ಬಾಂಬ್ ಬೆದರಿಕೆ: ಇಂಡಿಗೋ ವಿಮಾನ ಅಹಮದಾಬಾದ್‌ನಲ್ಲಿ ತುರ್ತು ಲ್ಯಾಂಡಿಂಗ್!

ವಿಮಾನ ಹಾರಾಟ ನಡೆಸುತ್ತಿದ್ದಾಗ ಟಿಶ್ಯೂ ಪೇಪರ್ ಮೇಲೆ ‘ಬಾಂಬ್’ ಎಂದು ಬರೆದಿರುವುದನ್ನು ವಿಮಾನ ಸಿಬ್ಬಂದಿಯೊಬ್ಬರು ಗಮನಿಸಿದ್ದರು. ತಕ್ಷಣವೇ ಜಾಗರೂಕರಾದ ಪೈಲಟ್ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲು ಅನುಮತಿ ಪಡೆದರು.
Casual Images
ಸಾಂದರ್ಭಿಕ ಚಿತ್ರ
Updated on

ಅಹಮದಾಬಾದ್: ಲಕ್ನೋದಿಂದ ಸೌದಿ ಅರೇಬಿಯಾದ ದಮ್ಮಾಮ್‌ಗೆ (Lucknow-Dammam) ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಗುರುವಾರ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ.

ವಿಮಾನ ಹಾರಾಟ ನಡೆಸುತ್ತಿದ್ದಾಗ ಟಿಶ್ಯೂ ಪೇಪರ್ ಮೇಲೆ ‘ಬಾಂಬ್’ ಎಂದು ಬರೆದಿರುವುದನ್ನು ವಿಮಾನ ಸಿಬ್ಬಂದಿಯೊಬ್ಬರು ಗಮನಿಸಿದ್ದರು. ತಕ್ಷಣವೇ ಜಾಗರೂಕರಾದ ಪೈಲಟ್ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲು ಅನುಮತಿ ಪಡೆದರು.

107 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಯನ್ನು ಹೊತ್ತಿದ್ದ ' 6E 97' ವಿಮಾನವು ಸಂಜೆ 4.17ಕ್ಕೆ ಲಕ್ನೋದಿಂದ ಹೊರಟು, ಸಂಜೆ 5.43ಕ್ಕೆ ಅಹಮದಾಬಾದ್‌ನಲ್ಲಿ ಸುರಕ್ಷಿತವಾಗಿ ಇಳಿಯಿತು. ಭದ್ರತಾ ಸಿಬ್ಬಂದಿ ತಕ್ಷಣವೇ ವಿಮಾನದಲ್ಲಿದ್ದ ಎಲ್ಲರನ್ನೂ ಹೊರಗೆ ಕರೆತಂದು ಟರ್ಮಿನಲ್ 2ಕ್ಕೆ ಸ್ಥಳಾಂತರಿಸಿದ್ದಾರೆ. ವಿಮಾನದಲ್ಲಿ ಕೂಲಂಕಷ ತಪಾಸಣೆ ನಡೆಸಿದ್ದು, ಯಾವುದೇ ಅನುಮಾನಾಸ್ಪದ ವಸ್ತು ಅಥವಾ ಸ್ಫೋಟಕ ಪತ್ತೆಯಾಗಿಲ್ಲ.

ಟಿಶ್ಯೂ ಪೇಪರ್‌ನಲ್ಲಿ `ಬಾಂಬ್’ ಎಂಬ ಪದ ಕಂಡುಬಂದ ಹಿನ್ನೆಲೆಯಲ್ಲಿ ವಿಮಾನದಲ್ಲಿ ಭದ್ರತಾ ಆತಂಕ ಸೃಷ್ಟಿಯಾಗಿತ್ತು. ಘಟನೆಯ ನಿಖರ ಕಾರಣ ಹಾಗೂ ಸಂದೇಶವನ್ನು ಬರೆದವರು ಯಾರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಘಟನೆ ಕುರಿತು ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ, ಅಗ್ನಿಶಾಮಕ ದಳ ಹಾಗೂ ಬಾಂಬ್ ನಿಷ್ಕ್ರಿಯ ದಳ ಸೇರಿದಂತೆ ಹಲವು ಏಜೆನ್ಸಿಗಳು ತನಿಖೆ ನಡೆಸುತ್ತಿವೆ.

ತನಿಖೆಯ ಭಾಗವಾಗಿ ವಿಮಾನದಲ್ಲಿದ್ದ ಪ್ರಯಾಣಿಕರಿಂದ ಹಸ್ತಾಕ್ಷರ ಮಾದರಿಗಳನ್ನು ಸಂಗ್ರಹಿಸಲಾಗುತ್ತಿದೆ. ಪ್ರಯಾಣಿಕರಿಗೆ ಟಿಶ್ಯೂ ಪೇಪರ್‌ನಲ್ಲಿ ಬರೆಯಲು ಸೂಚಿಸಲಾಗಿದ್ದು, ಅವರ ಬರವಣಿಗೆಯನ್ನು `ಬಾಂಬ್’ ಸಂದೇಶವಿದ್ದ ಟಿಶ್ಯೂ ಪೇಪರ್‌ನ ಬರವಣಿಗೆಯೊಂದಿಗೆ ಹೋಲಿಕೆ ಮಾಡಲಾಗುತ್ತಿದೆ.

Casual Images
ಕಲಬುರಗಿ, ಬೆಳಗಾವಿ ಕೋರ್ಟ್ ಗೆ ಹುಸಿ ಬಾಂಬ್ ಬೆದರಿಕೆ

ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಕಳೆದ 10 ದಿನಗಳಲ್ಲಿ ವಿಮಾನವೊಂದು ತುರ್ತು ಲ್ಯಾಂಡಿಂಗ್ ಮಾಡಿರುವುದು ಇದು ಎರಡನೇ ಪ್ರಕರಣವಾಗಿದೆ. ಇದಕ್ಕೂ ಮೊದಲು ಏರ್ ಇಂಡಿಯಾ ವಿಮಾನವೊಂದು ಅಹಮದಾಬಾದ್‌ನಲ್ಲಿ ತುರ್ತು ಲ್ಯಾಂಡಿಂಗ್ ಮಾಡಿತ್ತು. ಆ ಪ್ರಕರಣದ ತನಿಖೆಯಲ್ಲಿ ವಿಮಾನದ ಸಿಬ್ಬಂದಿಯೊಬ್ಬರ ಹೆಸರು ಕೂಡ ಮುನ್ನೆಲೆಗೆ ಬಂದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com