ಆಂಧ್ರಪ್ರದೇಶದ ಈ ಗ್ರಾಮದ ಜನತೆಗೆ ಇನ್ನೂ ಸಿಕ್ಕಿಲ್ಲ ರಸ್ತೆ ಭಾಗ್ಯ: ಗರ್ಭಿಣಿಯನ್ನು 3 ಕಿ.ಮೀ. ದೂರ ಸ್ಟ್ರೆಚರ್‌ನಲ್ಲಿ ಹೊತ್ತೊಯ್ದ ಗ್ರಾಮಸ್ಥರು; Video

ಕಿಲ್ಲೊ ನೀಲಿಮಾ ಎಂಬ ಮಹಿಳೆಗೆ ತುರ್ತು ವೈದ್ಯಕೀಯ ಚಿಕಿತ್ಸೆ ಅಗತ್ಯವಿತ್ತು. ಆದರೆ ಗ್ರಾಮಕ್ಕೆ ರಸ್ತೆ ಸಂಪರ್ಕವಿಲ್ಲದ ಕಾರಣ ಆಂಬ್ಯುಲೆನ್ಸ್ ತಲುಪಲು ಸಾಧ್ಯವಾಗಿರಲಿಲ್ಲ.
Stretcher carried pregnant woman
ಸ್ಚ್ರೆಚರ್ ನಲ್ಲಿ ಕರೆದೊಯ್ಯುತ್ತಿರುವುದು
Updated on: 

ಆಂಧ್ರಪ್ರದೇಶದ ಅಲ್ಲೂರಿ ಜಿಲ್ಲೆಯ ತಲಾರಿಪಾಡು ಗ್ರಾಮದ ಗರ್ಭಿಣಿಯನ್ನು ಆಸ್ಪತ್ರೆಗೆ ಸ್ಟ್ರೆಚರ್ ನಲ್ಲಿ ನಾಲ್ಕು ಮಂದಿ ಹೊತ್ತುಕೊಂಡು ಕರೆದುಕೊಂಡು ಹೋಗುತ್ತಿರುವ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಕಿಲ್ಲೊ ನೀಲಿಮಾ ಎಂಬ ಮಹಿಳೆಗೆ ತುರ್ತು ವೈದ್ಯಕೀಯ ಚಿಕಿತ್ಸೆ ಅಗತ್ಯವಿತ್ತು. ಆದರೆ ಗ್ರಾಮಕ್ಕೆ ರಸ್ತೆ ಸಂಪರ್ಕವಿಲ್ಲದ ಕಾರಣ ಆಂಬ್ಯುಲೆನ್ಸ್ ತಲುಪಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಸ್ಥಳೀಯರು ಕೋಲು ಮತ್ತು ಬಟ್ಟೆ ಬಳಸಿ ತಾತ್ಕಾಲಿಕ ಸ್ಟ್ರೆಚರ್ ಸಿದ್ಧಪಡಿಸಿ, ಗರ್ಭಿಣಿಯನ್ನು ಸುಮಾರು 3 ಕಿ.ಮೀ. ದೂರದ ಬೊಡ್ಡಪಾಡು ಗ್ರಾಮದವರೆಗೆ ಹೊತ್ತೊಯ್ದರು. ಅಲ್ಲಿ ವಾಹನದ ಮೂಲಕ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವ್ಯವಸ್ಥೆ ಮಾಡಲಾಯಿತು.

ಬುಡಕಟ್ಟು ಸಮುದಾಯದ ಜನರು ವಾಸಿಸುವ ಈ ಗ್ರಾಮದಲ್ಲಿ ಹಲವು ವರ್ಷಗಳ ಹಿಂದೆಯೇ ರಸ್ತೆ ನಿರ್ಮಾಣ ಯೋಜನೆಗೆ ಅನುಮೋದನೆ ದೊರೆತಿದ್ದರೂ, ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಇದರಿಂದ ಗ್ರಾಮಸ್ಥರು ನಿರಂತರವಾಗಿ ಸಂಪರ್ಕ ವ್ಯವಸ್ಥೆಯ ಸಮಸ್ಯೆ ಎದುರಿಸುತ್ತಿದ್ದಾರೆ.

ಗರ್ಭಿಣಿಯನ್ನು ಗ್ರಾಮಸ್ಥರು ಹೊತ್ತೊಯ್ಯುತ್ತಿರುವ ದೃಶ್ಯಗಳ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ದೂರದ ಪ್ರದೇಶಗಳಲ್ಲಿ ರಸ್ತೆ ಮತ್ತು ಆರೋಗ್ಯ ಸೇವೆಗಳ ಮೂಲಸೌಕರ್ಯ ಸುಧಾರಿಸಬೇಕೆಂಬ ಒತ್ತಾಯ ಕೇಳಿಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X