'ಕೃಷಿ ನಮ್ಮ ಸಂಸ್ಕೃತಿ, ಅದನ್ನು ತಂತ್ರಜ್ಞಾನದೊಂದಿಗೆ ಬೆಸೆದಿದ್ದೇವೆ': ಪ್ರಧಾನಿ ಮೋದಿ; Video

ಗುಜರಾತ್‌ನ ಬನಸ್ಕಾಂಠಾದಲ್ಲಿ ಸಾರ್ವಜನಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಪಶುಸಂಗೋಪನೆಯು ನಮ್ಮ ಗ್ರಾಮೀಣ ಆರ್ಥಿಕತೆಯ ಪ್ರಮುಖ ಭಾಗವಾಗಿದೆ ಎಂದರು.
PM Narendra Modi
ಪ್ರಧಾನಿ ನರೇಂದ್ರ ಮೋದಿ (ಕೃಪೆ: ಕೇಂದ್ರ ಕೃಷಿ ಇಲಾಖೆಯ ಸೋಷಿಯಲ್ ಮೀಡಿಯಾ ಪೋಸ್ಟ್ ಫೋಟೋ)
Updated on: 

‘ಕೃಷಿ ನಮ್ಮ ಸಂಸ್ಕೃತಿ. ಕೃಷಿ ಮತ್ತು ಪಶುಸಂಗೋಪನೆಯನ್ನು ತಂತ್ರಜ್ಞಾನದೊಂದಿಗೆ ಬೆಸೆದಿದ್ದೇವೆ. ಇಂದು ರೈತರು 26 ಕೋಟಿಗೂ ಹೆಚ್ಚು ಮಣ್ಣಿನ ಆರೋಗ್ಯ ಕಾರ್ಡ್‌ಗಳನ್ನು ಪಡೆದುಕೊಂಡಿದ್ದಾರೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಗುಜರಾತ್‌ನ ಬನಸ್ಕಾಂಠಾದಲ್ಲಿ ಸಾರ್ವಜನಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಪಶುಸಂಗೋಪನೆಯು ನಮ್ಮ ಗ್ರಾಮೀಣ ಆರ್ಥಿಕತೆಯ ಪ್ರಮುಖ ಭಾಗವಾಗಿದೆ. ಈ ಕ್ಷೇತ್ರದಲ್ಲಿ ನಮ್ಮ ಸಹೋದರಿಯರ ಪಾಲ್ಗೊಳ್ಳುವಿಕೆ ಅತ್ಯಂತ ಮಹತ್ವದ್ದಾಗಿದೆ. ಕಳೆದ ಒಂದು ದಶಕದಲ್ಲಿ ಪಶುಸಂಗೋಪನೆ ಮತ್ತು ಹೈನುಗಾರಿಕೆ ಕ್ಷೇತ್ರಗಳಲ್ಲಿಯೂ ವಿಜ್ಞಾನ ಮತ್ತು ತಂತ್ರಜ್ಞಾನದ ಬಳಕೆಗೆ ಹೆಚ್ಚಿನ ಒತ್ತು ನೀಡಿದ್ದೇವೆ’ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X