ರಾಹುಲ್‌ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನ 10 ನಿಮಿಷ ಆಗಸದಲ್ಲೇ ಗಿರಕಿ; 2ನೇ ಪ್ರಯತ್ನದಲ್ಲಿ ಸೇಫ್‌ ಲ್ಯಾಂಡಿಂಗ್!

ದೆಹಲಿಯಿಂದ ಲಖನೌಗೆ ಪ್ರಯಾಣಿಸುತ್ತಿದ್ದ AI-1717 ವಿಮಾನವು ಪ್ರತಿಕೂಲ ಹವಾಮಾನದಿಂದಾಗಿ ಮಧ್ಯಾಹ್ನ 3.45 ರ ಸುಮಾರಿಗೆ ತನ್ನ ಮೊದಲ ಲ್ಯಾಂಡಿಂಗ್ ಪ್ರಯತ್ನವನ್ನು ರದ್ದುಗೊಳಿಸಿತು.
Rahul Gandhi
ರಾಹುಲ್ ಗಾಂಧಿ
Updated on

ಲಖನೌ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನವು ಮಂಗಳವಾರ ಲಖನೌನ ಚೌಧರಿ ಚರಣ್ ಸಿಂಗ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಕೂಲ ಹವಾಮಾನದಿಂದಾಗಿ 10 ನಿಮಿಷ ಆಕಾಶದಲ್ಲೇ ಸುತ್ತಾಟ ನಡೆಸಿ, ಎರಡನೇ ಪ್ರಯತ್ನದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ ಎಂದು ಮೂಲಗಳು ತಿಳಿಸಿವೆ.

ದೆಹಲಿಯಿಂದ ಲಖನೌಗೆ ಪ್ರಯಾಣಿಸುತ್ತಿದ್ದ AI-1717 ವಿಮಾನವು ಪ್ರತಿಕೂಲ ಹವಾಮಾನದಿಂದಾಗಿ ಮಧ್ಯಾಹ್ನ 3.45 ರ ಸುಮಾರಿಗೆ ತನ್ನ ಮೊದಲ ಲ್ಯಾಂಡಿಂಗ್ ಪ್ರಯತ್ನವನ್ನು ರದ್ದುಗೊಳಿಸಿತು. ನಂತರ ವಿಮಾನವು ಸುಮಾರು 10 ನಿಮಿಷಗಳ ಕಾಲ ‘ಗೋ-ಅರೌಂಡ್’ ಮಾಡಿದೆ. ಬಳಿಕ ಮಧ್ಯಾಹ್ನ 3.55 ಕ್ಕೆ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ.

‘ಗೋ-ಅರೌಂಡ್’ ಎಂದರೆ ವಿಮಾನವು ಲ್ಯಾಂಡಿಂಗ್‌ಗೆ ಮುನ್ನ ಲ್ಯಾಂಡಿಂಗ್ ಪ್ರಕ್ರಿಯೆಯನ್ನ ಸ್ಥಗಿತಗೊಳಿಸಿ ಮತ್ತೆ ಮೇಲಕ್ಕೆ ಏರಿ, ಪರಿಸ್ಥಿತಿ ಅನುಕೂಲಕರವಾದ ನಂತರ ಮತ್ತೊಮ್ಮೆ ಲ್ಯಾಂಡಿಂಗ್‌ಗೆ ಪ್ರಯತ್ನಿಸುವ ಪ್ರಕ್ರಿಯೆ.

Rahul Gandhi
ರನ್‌ವೇಯಿಂದ ಜಾರಿದ ಅಮೆಜಾನ್ ಕಾರ್ಗೋ ವಿಮಾನ; ವಾಹನಗಳಿಗೆ ಡಿಕ್ಕಿ, ಕನಿಷ್ಠ ಐವರು ಸಾವು!

ವಿಮಾನ ಲ್ಯಾಂಡ್ ಆದ ಬಳಿಕ ಎಲ್ಲಾ ಪ್ರಯಾಣಿಕರು ಯಾವುದೇ ತೊಂದರೆಯಿಲ್ಲದೆ ಸಾಮಾನ್ಯ ರೀತಿಯಲ್ಲಿ ವಿಮಾನದಿಂದ ಇಳಿದಿದ್ದಾರೆ. ಘಟನೆಯ ಕುರಿತು ಏರ್ ಇಂಡಿಯಾ ಇನ್ನೂ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ.

ರಾಹುಲ್ ಗಾಂಧಿ ಅವರು ಎರಡು ದಿನಗಳ ಭೇಟಿಗಾಗಿ ತಮ್ಮ ಲೋಕಸಭಾ ಕ್ಷೇತ್ರ ರಾಯ್ ಬರೇಲಿಗೆ ತೆರಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com