CEC ಜ್ಞಾನೇಶ್ ಕುಮಾರ್ ವಿರುದ್ಧ INDIA ಒಕ್ಕೂಟ ಹೊಸ ಅಸ್ತ್ರ; ‘ಸಾರ್ವಜನಿಕ ದೋಷಾರೋಪಣೆ’ಗೆ ಸಜ್ಜು; ಇಂದು ಖರ್ಗೆ ನಿವಾಸದಲ್ಲಿ ಮಹತ್ವದ ಸಭೆ

ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಜ್ಞಾನೇಶ್ ಕುಮಾರ್ ವಿರುದ್ಧ ಮಹಾಭಿಯೋಗ ನಿರ್ಣಯವನ್ನು ಮಂಡಿಸಲಿದ್ದಾರೆ.
meeting of INDIA bloc leaders at Leader of Opposition in Rajya Sabha Mallikarjun Kharge's residence, in New Delhi
ದೆಹಲಿದಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ನಾಯಕರ ಸಭೆ
Updated on: 

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ವಿರುದ್ಧ ‘ಸಾರ್ವಜನಿಕ ಮಹಾಭಿಯೋಗ ನಿರ್ಣಯ’ ಅಥವಾ ಸಾರ್ವಜನಿಕ ದೋಷಾರೋಪಣೆ (Public Impeachment) ಪ್ರಕ್ರಿಯೆಯನ್ನು ಇಂದು ಶುಕ್ರವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧಿಕೃತ ನಿವಾಸದಲ್ಲಿ ಮೂರು ಗಂಟೆಗಳ ಕಾಲ ನಡೆಸಲು ‘ಇಂಡಿಯಾ’ ಮೈತ್ರಿಕೂಟ ನಿರ್ಧರಿಸಿದೆ. ಲೋಕಸಭೆ ಮಾಜಿ ಸ್ಪೀಕರ್ ಮೀರಾ ಕುಮಾರ್ ಅವರು ಈ ಪ್ರಕ್ರಿಯೆಯ ಅಧ್ಯಕ್ಷತೆ ವಹಿಸಲಿದ್ದಾರೆ.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಜ್ಞಾನೇಶ್ ಕುಮಾರ್ ವಿರುದ್ಧ ಮಹಾಭಿಯೋಗ ನಿರ್ಣಯವನ್ನು ಮಂಡಿಸಲಿದ್ದಾರೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಚರ್ಚೆಯ ಕೊನೆಯಲ್ಲಿ ಸಮಾರೋಪ ಭಾಷಣ ಮಾಡಲಿದ್ದಾರೆ. ಬಳಿಕ ಮತದಾನದ ಮೂಲಕ ‘ಮಹಾಭಿಯೋಗ ನಿರ್ಣಯ’ವನ್ನು ಅಂಗೀಕರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ನಿನ್ನೆ ಗುರುವಾರ ದೆಹಲಿಯ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ‘ಇಂಡಿಯಾ’ ಮೈತ್ರಿಕೂಟದ ನಾಯಕರ ಸಭೆಯಲ್ಲಿ ‘ಸಾರ್ವಜನಿಕ ಮಹಾಭಿಯೋಗ’ ಪ್ರಕ್ರಿಯೆಯ ರೂಪುರೇಷೆಗಳನ್ನು ಅಂತಿಮಗೊಳಿಸಲಾಯಿತು.

meeting of INDIA bloc leaders at Leader of Opposition in Rajya Sabha Mallikarjun Kharge's residence, in New Delhi
CEC ವಿರುದ್ಧ ಇಂಡಿಯಾ ಒಕ್ಕೂಟದಿಂದ 'ಸಾರ್ವಜನಿಕ ದೋಷಾರೋಪಣೆ': ಮಾಜಿ ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಅಧ್ಯಕ್ಷತೆ!

ಸಭೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯಾಂಕಾ ಗಾಂಧಿ ವಾದ್ರಾ, ಜೈರಾಮ್ ರಮೇಶ್ ಮತ್ತು ಕೆ.ಸಿ. ವೇಣುಗೋಪಾಲ್, ಲೋಕಸಭೆ ಮಾಜಿ ಸ್ಪೀಕರ್ ಮೀರಾ ಕುಮಾರ್, ಸಿಪಿಎಂ ಸಂಸದ ಜಾನ್ ಬ್ರಿಟ್ಟಾಸ್, ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒ'ಬ್ರಿಯಾನ್, ಸಮಾಜವಾದಿ ಪಕ್ಷದ ಹರೇಂದ್ರ ಮಲಿಕ್ ಹಾಗೂ ಜಾರ್ಖಂಡ್ ಮುಕ್ತಿ ಮೋರ್ಚಾದ ಮಹುವಾ ಮಾಜಾ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.

21 ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಸೇರಿದಂತೆ ಕನಿಷ್ಠ 30 ಮಂದಿ ಈ ಕಾರ್ಯಕ್ರಮದಲ್ಲಿ ಮಾತನಾಡುವ ನಿರೀಕ್ಷೆಯಿದೆ. ಬಿಜು ಜನತಾ ದಳಕ್ಕೂ (BJD) ಆಹ್ವಾನ ನೀಡಲಾಗಿದ್ದು, ಆ ಪಕ್ಷವು ತನ್ನ ಭಾಗವಹಿಸುವಿಕೆಯನ್ನು ಇನ್ನೂ ಖಚಿತಪಡಿಸಿಲ್ಲ ಎಂದು ಮೂಲಗಳು ತಿಳಿಸಿವೆ.

ನಾಗರಿಕ ಸಮಾಜದ ಪ್ರತಿನಿಧಿಗಳು ಹಾಗೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ತೊಂದರೆಗೊಳಗಾದವರು ಕೂಡ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಮತಗಳ್ಳತನದ ಆರೋಪ ಹಾಗೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ವಿರೋಧಿಸಿ ಪ್ರತಿಪಕ್ಷಗಳು ನವೆಂಬರ್ 1ರಂದು ದೆಹಲಿಯಲ್ಲಿ ಬೃಹತ್ ಸಮಾವೇಶ ನಡೆಸಲು ಸಿದ್ಧತೆ ನಡೆಸಿವೆ. ಈ ಸಮಾವೇಶಕ್ಕೂ ಮುನ್ನ ಸಾಂಕೇತಿಕವಾಗಿ ‘ಸಾರ್ವಜನಿಕ ಮಹಾಭಿಯೋಗ’ ಪ್ರಕ್ರಿಯೆಯನ್ನು ಹಮ್ಮಿಕೊಳ್ಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X