ದೆಹಲಿ: ಪೊಲೀಸರ ಸೋಗಿನಲ್ಲಿ ಬಂದ ಮೂವರು; ಪಾರ್ಕ್ ನಲ್ಲಿ ಕುಳಿತಿದ್ದ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ; ಓರ್ವನ ಬಂಧನ

ಸೋಮವಾರ ಸಂಜೆ 7 ಗಂಟೆ ಸುಮಾರಿಗೆ ಬಾಲಕಿ ತನ್ನ ಸ್ನೇಹಿತನೊಂದಿಗೆ ದೆಹಲಿಯ ಕಲ್ಕಾಜಿ ಮಂದಿರಕ್ಕೆ ಭೇಟಿ ನೀಡಿದ್ದ ವೇಳೆ ಈ ಘಟನೆ ನಡೆದಿದೆ.
File photo
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಪೊಲೀಸರ ಸೋಗಿನಲ್ಲಿ ಬಂದ ಮೂವರು ಅಪರಿಚಿತರು 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

ಸೋಮವಾರ ಸಂಜೆ 7 ಗಂಟೆ ಸುಮಾರಿಗೆ ಬಾಲಕಿ ತನ್ನ ಸ್ನೇಹಿತನೊಂದಿಗೆ ದೆಹಲಿಯ ಕಲ್ಕಾಜಿ ಮಂದಿರಕ್ಕೆ ಭೇಟಿ ನೀಡಿದ್ದ ವೇಳೆ ಈ ಘಟನೆ ನಡೆದಿದೆ.

ಕಲ್ಕಾಜಿ ಮಂದಿರದಲ್ಲಿ ದರ್ಶನ ಪಡೆದ ನಂತರ ಇಬ್ಬರೂ ಸಂಜೆ 7:30ರ ಸುಮಾರಿಗೆ ದೇವಾಲಯದ ಬಳಿಯ ಉದ್ಯಾನವನಕ್ಕೆ ತೆರಳಿದ್ದರು. ಈ ವೇಳೆ 25 ರಿಂದ 30 ವರ್ಷ ವಯಸ್ಸಿನ ಮೂವರು ಅಪರಿಚಿತರು ಅವರನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ. ಯುವಕರು ತಾವು ಪೊಲೀಸರೆಂದು ಹೇಳಿ ಇಬ್ಬರನ್ನು ಬೆದರಿಸಿ, ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ.

ಆರೋಪಿಗಳಲ್ಲಿ ಒಬ್ಬನು ಬಂದೂಕು ಮತ್ತು ಚಾಕುವಿನಿಂದ ಬೆದರಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದನು. ನಂತರ, ಇತರ ಇಬ್ಬರು ಆರೋಪಿಗಳು ಕೂಡ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಬಳಿಕ ಆರೋಪಿಗಳು ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತನಿಗೆ ಬೆದರಿಕೆ ಹಾಕಿದರು ಎಂದು ಪೊಲೀಸರು ತಿಳಿಸಿದ್ದಾರೆ.

File photo
ಸದರ್ ಬಜಾರ್ ಅಂಗಡಿಯಲ್ಲಿ ಹೀನ ಕೃತ್ಯ: ನೋಟ್‌ಬುಕ್ ಖರೀದಿಸಲು ಬಂದ ಬಾಲಕಿಗೆ ಕೈ-ಕಾಲು ಕಟ್ಟಿ ಹಾಕಿ ಅತ್ಯಾಚಾರ!

ದೆಹಲಿ ನಿವಾಸಿಯಾಗಿರುವ ಸಂತ್ರಸ್ತೆಯನ್ನ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಗಿದೆ. ಆಕೆಯ ಹೇಳಿಕೆಯ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ಹುಡುಕಾಟದಲ್ಲಿರುವ ಪೊಲೀಸರು, ಘಟನೆ ನಡೆದ ಸುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಪೋಕ್ಸೊ ಕಾಯ್ದೆ ಸೇರಿದಂತೆ ಸಂಬಂಧಿತ ಕಾನೂನಿನ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ತನಿಖೆಯ ಸಮಯದಲ್ಲಿ, ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚಲು ವಿವಿಧ ತಂಡಗಳನ್ನು ರಚಿಸಲಾಯಿತು. ತಂಡವೊಂದಕ್ಕೆ ಅಮರ್ ಕಾಲೋನಿಯ ಡಿಎಂ (DM) ಕಚೇರಿ ರಸ್ತೆಯ ಬಳಿ ಆರೋಪಿಗಳಲ್ಲಿ ಒಬ್ಬನ ಚಲನವಲನದ ಬಗ್ಗೆ ನಿರ್ದಿಷ್ಟ ಮಾಹಿತಿ ಲಭ್ಯವಾಯಿತು, ಅಲ್ಲಿ ಪೊಲೀಸ್ ತಂಡವು ಆತನನ್ನು ಬಂಧಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com