ಅಸ್ಸಾಂ ಹಾರರ್: ಪತ್ನಿ, ಮೂವರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಶಿಕ್ಷಕ!

ಇಂದು ಬೆಳಗ್ಗೆ ಜೋನೈನ ತೆಲಮ್ ಬಜಾರ್ ಪ್ರದೇಶದಲ್ಲಿ ಈ ಭೀಕರ ಹತ್ಯೆಗಳು ನಡೆದಿದ್ದು, ಶಿಕ್ಷಕ, ತನ್ನ ಪತ್ನಿ ಮತ್ತು ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಕುಟುಂಬದ ನಾಲ್ವರು ಸದಸ್ಯರ ಮೇಲೆ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.
School Teacher Kills Wife, 3 Minor Children With Machete In Assam, Arrested
ಸ್ಥಳದಲ್ಲಿ ಪೊಲೀಸರು
Updated on

ಧೇಮಾಜಿ: ಅಸ್ಸಾಂನ ಧೇಮಾಜಿ ಜಿಲ್ಲೆಯ ಜೋನೈನಲ್ಲಿ ಬುಧವಾರ ಶಾಲಾ ಶಿಕ್ಷಕನೊಬ್ಬ ತನ್ನ ಪತ್ನಿ ಮತ್ತು ಮೂವರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಶಿಕ್ಷಕನನ್ನು 55 ವರ್ಷದ ಫಿರೋಜ್ ಅಲಿ ಎಂದು ಗುರುತಿಸಲಾಗಿದ್ದು, ಪೊಲೀಸರು ಬಂಧಿಸಿದ್ದಾರೆ.

ಇಂದು ಬೆಳಗ್ಗೆ ಜೋನೈನ ತೆಲಮ್ ಬಜಾರ್ ಪ್ರದೇಶದಲ್ಲಿ ಈ ಭೀಕರ ಹತ್ಯೆಗಳು ನಡೆದಿದ್ದು, ಶಿಕ್ಷಕ, ತನ್ನ ಪತ್ನಿ ಮತ್ತು ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಕುಟುಂಬದ ನಾಲ್ವರು ಸದಸ್ಯರ ಮೇಲೆ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.

School Teacher Kills Wife, 3 Minor Children With Machete In Assam, Arrested
ಹುಬ್ಬಳ್ಳಿ: ಹಾಡಹಗಲೇ ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ; ಭಯಾನಕ ವಿಡಿಯೋ ವೈರಲ್‌

ಮೃತರನ್ನು ಚಿನುವಾರಾ ಬೇಗಂ(33), ನೀನಾ ಅಖ್ತರ್(13), ಸಖಿಲ್ ಅಲಿ (8) ಮತ್ತು ರಿಜಿಕಾ (5) ಎಂದು ಗುರುತಿಸಲಾಗಿದೆ.

ಆರೋಪಿಯು ಗುಮ್ಚುಕ್ ಪ್ರಾಥಮಿಕ ಶಾಲೆಯಲ್ಲಿ ಸಹಾಯಕ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದು, ತನ್ನ ಪತ್ನಿ, ಮಕ್ಕಳ ಕೊಲೆಗೆ ನಿಖರ ಕಾರಣ ಈವರೆಗೂ ತಿಳಿದು ಬಂದಿಲ್ಲ. ಆದರೆ, ಮಾಸಿಕ 10,000 ರೂ. ಸಂಬಳದಲ್ಲಿ ಕುಟುಂಬದ ಜೀವನ ನಡೆಯುತ್ತಿತ್ತು. ಆರ್ಥಿಕ ಸಂಕಷ್ಟವೇ ಕೊಲೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ವಿಧಿವಿಜ್ಞಾನ ತಜ್ಞರ ತಂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದೆ. ಅವರೊಂದಿಗೆ ಸ್ಥಳೀಯ ಪೊಲೀಸರು ಕೂಡ ಸಹಾಯ ಮಾಡುತ್ತಿದ್ದಾರೆ. ತನಿಖೆಯ ಬಳಿಕವೇ ಕೊಲೆಗೆ ನಿಖರ ಕಾರಣ ತಿಳಿದು ಬರಲಿದೆ ಎಂದು ಜೋನೈ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಪತ್ನಿ ಹಾಗೂ ಇಬ್ಬರು ಮಕ್ಕಳು ಸ್ಥಳದಲ್ಲಿಯೇ ಮೃತಪಟ್ಟರೆ, ನೀನಾ ಅಖ್ತರ್ ಎಂಬ ಪುತ್ರಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಮಾಹಿತಿ ಇದೆ. ರಾತ್ರಿ ಎಲ್ಲರೂ ಮಲಗಿದ್ದಾಗ ಈ ಕೊಲೆ ಮಾಡಿರಬಹುದೆಂದು ಸ್ಥಳೀಯರು ಮಾತನಾಡಿಕೊಳ್ಳುತ್ತಿದ್ದಾರೆ. ಮೊದಲ ಪತ್ನಿಯಿಂದ ವಿಚ್ಛೇದನ ಪಡೆದಿದ್ದ ಆರೋಪಿ ಫಿರೋಜ್ ಅಲಿ ಎರಡನೇ ಮದುವೆಯಾಗಿದ್ದ. ಇವರಿಗೆ ಇಬ್ಬರು ಹೆಣ್ಣುಮಕ್ಕಳು ಮತ್ತು ಒಬ್ಬ ಮಗ ಇದ್ದು, ಕುಟುಂಬ ಆರ್ಥಿಕ ಸಂಕಷ್ಟದಲ್ಲಿತ್ತು ಎಂಬ ಮಾಹಿತಿ ಕೂಡ ಲಭ್ಯವಾಗಿದೆ ಎಂದು ಜೋನೈ ಪೊಲೀಸರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com