ಪ್ರಧಾನಿ ಮೋದಿ ಆಯೋಜಿಸಿದ್ದ BRICS ಗಾಲಾ ಡಿನ್ನರ್‌ಗೆ ಚೀನಾ ಅಧ್ಯಕ್ಷ Xi Jinping ಗೈರು: ರಾಜತಾಂತ್ರಿಕ ವಲಯದಲ್ಲಿ ತೀವ್ರ ಕುತೂಹಲ..!

ಕ್ಸಿ ಜಿನ್‌ಪಿಂಗ್ ಅವರು ಔತಣಕೂಟಕ್ಕೆ ಗೈರಾಗಲು ನಿಖರ ಕಾರಣ ತಕ್ಷಣಕ್ಕೆ ತಿಳಿದುಬಂದಿಲ್ಲ. ಆದರೆ, ಅವರು ವಿಶ್ರಾಂತಿ ಪಡೆಯಲು ಹೋಟೆಲ್‌ಗೆ ಮರಳಿರಬಹುದು ಎಂದು ಮೂಲವೊಂದು ತಿಳಿಸಿದೆ.
China president Xi-Jinping- PM Narendra Modi
ಚೀನಾ ಅಧ್ಯಕ್ಷ ಕ್ಸೀ ಜಿನ್ಪಿಂಗ್- ಪ್ರಧಾನಿ ನರೇಂದ್ರ ಮೋದಿonline desk
Updated on

ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಆಯೋಜಿಸಿದ್ದ ಬ್ರಿಕ್ಸ್ (BRICS) ಗಾಲಾ ಭೋಜನಕೂಟಕ್ಕೆ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಗೈರುಹಾಜರಾಗುವ ಮೂಲಕ ರಾಜತಾಂತ್ರಿಕ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದಾರೆ.

ನವದೆಹಲಿಯಲ್ಲಿ ಯಶಸ್ವಿಯಾಗಿ ಜರುಗಿದ 18ನೇ ಬ್ರಿಕ್ಸ್ ನಾಯಕರ ಶೃಂಗಸಭೆ ಹಾಗೂ ಉಭಯ ನಾಯಕರ ನಡುವಿನ ದ್ವಿಪಕ್ಷೀಯ ಮಾತುಕತೆಗಳ ಬೆನ್ನಲ್ಲೇ ಶನಿವಾರ ಸಂಜೆ ಈ ಬೆಳವಣಿಗೆ ಕಂಡು ಬಂದಿದೆ.

ಕ್ಸಿ ಜಿನ್‌ಪಿಂಗ್ ಅವರು ಔತಣಕೂಟಕ್ಕೆ ಗೈರಾಗಲು ನಿಖರ ಕಾರಣ ತಕ್ಷಣಕ್ಕೆ ತಿಳಿದುಬಂದಿಲ್ಲ. ಆದರೆ, ಅವರು ವಿಶ್ರಾಂತಿ ಪಡೆಯಲು ಹೋಟೆಲ್‌ಗೆ ಮರಳಿರಬಹುದು ಎಂದು ಮೂಲವೊಂದು ತಿಳಿಸಿದೆ.

ಶನಿವಾರ ಮಧ್ಯಾಹ್ನ ದೆಹಲಿಗೆ ಆಗಮಿಸಿದ್ದ ಕ್ಸಿ, ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದರು. ಬಳಿಕ ಪ್ರಧಾನಿ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆಯನ್ನೂ ನಡೆಸಿದ್ದರು. ಏಳು ವರ್ಷಗಳ ಬಳಿಕ ಕ್ಸಿ ಭಾರತಕ್ಕೆ ಭೇಟಿ ನೀಡಿದ್ದಾರೆ.

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸೇರಿದಂತೆ ಇತರ ಬ್ರಿಕ್ಸ್ ನಾಯಕರು ಔತಣಕೂಟದಲ್ಲಿ ಭಾಗವಹಿಸಿದ್ದರು. ಕೇಂದ್ರ ಸಚಿವರಾದ ಅಮಿತ್ ಶಾ, ನಿರ್ಮಲಾ ಸೀತಾರಾಮನ್, ಪಿಯೂಷ್ ಗೋಯಲ್, ಅಶ್ವಿನಿ ವೈಷ್ಣವ್ ಮತ್ತು ಶಿವರಾಜ್ ಸಿಂಗ್ ಚೌಹಾಣ್ ಉಪಸ್ಥಿತರಿದ್ದರು.

China president Xi-Jinping- PM Narendra Modi
ಬ್ರಿಕ್ಸ್ ಶೃಂಗಸಭೆಗೆ ಬಾಂಬ್ ಹಾಕುವುದಾಗಿ ಬೆದರಿಕೆ: ಜಾರ್ಖಂಡ್‌ನಲ್ಲಿ ಯುವಕನ ಬಂಧನ!

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಕೇಂದ್ರ ಸಚಿವರು ಹಾಗೂ ಮುಖ್ಯಮಂತ್ರಿಗಳು ಸಂಸತ್ ಭವನದಿಂದ ಔತಣಕೂಟ ನಡೆದ ಭಾರತ ಮಂಟಪಕ್ಕೆ ಎರಡು ಬಸ್‌ಗಳಲ್ಲಿ ಪ್ರಯಾಣಿಸಿದರು.

ಭೋಜನ ಮೆನುವಿನಲ್ಲಿ ಖಾಂಡ್ವಿ ಮಿಲ್ಲೆ-ಫೊಯೆ, ಖುಂಬ್ ಗಲೌಟಿ, ಪನೀರ್ ಲಬಾಬ್ದಾರ್, ಗುಚ್ಚಿ ಮಾರ್ಮಿಕ, ಕ್ಯಾರೆಟ್-ಬೀನ್ಸ್ ಪೊರಿಯಲ್ ಮತ್ತು ಸಿರಿಧಾನ್ಯ ಪುಲಾವ್‌ ಸೇರಿದ್ದವು. ಸಿಹಿ ತಿನಿಸುಗಳಲ್ಲಿ ದೆಹಲಿಯ ಹಣ್ಣಿನ ಕ್ರೀಮ್ ಜೊತೆಗೆ ಜಿಲೇಬಿ ಹಾಗೂ ಶಹತೂತ್ ಫಿರ್ನಿ ಸೇರಿದ್ದವು.

ಸೆಪ್ಟೆಂಬರ್ 12 ಮತ್ತು 13ರಂದು ಭಾರತ ಬ್ರಿಕ್ಸ್ ಶೃಂಗಸಭೆಯನ್ನು ಆಯೋಜಿಸಿದ್ದು, 11 ಸದಸ್ಯ ರಾಷ್ಟ್ರಗಳ ನಾಯಕರು ಹಾಗೂ 10 ಪಾಲುದಾರ ರಾಷ್ಟ್ರಗಳ ಪ್ರತಿನಿಧಿಗಳು, ಜೊತೆಗೆ ಕೆಲವು ಅಂತಾರಾಷ್ಟ್ರೀಯ ಸಂಸ್ಥೆಗಳ ಪ್ರತಿನಿಧಿಗಳು ಶೃಂಗಸಭೆಯಲ್ಲಿ ಭಾಗವಹಿಸಿದ್ದಾರೆ.

ಔತಣಕೂಟದಲ್ಲಿ ಹಲವು ಬ್ರಿಕ್ಸ್ ನಾಯಕರು ಮತ್ತು ಭಾರತದ ಗಣ್ಯರು ಪಾಲ್ಗೊಂಡಿದ್ದರೆ, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಹಾಗೂ ಅಬುಧಾಬಿಯ ಯುವರಾಜ ಶೇಖ್ ಖಾಲಿದ್ ಬಿನ್ ಮೊಹಮ್ಮದ್ ಗೈರು ಹಾಜರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com