ಪಂಜಾಬ್ LPU ಕ್ಯಾಂಪಸ್‌ನಲ್ಲಿ ಭೀಕರ ಹಿಂಸಾಚಾರ: ಕಿಡಿ ಹೊತ್ತಿಸಿದ ಸಾಮಾಜಿಕ ಜಾಲತಾಣದ ಸುಳ್ಳು ವದಂತಿ! ಅತ್ಯಾಚಾರ ಆರೋಪ ತಳ್ಳಿಹಾಕಿದ ಪೊಲೀಸರು

ಪಂಜಾಬಿನ ಫಗ್ವಾರಾದಲ್ಲಿರುವ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ ಕ್ಯಾಂಪಸ್‌ನಲ್ಲಿ ಹರಡಿದ ಅತ್ಯಾಚಾರ ಮತ್ತು ಆತ್ಮಹತ್ಯೆಯ ವದಂತಿಗಳಿಂದಾಗಿ ಭಾರಿ ವಿದ್ಯಾರ್ಥಿ ಪ್ರತಿಭಟನೆ ಹಾಗೂ ಹಿಂಸಾಚಾರ ನಡೆದಿದೆ. ಆ ಕುರಿತ ವರದಿ ಇಲ್ಲಿದೆ:
Punjab LPU Campus Violence: Massive Student Protests and Vandalism Over Fake Social Media Rumours
ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯಲ್ಲಿ ವಿದ್ಯಾರ್ಥಿಗಳ ದಾಂಧಲೆOnline Desk
Updated on: 

ಫಗ್ವಾರಾ (ಪಂಜಾಬ್): ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸಣ್ಣದೊಂದು ವದಂತಿ ಕೆಲವೇ ನಿಮಿಷಗಳಲ್ಲಿ ಎಂತಹ ಭೀಕರ ಅನಾಹುತ ಸೃಷ್ಟಿಸಬಹುದು ಎಂಬುದಕ್ಕೆ ಪಂಜಾಬ್‌ನ ಪ್ರತಿಷ್ಠಿತ ವಿಶ್ವವಿದ್ಯಾಲಯದಲ್ಲಿ ನಡೆದ ಘಟನೆಯೇ ಸಾಕ್ಷಿ.! ಹೌದು, ಪಂಜಾಬಿನ ಫಗ್ವಾರಾದಲ್ಲಿರುವ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ (LPU) ಕ್ಯಾಂಪಸ್‌ನಲ್ಲಿ ಹೊರಗಿನ ವ್ಯಕ್ತಿಯೊಬ್ಬರು ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಸಾಮಾಜಿಕ ಜಾಲತಾಣದಲ್ಲಿನ ವದಂತಿಗಳಿಂದಾಗಿ ಹಿಂಸಾಚಾರ ನಡೆದಿದೆ. ಆ ಕುರಿತ ವರದಿ ಇಲ್ಲಿದೆ:

ಏನಿದು ಪ್ರಕರಣ?

ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯಲ್ಲಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ್ದರಿಂದ, ಆರಂಭವಾದ ಪ್ರತಿಭಟನೆ ತಡರಾತ್ರಿ 2 ಗಂಟೆಯ ಸುಮಾರಿಗೆ ತೀವ್ರ ಹಿಂಸಾತ್ಮಕ ರೂಪಕ್ಕೆ ತಿರುಗಿತು. ಆಕ್ರೋಶಗೊಂಡ ಸುಮಾರು 2,000 ವಿದ್ಯಾರ್ಥಿಗಳು ಕ್ಯಾಂಪಸ್‌ನ ಕಿಟಕಿ ಗಾಜುಗಳನ್ನು, ಕುಂಡಗಳನ್ನು ಒಡೆದು ಹಾಕಿ ದಾಂಧಲೆ ನಡೆಸಿದರು. ಅಷ್ಟೇ ಅಲ್ಲದೆ, ವಿಶ್ವವಿದ್ಯಾಲಯದ ಕಟ್ಟಡದ ಕೆಲವು ಭಾಗಗಳು ಹಾಗೂ ವಾಹನಗಳಿಗೆ ಬೆಂಕಿ ಹಚ್ಚಿ ಭಾರಿ ಆಸ್ತಿ ಹಾನಿ ಮಾಡಿದರು. ಇದರೊಂದಿಗೆ, ಉದ್ರಿಕ್ತ ವಿದ್ಯಾರ್ಥಿಗಳು ಕ್ಯಾಂಪಸ್‌ನಿಂದ ಹೊರಬಂದು ಜಲಂಧರ್-ಫಗ್ವಾರಾ ರಾಷ್ಟ್ರೀಯ ಹೆದ್ದಾರಿಯನ್ನು ಸಂಪೂರ್ಣವಾಗಿ ಬ್ಲಾಕ್ ಮಾಡಿದರು. ಇದರಿಂದಾಗಿ ಹೆದ್ದಾರಿಯಲ್ಲಿ ಭಾರಿ ಸಂಚಾರ ದಟ್ಟಣೆ ಉಂಟಾಯಿತು.

ಪ್ರತಿಭಟನಾಕಾರರ ಪ್ರಕಾರ, ಕ್ಯಾಂಪಸ್‌ನಲ್ಲಿ ನಿರ್ಮಾಣ ಕಾರ್ಮಿಕನೊಬ್ಬ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ್ದರಿಂದ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಮತ್ತು ಆಡಳಿತ ಮಂಡಳಿ ಇದನ್ನು ಮುಚ್ಚಿಡಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದರು. ಏತನ್ಮಧ್ಯೆ, ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಕಪುರ್ತಲಾ ಎಸ್‌ಎಸ್‌ಪಿ ಗೌರವ್ ತೂರಾ ಮತ್ತು ಡಿಐಜಿ ನವೀನ್ ಸಿಂಗ್ಲಾ ನೇತೃತ್ವದ ಪೊಲೀಸ್ ಪಡೆ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿತು. ಇದರ ತರುವಾಯು ಪೊಲೀಸರು ಮತ್ತು ಎಲ್‌ಪಿಯು ಆಡಳಿತ ಮಂಡಳಿ ಜಂಟಿ ಹೇಳಿಕೆ ನೀಡಿ, ಅತ್ಯಾಚಾರ ಅಥವಾ ಆತ್ಮಹತ್ಯೆಗೆ ಸಂಬಂಧಿಸಿದಂತೆ ಯಾವುದೇ ದೂರು ದಾಖಲಾಗಿಲ್ಲ ಮತ್ತು ಯಾವುದೇ ಪುರಾವೆಗಳಿಲ್ಲ. ಇದೊಂದು ಸಂಪೂರ್ಣ ಸುಳ್ಳು ವದಂತಿ ಎಂದು ಸ್ಪಷ್ಟಪಡಿಸಿದ್ದಾರೆ.

Punjab LPU Campus Violence: Massive Student Protests and Vandalism Over Fake Social Media Rumours
ಮಮತಾ ಬಣದ ಟಿಎಂಸಿ ಶಾಸಕರ ಕಾರಿನ ಮೇಲೆ ಕಲ್ಲು, ಮೊಟ್ಟೆಗಳ ಎಸೆತ

ಮುಂದುವರೆದು, ಎಲ್‌ಪಿಯು ರಿಜಿಸ್ಟ್ರಾರ್ ಡಾ. ಮೋನಿಕಾ ಗುಲಾಟಿ ಅವರು, "ವಿಶ್ವವಿದ್ಯಾಲಯದ ಹೆಸರಿಗೆ ಮಸಿ ಬಳಿಯಲು ಕೆಲವು ಸಮಾಜವಿರೋಧಿ ಶಕ್ತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮತ್ತು ದಿಕ್ಕು ತಪ್ಪಿಸುವ ಮಾಹಿತಿಯನ್ನು ಹರಡುತ್ತಿದ್ದಾರೆ" ಎಂದು ತಿಳಿಸಿದ್ದಾರೆ. ವಿದ್ಯಾರ್ಥಿಗಳು ಇಂತಹ ಪ್ರಚೋದನಾಕಾರಿ ಚಟುವಟಿಕೆಗಳಲ್ಲಿ ಭಾಗಿಯಾಗದೆ ಶಾಂತವಾಗಿ ಹಾಸ್ಟೆಲ್ ರೂಮ್‌ಗಳಲ್ಲೇ ಇರುವಂತೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com