ಶಸ್ತ್ರಾಸ್ತ್ರ ಹೊಂದಿದ್ದ 'ಬಿಜೆಪಿ ಗೂಂಡಾಗಳು' TMC ಕಚೇರಿಗೆ ನುಗ್ಗಿ, ಧ್ವಂಸ ಮಾಡಿದ್ದಾರೆ: ಅಭಿಷೇಕ್ ಬ್ಯಾನರ್ಜಿ

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅಭಿಷೇಕ್ ಬ್ಯಾನರ್ಜಿ, ಬಿಜೆಪಿ ಗೂಂಡಾಗಳು ಕಚೇರಿಯನ್ನು ದೋಚಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ನಾಶಪಡಿಸಿದ್ದಾರೆ. ಈ ಘಟನೆಯನ್ನು "ಪ್ರಜಾಪ್ರಭುತ್ವದ ಮೇಲಿನ ದಾಳಿ" ಎಂದು ಟೀಕಿಸಿದ್ದಾರೆ.
'BJP hooligans' vandalised TMC office, says Abhishek Banerjee
ಅಭಿಷೇಕ್ ಬ್ಯಾನರ್ಜಿ
Updated on

ಕೋಲ್ಕತ್ತಾ: ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಬಿಜೆಪಿ ಗೂಂಡಾಗಳು ಗುರುವಾರ ಬೆಳಗ್ಗೆ ಕೋಲ್ಕತ್ತಾದ ಕ್ಯಾಮಕ್ ಸ್ಟ್ರೀಟ್ ನಲ್ಲಿರುವ ಟಿಎಂಸಿ ಕಚೇರಿಗೆ ನುಗ್ಗಿ, ಧ್ವಂಸ ಮಾಡಿದ್ದಾರೆ ಎಂದು ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಆರೋಪಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅಭಿಷೇಕ್ ಬ್ಯಾನರ್ಜಿ, ಬಿಜೆಪಿ ಗೂಂಡಾಗಳು ಕಚೇರಿಯನ್ನು ದೋಚಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ನಾಶಪಡಿಸಿದ್ದಾರೆ. ಈ ಘಟನೆಯನ್ನು "ಪ್ರಜಾಪ್ರಭುತ್ವದ ಮೇಲಿನ ದಾಳಿ" ಎಂದು ಟೀಕಿಸಿದ್ದಾರೆ.

ಪಕ್ಷದ ಕಾರ್ಯಕರ್ತರು ಮತ್ತು ವಕೀಲರಿಂದ ಪದೇ ಪದೇ ಕರೆಗಳು ಹಾಗೂ ಇಮೇಲ್‌ ಮಾಡಿದ್ದರ ಹೊರತಾಗಿಯೂ, ಕೋಲ್ಕತ್ತಾ ಪೊಲೀಸರು ಸುಮಾರು ಎರಡು ಗಂಟೆಗಳ ಕಾಲ ಸ್ಥಳಕ್ಕೆ ಬರಲಿಲ್ಲ. ಈ ವಿಳಂಬ "ಅತಿರೇಕ ಮತ್ತು ಒಪ್ಪಿಕೊಳ್ಳಲು ಸಾಧ್ಯವಿಲ್ಲ" ಎಂದು ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ.

'BJP hooligans' vandalised TMC office, says Abhishek Banerjee
ಮಾಜಿ ಸಿಎಂ ಮಮತಾ ಬ್ಯಾನರ್ಜಿ ಸೊಸೆ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆ; ಕೊಲೆಯೋ, ಆತ್ಮಹತ್ಯೆಯೋ?

ಈ ದಾಳಿಯಲ್ಲಿ ಭಾಗಿಯಾಗಿರುವ ಎಲ್ಲರನ್ನು ತಕ್ಷಣ ಬಂಧಿಸಬೇಕು ಮತ್ತು ಹಿಂಸಾಚಾರವನ್ನು ಯಾರು ಯೋಜಿಸಿದರು, ಸಂಘಟಿಸಿದರು ಮತ್ತು ನಿರ್ದೇಶಿಸಿದರು ಎಂಬುದರ ಕುರಿತು ಸೂಕ್ತ ತನಿಖೆ ನಡೆಸಬೇಕೆಂದು ಅಭಿಷೇಕ್ ಬ್ಯಾನರ್ಜಿ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com