ದೆಹಲಿ ವಿವಿ ಚುನಾವಣೆ ಫಲಿತಾಂಶ ಪ್ರಕಟ: 4 ಹುದ್ದೆಗಳ ಪೈಕಿ 3ರಲ್ಲಿ ABVP ಭರ್ಜರಿ ಜಯ; ಉಪಾಧ್ಯಕ್ಷ ಸ್ಥಾನ ಗೆದ್ದು ಇತಿಹಾಸ ಸೃಷ್ಟಿಸಿದ ಪಕ್ಷೇತರ!

ಎಬಿವಿಪಿ ನಾಲ್ಕು ಸ್ಥಾನಗಳ ಪೈಕಿ ಮೂರು ಸ್ಥಾನಗಳಲ್ಲಿ ಗೆದ್ದು ಬೀಗಿದ್ದು, ಪಕ್ಷೇತರ ಅಭ್ಯರ್ಥಿ ಉಪಾಧ್ಯಕ್ಷ ಸ್ಥಾನ ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ.
DUSU Election Results 2026: ABVP Wins 3 Of 4 Delhi University Posts, Independent Makes History With Vice-President Seat
ದೆಹಲಿ ವಿವಿ ಚುನಾವಣೆ ಫಲಿತಾಂಶ ಪ್ರಕಟ
Updated on

ನವದೆಹಲಿ: 20 ಸುತ್ತುಗಳ ಮತ ಎಣಿಕೆಯ ನಂತರ ದೆಹಲಿ ವಿಶ್ವವಿದ್ಯಾಲಯ ವಿದ್ಯಾರ್ಥಿ ಸಂಘದ(DUSU) ಚುನಾವಣೆಯ ಫಲಿತಾಂಶವನ್ನು ಶನಿವಾರ ಪ್ರಕಟಿಸಲಾಗಿದ್ದು, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ABVP) ಭರ್ಜರಿ ಗೆಲುವು ಸಾಧಿಸಿದೆ.

ಎಬಿವಿಪಿ ನಾಲ್ಕು ಸ್ಥಾನಗಳ ಪೈಕಿ ಮೂರು ಸ್ಥಾನಗಳಲ್ಲಿ ಗೆದ್ದು ಬೀಗಿದ್ದು, ಪಕ್ಷೇತರ ಅಭ್ಯರ್ಥಿ ಉಪಾಧ್ಯಕ್ಷ ಸ್ಥಾನ ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ. ಅಧ್ಯಕ್ಷ, ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿ ಎಂಬ ಮೂರು ಪ್ರಮುಖ ಹುದ್ದೆಗಳನ್ನು ಎಬಿವಿಪಿ ಗೆದ್ದುಕೊಂಡಿದೆ.

ABVPಯ ಯಶ್ ದಬಾಸ್ ಅವರು 24,576 ಮತಗಳನ್ನು ಪಡೆದು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಯಶ್ ವಿರುದ್ಧ ಸ್ಪರ್ಧಿಸಿದ್ದ NSUIನ ವಿಜಯ್ ಶಂಕರ್ ಮೀನಾ ಅವರು 22,523 ಮತಗಳನ್ನು ಪಡೆದ ಸೋಲು ಅನುಭವಿಸಿದ್ದಾರೆ.

DUSU Election Results 2026: ABVP Wins 3 Of 4 Delhi University Posts, Independent Makes History With Vice-President Seat
37 ವರ್ಷ ನಿಷೇಧದ ಬಳಿಕ ಮತ್ತೆ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ; ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ರಿಯಾ ಛಾವ್ಡಿ 21,650 ಮತಗಳೊಂದಿಗೆ ಕಾರ್ಯದರ್ಶಿ ಸ್ಥಾನವನ್ನು ಗೆದ್ದುಕೊಂಡರೆ, ಲಕ್ಷ್ಯ ರಾಜ್ ಸಿಂಗ್ 16,615 ಮತಗಳೊಂದಿಗೆ ಜಂಟಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

ಇನ್ನು NSUIನ ಮಾಜಿ ಸದಸ್ಯರಾದ ಪಕ್ಷೇತರ ಅಭ್ಯರ್ಥಿ ದೀಪಾಂಶು ಶೋಕೀನ್ ಅವರು 30,615 ಮತಗಳೊಂದಿಗೆ ಉಪಾಧ್ಯಕ್ಷ ಸ್ಥಾನವನ್ನು ಗೆದ್ದುಕೊಂಡಿದ್ದಾರೆ. ಇದರೊಂದಿಗೆ ಇದೇ ಮೊದಲ ಬಾರಿಗೆ ಪಕ್ಷೇತರ ಅಭ್ಯರ್ಥಿಯೊಬ್ಬರು ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ABVPಯ ಇಶು ಮೌರ್ಯ 16,910 ಮತಗಳೊಂದಿಗೆ ಎರಡನೇ ಸ್ಥಾನ ಪಡೆದರೆ, NSUIನ ವಿರ್ ಛತ್ರತ್ 4,313 ಮತಗಳನ್ನು ಪಡೆದಿದ್ದಾರೆ.

ಫಲಿತಾಂಶವನ್ನು ಅಧಿಕೃತವಾಗಿ ಘೋಷಿಸುವ ಮುನ್ನ, ದೆಹಲಿ ಹೈಕೋರ್ಟ್‌ನ ನಿರ್ದೇಶನದನ್ವಯ ವಿಜೇತ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ವಿಶ್ವವಿದ್ಯಾಲಯದ ಆವರಣದ ಒಳಗೆ ಅಥವಾ ಹೊರಗೆ ವಿಜಯೋತ್ಸವದ ಮೆರವಣಿಗೆ ನಡೆಸದಂತೆ ಅಧಿಕಾರಿಗಳು ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com