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೆ ಬರಲಿದೆ ಎಂದು ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
ಕೇಂದ್ರ ಸರ್ಕಾರದ ಈ ಹೊಸ ನಿರ್ಧಾರದಿಂದಾಗಿ ನೌಕರರ ತುಟ್ಟಿಭತ್ಯೆಯು ಮೂಲ ವೇತನದ (Basic Pay) ಶೇ. 60ರಿಂದ ಶೇ. 63ಕ್ಕೆ ಏರಿಕೆಯಾಗಿದೆ. ಇದೇ ರೀತಿ ಪಿಂಚಣಿದಾರರಿಗೆ ನೀಡಲಾಗುವ ತುಟ್ಟಿ ಪರಿಹಾರದಲ್ಲೂ (DR – Dearness Relief) ಅನುರೂಪವಾದ ಹೆಚ್ಚಳವಾಗಲಿದೆ. ಈ ತುಟ್ಟಿಭತ್ಯೆ ಏರಿಕೆಯಿಂದ ಸರ್ಕಾರಕ್ಕೆ ಹೆಚ್ಚುವರಿಯಾಗಿ 10,016 ಕೋಟಿ ರೂ ವ್ಯಯವಾಗಲಿದೆ.
ಕೇಂದ್ರ ಸರ್ಕಾರವು ವರ್ಷಕ್ಕೆ ಎರಡು ಬಾರಿ ಡಿಎ ಹೆಚ್ಚಳವನ್ನು ಘೋಷಿಸುತ್ತದೆ. ಪ್ರತಿ ವರ್ಷ ಜನವರಿ ಮತ್ತು ಜುಲೈ ತಿಂಗಳಲ್ಲಿ ಡಿಎ ಹೆಚ್ಚಳ ಮಾಡುತ್ತದೆ. ಸಾಮಾನ್ಯವಾಗಿ ಹೋಳಿ ಅಥವಾ ದೀಪಾವಳಿಯಂತಹ ಹಬ್ಬಗಳ ಸಮಯದಲ್ಲಿ ಕೇಂದ್ರ ಸರ್ಕಾರ, ತನ್ನ ನೌಕರರಿಗೆ ಸಹಿ ಸುದ್ದಿ ನೀಡುತ್ತದೆ.