ದ್ವಿಚಕ್ರ ವಾಹನ ಮಾಲೀಕರಿಗೆ ಬೈಕ್ ಟ್ಯಾಕ್ಸಿ ಓಡಿಸಲು ಅನುಮತಿ ಕೊಡಿ, ಇದರಿಂದ 8 ಕೋಟಿ ಉದ್ಯೋಗ ಸೃಷ್ಟಿ: ರಾಜ್ಯಗಳಿಗೆ ನಿತಿನ್ ಗಡ್ಕರಿ ಮನವಿ

ರಾಜ್ಯಗಳಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಅವಕಾಶ ನೀಡಬೇಕು. ಈ ವಲಯವು ಜೀವನೋಪಾಯದ ಪ್ರಮುಖ ಮೂಲವಾಗಿ ಹೊರಹೊಮ್ಮಬಹುದು ಮತ್ತು ಸುಮಾರು ಎಂಟು ಕೋಟಿ ಜನರಿಗೆ ಉದ್ಯೋಗ ಸೃಷ್ಟಿಸಬಹುದು ಎಂದು ಗಡ್ಕರಿ ಹೇಳಿದ್ದಾರೆ.
States to permit private two-wheeler owners to operate bike taxis, says Nitin Gadkari
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಖಾಸಗಿ ದ್ವಿಚಕ್ರ ವಾಹನ ಮಾಲೀಕರಿಗೆ ಬೈಕ್‌ ಟ್ಯಾಕ್ಸಿ ಸೇವೆ ನಿರ್ವಹಿಸಲು ಅನುಮತಿ ನೀಡುವಂತೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರು ಗುರುವಾರ ಎಲ್ಲಾ ರಾಜ್ಯ ಸರ್ಕಾರಗಳಿಗೆ ಮನವಿ ಮಾಡಿದ್ದಾರೆ.

ರಾಜ್ಯಗಳಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಅವಕಾಶ ನೀಡಬೇಕು. ಈ ವಲಯವು ಜೀವನೋಪಾಯದ ಪ್ರಮುಖ ಮೂಲವಾಗಿ ಹೊರಹೊಮ್ಮಬಹುದು ಮತ್ತು ಸುಮಾರು ಎಂಟು ಕೋಟಿ ಜನರಿಗೆ ಉದ್ಯೋಗ ಸೃಷ್ಟಿಸಬಹುದು ಎಂದು ಗಡ್ಕರಿ ಹೇಳಿದ್ದಾರೆ.

ಈಗಾಗಲೇ ಹಲವಾರು ರಾಜ್ಯಗಳಲ್ಲಿ ಖಾಸಗಿ ದ್ವಿಚಕ್ರ ವಾಹನ ಮಾಲೀಕರಿಗೆ ಬೈಕ್ ಟ್ಯಾಕ್ಸಿಗಳ ಮೂಲಕ ಪ್ರಯಾಣಿಕರನ್ನು ಸಾಗಿಸಲು ಅನುಮತಿ ನೀಡಲಾಗಿದೆ. ಆದರೆ ಇನ್ನೂ ಕೆಲವು ರಾಜ್ಯಗಳು ಇದಕ್ಕೆ ಅನುಮತಿ ನೀಡಿಲ್ಲ ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.

States to permit private two-wheeler owners to operate bike taxis, says Nitin Gadkari
'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ!

ಸಾರಿಗೆ ರಾಜ್ಯ ವಿಷಯವಾಗಿದೆ, ಬೈಕ್ ಟ್ಯಾಕ್ಸಿಗಳನ್ನು ಜಾರಿಗೆ ತರುವ ಬಗ್ಗೆ ರಾಜ್ಯಗಳು ನಿರ್ಧರಿಸುತ್ತವೆ. ಇದು ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಹೊಸ ಆದಾಯದ ಮೂಲವನ್ನು ಸೃಷ್ಟಿಸಬಹುದು ಎಂದು ಗಡ್ಕರಿ ಹೇಳಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಾವಕಾಶಗಳು ಸೀಮಿತವಾಗಿವೆ, ಹೀಗಿರುವಾಗ ಬೈಕ್‌ ಟ್ಯಾಕ್ಸಿ ಸೇವೆಯು ಜನರಿಗೆ ಹೊಸ ಆದಾಯದ ಮೂಲವಾಗಬಹುದು. ಖಾಸಗಿ ದ್ವಿಚಕ್ರ ವಾಹನಗಳನ್ನ ಬಳಸಿಕೊಂಡು ಜನರು ಹೆಚ್ಚುವರಿ ಆದಾಯ ಗಳಿಸಲು ಇದು ಸಹಕಾರಿಯಾಗಲಿದೆ ಎಂದು ಗಡ್ಕರಿ ಅಭಿಪ್ರಾಯಪಟ್ಟಿದ್ದಾರೆ.

8 ಕೋಟಿ ಜನರಿಗೆ ಉದ್ಯೋಗ

ಬೈಕ್‌ ಟ್ಯಾಕ್ಸಿ ಸೇವೆಗಳನ್ನು ಉತ್ತೇಜಿಸುವುದರಿಂದ ಸುಮಾರು 8 ಕೋಟಿ ಜನರಿಗೆ ಉದ್ಯೋಗ ಸಿಗಲಿದೆ. ಉದ್ಯೋಗಾವಕಾಶಗಳು ಕಡಿಮೆ ಇರುವ ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳಲ್ಲಿ ಬೈಕ್‌ ಟ್ಯಾಕ್ಸಿ ಸೇವೆಯು ಹೆಚ್ಚಿನ ಪ್ರಯೋಜನಕಾರಿಯಾಗಲಿದೆ ಎಂದು ಕೇಂದ್ರ ಸಚಿವರು ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com