ಪರೀಕ್ಷೆಯ ವೇಳೆ ChatGPT ಬಳಕೆ: ಸಿಕ್ಕಿ ಬಿದ್ದ IIT ವಿದ್ಯಾರ್ಥಿ ಆತ್ಮಹತ್ಯೆ

ಸಾಹಿಲ್‌ ಎಂಬ ವಿದ್ಯಾರ್ಥಿ ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಪ್ರಶ್ನೆಪತ್ರಿಕೆಯನ್ನು ಚಾಟ್‌ಜಿಪಿಟಿಗೆ ಅಪ್‌ಲೋಡ್‌ ಮಾಡಿ ಉತ್ತರಗಳನ್ನು ಪಡೆಯಲು ಪ್ರಯತ್ನಿಸಿದ್ದ ಎಂದು ಸಂಸ್ಥೆ ತಿಳಿಸಿದೆ.
ಪರೀಕ್ಷೆಯ ವೇಳೆ ChatGPT ಬಳಕೆ: ಸಿಕ್ಕಿ ಬಿದ್ದ IIT ವಿದ್ಯಾರ್ಥಿ ಆತ್ಮಹತ್ಯೆ
Updated on

ಮುಂಬೈ: ಪರೀಕ್ಷೆಯ ವೇಳೆ ಚಾಟ್ಜಿಪಿಟಿ ಬಳಸುತ್ತಿದ್ದ ಆರೋಪದ ಮೇಲೆ ಸಿಕ್ಕಿಬಿದ್ದ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆಯ ವಿದ್ಯಾರ್ಥಿಯೊಬ್ಬ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಾಹಿಲ್‌ ಎಂಬ ವಿದ್ಯಾರ್ಥಿ ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಪ್ರಶ್ನೆಪತ್ರಿಕೆಯನ್ನು ಚಾಟ್‌ಜಿಪಿಟಿಗೆ ಅಪ್‌ಲೋಡ್‌ ಮಾಡಿ ಉತ್ತರಗಳನ್ನು ಪಡೆಯಲು ಪ್ರಯತ್ನಿಸಿದ್ದ ಎಂದು ಸಂಸ್ಥೆ ತಿಳಿಸಿದೆ.

ಈ ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಯ ವಿರುದ್ಧ ಯಾವುದೇ ಶಿಸ್ತುಕ್ರಮ ಕೈಗೊಂಡಿರಲಿಲ್ಲ ಎಂದು ಸಂಸ್ಥೆ ತಿಳಿಸಿದೆ. ವಿದ್ಯಾರ್ಥಿಯ ಸಾವಿಗೆ ಕಾರಣವಾದ ಸಂದರ್ಭಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಎನರ್ಜಿ ಸೈನ್ಸ್‌ ಮತ್ತು ಎಂಜಿನಿಯರಿಂಗ್ ವಿಭಾಗದಲ್ಲಿ ಎರಡನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಸಾಹಿಲ್‌ ಎಂಬ ವಿದ್ಯಾರ್ಥಿ ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಪ್ರಶ್ನೆಪತ್ರಿಕೆಯನ್ನು ಚಾಟ್‌ಜಿಪಿಟಿಗೆ ಅಪ್‌ಲೋಡ್‌ ಮಾಡಿ ಉತ್ತರಗಳನ್ನು ಪಡೆಯಲು ಪ್ರಯತ್ನಿಸಿದ್ದ ಎಂದು ಸಂಸ್ಥೆ ತಿಳಿಸಿದೆ.

ಪರೀಕ್ಷೆಯ ವೇಳೆ ChatGPT ಬಳಕೆ: ಸಿಕ್ಕಿ ಬಿದ್ದ IIT ವಿದ್ಯಾರ್ಥಿ ಆತ್ಮಹತ್ಯೆ
ಬೆಂಗಳೂರಿನ ಹಾಸ್ಟೆಲ್ ರೂಂನಲ್ಲಿ IISc ವಿದ್ಯಾರ್ಥಿ ಆತ್ಮಹತ್ಯೆ; ಸ್ಥಳದಲ್ಲಿ ಡೆತ್ ನೋಟ್ ಪತ್ತೆ!

ಐಐಟಿ ಬಾಂಬೆಯ ಇಂಧನ ವಿಜ್ಞಾನ ಮತ್ತು ಎಂಜಿನಿಯರಿಂಗ್ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಯೊಬ್ಬ ಶುಕ್ರವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಂಸ್ಥೆ ತಿಳಿಸಿದೆ.

ಅಂದು ಬೆಳಗ್ಗೆ ನಡೆದ ಪರೀಕ್ಷೆಯ ವೇಳೆ ವಿದ್ಯಾರ್ಥಿ ಮೊಬೈಲ್ ಫೋನ್ ಬಳಸುತ್ತಿರುವುದು ಕಂಡುಬಂದಿತ್ತು. ಐಐಟಿ ಬಾಂಬೆ ತಿಳಿಸಿರುವ ಪ್ರಕಾರ, ಉತ್ತರಗಳನ್ನು ಪಡೆಯುವ ಉದ್ದೇಶದಿಂದ ಅವರು ಪರೀಕ್ಷೆಯ ಪ್ರಶ್ನೆಪತ್ರಿಕೆಯನ್ನು ಚಾಟ್ಜಿಪಿಟಿಗೆ ಅಪ್ಲೋಡ್ ಮಾಡಿದ್ದರು.

ಈ ಘಟನೆ ಬಳಿಕ ವಿದ್ಯಾರ್ಥಿಯ ವಿರುದ್ಧ ಯಾವುದೇ ಶಿಸ್ತುಕ್ರಮ ಜರುಗಿಸಿರಲಿಲ್ಲ ಎಂದು ಐಐಟಿ ಬಾಂಬೆ ತಿಳಿಸಿದೆ. ಕೋರ್ಸ್ ಬೋಧಕರು ಹಾಗೂ ವಿಭಾಗದ ಮುಖ್ಯಸ್ಥರು (HOD) ವಿದ್ಯಾರ್ಥಿಯೊಂದಿಗೆ ಈ ಕುರಿತು ಸಮಾಲೋಚನೆ ನಡೆಸಿ, ಘಟನೆಯಿಂದ ಆತನ ಶೈಕ್ಷಣಿಕ ಭವಿಷ್ಯದ ಮೇಲೆ ಯಾವುದೇ ದುಷ್ಪರಿಣಾಮ ಬೀರುವುದಿಲ್ಲ ಎಂದು ಭರವಸೆ ನೀಡಿ ಸಮಾಧಾನಪಡಿಸಿದ್ದರು ಎಂದು ಸಂಸ್ಥೆ ತಿಳಿಸಿದೆ.

ಬಳಿಕ ವಿದ್ಯಾರ್ಥಿ ತನ್ನ ಹಾಸ್ಟೆಲ್ ಕೊಠಡಿಗೆ ವಾಪಸಾಗಿದ್ದರು. ಆದರೆ ಸಂಜೆಯ ವೇಳೆಗೆ ಆತನ ಮೃತದೇಹ ಪತ್ತೆಯಾಗಿದೆ. ವಿದ್ಯಾರ್ಥಿಯ ಸಾವಿಗೆ ಐಐಟಿ ಬಾಂಬೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಆತನ ಸ್ನೇಹಿತರು, ಸಹಪಾಠಿಗಳು ಹಾಗೂ ಅಧ್ಯಾಪಕರಿಗೆ ಸಾಂತ್ವನ ಮತ್ತು ಅಗತ್ಯ ಬೆಂಬಲ ನೀಡುವುದಾಗಿ ತಿಳಿಸಿದೆ.

ಪರೀಕ್ಷೆಯ ವೇಳೆ ChatGPT ಬಳಕೆ: ಸಿಕ್ಕಿ ಬಿದ್ದ IIT ವಿದ್ಯಾರ್ಥಿ ಆತ್ಮಹತ್ಯೆ
ಸೈಬರ್ ಸೆಕ್ಯುರಿಟಿ ಕೋರ್ಸ್ ಗೆ ಸಿಗದ ಪ್ರವೇಶ; ವಿದ್ಯಾರ್ಥಿಯಿಂದ ಐಐಟಿ ವೆಬ್ ಸೈಟ್ ಹ್ಯಾಕ್; ಶಿಕ್ಷೆಯ ಬದಲು ಅಚ್ಚರಿಯ ಕ್ರಮ!

ಸಾವಿಗೆ ಸಂಬಂಧಿಸಿದ ಸಂದರ್ಭಗಳ ಕುರಿತು ಸೂಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಸಂಸ್ಥೆ ಹೇಳಿದೆ. ವಿದ್ಯಾರ್ಥಿಯ ಸಾವಿನ ಬಳಿಕ ಐಐಟಿ ಬಾಂಬೆಯ ಹಲವು ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಪ್ರತಿಭಟನೆ ನಡೆಸಿ, ಸಂಸ್ಥೆಯ ಆಡಳಿತದಿಂದ ಹೊಣೆಗಾರಿಕೆ, ಪಾರದರ್ಶಕತೆ ಮತ್ತು ಸ್ಪಷ್ಟ ಉತ್ತರಗಳನ್ನು ಒತ್ತಾಯಿಸಿದರು.

ಇಂದು ನಮ್ಮ ಕಾಲೇಜಿನಲ್ಲಿ ವಿದ್ಯಾರ್ಥಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದಕ್ಕಾಗಿಯೇ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ. ಆಡಳಿತದಿಂದ ಹೊಣೆಗಾರಿಕೆ, ಪಾರದರ್ಶಕತೆ ಮತ್ತು ಉತ್ತರಗಳನ್ನು ಕೇಳುವುದು ನಮ್ಮ ಉದ್ದೇಶ" ಎಂದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com