ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ; ನಾವಿಕರು, ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ನಿಲ್ಲಲಿ: ಕ್ಷಿಪಣಿ ದಾಳಿ ಬೆನ್ನಲ್ಲೇ ವಿಶ್ವಕ್ಕೆ ಭಾರತ ಖಡಕ್ ಸಂದೇಶ..!

ದಾಳಿಯ ಕುರಿತು ನಿಕಟವಾಗಿ ಗಮನಹರಿಸಲಾಗುತ್ತಿದ್ದು, ಹಡಗಿನಲ್ಲಿದ್ದ ಎಲ್ಲ ಸಿಬ್ಬಂದಿಯ ಸುರಕ್ಷತೆ, ಅದರಲ್ಲೂ 19 ಭಾರತೀಯ ನಾವಿಕರ ಸುರಕ್ಷತೆ ಕುರಿತು ಒಮಾನ್ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಲಾಗುತ್ತಿದೆ.
MEA Spokesperson Randhir Jaiswal
ವಿದೇಶಾಂಗ ಸಚಿವಾಲಯ ವಕ್ತಾರ ರಣಧೀರ್ ಜೈಸ್ವಾಲ್
Updated on

ನವದೆಹಲಿ: ಓಮನ್ ಕರಾವಳಿಯ ಬಳಿ ವಾಣಿಜ್ಯ ಹಡಗಿನ ಮೇಲೆ ನಡೆದ ಕ್ಷಿಪಣಿ ದಾಳಿಯಲ್ಲಿ ಭಾರತೀಯ ನಾವಿಕರೊಬ್ಬರು ಸಾವನ್ನಪ್ಪಿದ ಘಟನೆಯನ್ನು ಭಾರತ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ನಾವಿಕರು, ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ತಕ್ಷಣವೇ ನಿಲ್ಲಬೇಕೆಂದು ಆಗ್ರಹಿಸಿದೆ.

ಮಧ್ಯಪ್ರಾಚ್ಯದಲ್ಲಿ ಅಂತರರಾಷ್ಟ್ರೀಯ ವಾಣಿಜ್ಯ ಹಡಗುಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ದಾಳಿಗಳ ಬಗ್ಗೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ತೀವ್ರ ಕಳವಳ ವ್ಯಕ್ತಪಡಿಸಿದ್ದು, ಹಿಂಸಾಚಾರವನ್ನು ತಕ್ಷಣವೇ ನಿಲ್ಲಿಸುವಂತೆ ಕಟ್ಟುನಿಟ್ಟಿನ ಕರೆ ನೀಡಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಭಾರತೀಯ ರಾಯಭಾರ ಕಚೇರಿ, ಈ ದಾಳಿಯಲ್ಲಿ ಓರ್ವ ಭಾರತೀಯ ಪ್ರಜೆಯನ್ನು ಕಳೆದುಕೊಂಡಿರುವುದು ನಮಗೆ ತೀವ್ರ ದುಃಖ ತಂದಿದೆ. ಮೃತರ ಕುಟುಂಬಕ್ಕೆ ನಮ್ಮ ಹೃತ್ಪೂರ್ವಕ ಸಂತಾಪಗಳು. ಮೃತರ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದು, ಆರ್‌ಪಿಎಸ್‌ಎಲ್‌ನೊಂದಿಗೆ ಸಮನ್ವಯ ಸಾಧಿಸಲಾಗುತ್ತಿದೆ ಎಂದು ಹೇಳಿದೆ.

ಇದೇ ವೇಳೆ, ದಾಳಿಯನ್ನು ಖಂಡಿಸಿದ್ದು, ಈ ಪ್ರದೇಶದಲ್ಲಿ ವಾಣಿಜ್ಯ ಹಡಗುಗಳು, ನಾವಿಕರು ಹಾಗೂ ನಾಗರಿಕ ಮೂಲಸೌಕರ್ಯಗಳನ್ನು ಗುರಿಯಾಗಿಸುವುದನ್ನು ತಕ್ಷಣ ನಿಲ್ಲಿಸಬೇಕು ಎಂದು ಒತ್ತಾಯಿಸಿದೆ.

ಎಂವಿ ಕೇಪ್ ದಾವೋ ಹಡಗಿನಲ್ಲಿದ್ದ 20 ಭಾರತೀಯ ನಾವಿಕರ ಪೈಕಿ 19 ಮಂದಿಯನ್ನು ರಕ್ಷಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

MEA Spokesperson Randhir Jaiswal
ಓಮನ್ ನಲ್ಲಿ ವಾಣಿಜ್ಯ ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ಸಾವು!

ಭಾರತೀಯ ನಾವಿಕರನ್ನು ಶೀಘ್ರವಾಗಿ ಸ್ವದೇಶಕ್ಕೆ ಕರೆತರಲು ಮಸ್ಕತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದ್ದು, ಒಮಾನ್ ಅಧಿಕಾರಿಗಳೊಂದಿಗೆ ಸಕ್ರಿಯವಾಗಿ ಸಮನ್ವಯ ಸಾಧಿಸುತ್ತಿದೆ ಎಂದು ಸಚಿವಾಲಯ ಹೇಳಿದೆ.

ಇಂದು ಒಮಾನ್‌ನ ಪೂರ್ವ ಕರಾವಳಿಯ ಬಳಿ ವಾಣಿಜ್ಯ ಹಡಗು ಎಂವಿ ಕೇಪ್ ದಾವೋ ಮೇಲೆ ನಡೆದ ದಾಳಿಯನ್ನು ನಾವು ಖಂಡಿಸುತ್ತೇವೆ. ಹಡಗಿನಲ್ಲಿದ್ದ 20 ಭಾರತೀಯ ನಾವಿಕರ ಪೈಕಿ 19 ಮಂದಿಯನ್ನು ರಕ್ಷಿಸಲಾಗಿದೆ. ಓರ್ವ ಭಾರತೀಯ ಪ್ರಜೆ ದುರಂತವಾಗಿ ಮೃತಪಟ್ಟಿದ್ದಾರೆ. ಮೃತರ ಕುಟುಂಬಕ್ಕೆ ನಮ್ಮ ಆಳವಾದ ಸಂತಾಪಗಳನ್ನು ಸಲ್ಲಿಸುತ್ತೇವೆ.ಈ ಪ್ರದೇಶದಲ್ಲಿ ವಾಣಿಜ್ಯ ಹಡಗುಗಳ ಮೇಲೆ ದಾಳಿ ಮುಂದುವರಿಯುತ್ತಿರುವುದು "ತೀವ್ರ ಆತಂಕಕಾರಿ".

ಉದ್ವಿಗ್ನತೆಯನ್ನು ತಗ್ಗಿಸಲು ಮತ್ತು ಈ ಪ್ರದೇಶದಲ್ಲಿ ಶಾಂತಿ ಶೀಘ್ರವಾಗಿ ಮರಳಲು ಅನುವು ಮಾಡಿಕೊಡುವಂತೆ ಸಂವಾದ ಮತ್ತು ರಾಜತಾಂತ್ರಿಕ ಪ್ರಯತ್ನಗಳಿಗೆ ನಾವು ಮತ್ತೊಮ್ಮೆ ಕರೆ ನೀಡುತ್ತೇವೆ.

ಈ ಪ್ರದೇಶದಲ್ಲಿ ವಾಣಿಜ್ಯ ಹಡಗುಗಳು, ನಾವಿಕರು ಹಾಗೂ ನಾಗರಿಕ ಮೂಲಸೌಕರ್ಯಗಳನ್ನು ಗುರಿಯಾಗಿಸುವುದನ್ನು ನಿಲ್ಲಿಸಬೇಕು. ಈ ಪ್ರದೇಶದ ಅಂತಾರಾಷ್ಟ್ರೀಯ ಜಲಮಾರ್ಗಗಳ ಮೂಲಕ ಮುಕ್ತ ಹಾಗೂ ಯಾವುದೇ ಅಡೆತಡೆಯಿಲ್ಲದ ನೌಕಾಯಾನ ಮತ್ತು ವಾಣಿಜ್ಯ ಸಂಚಾರವನ್ನು ಆದಷ್ಟು ಬೇಗ ಪುನಃಸ್ಥಾಪಿಸಬೇಕು.

ದಾಳಿಯ ಕುರಿತು ನಿಕಟವಾಗಿ ಗಮನಹರಿಸಲಾಗುತ್ತಿದ್ದು, ಹಡಗಿನಲ್ಲಿದ್ದ ಎಲ್ಲ ಸಿಬ್ಬಂದಿಯ ಸುರಕ್ಷತೆ, ಅದರಲ್ಲೂ 19 ಭಾರತೀಯ ನಾವಿಕರ ಸುರಕ್ಷತೆ ಕುರಿತು ಒಮಾನ್ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಲಾಗುತ್ತಿದೆ ಎಂದು ತಿಳಿಸಿದೆ. ಇದೇ ವೇಳೆ ಓಮಾನ್ ಅಧಿಕಾರಿಗಳು ನೀಡಿದ ಸಹಕಾರಕ್ಕಾಗಿ ಭಾರತ ಧನ್ಯವಾದ ಸಲ್ಲಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com