ಪಂಜಾಬ್‌ನ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ 'ಅತ್ಯಾಚಾರ' ಕೇಸ್: ಹಿಂಸಾಚಾರಕ್ಕೆ ತಿರುಗಿದ ವಿದ್ಯಾರ್ಥಿಗಳ ಪ್ರತಿಭಟನೆ, ದಾಂಧಲೆ; ಹೆದ್ದಾರಿ ತಡೆ

ಘಟನೆಯನ್ನು ಖಂಡಿಸಿ ನಡೆದ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆದುಕೊಂಡ ನಂತರ, ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ದಾಂಧಲೆ ನಡೆಸಿ ಕಟ್ಟಡದ ಕೆಲವು ಭಾಗಗಳಿಗೆ ಬೆಂಕಿ ಹಚ್ಚಿದರು. ನಿನ್ನೆ ತಡರಾತ್ರಿ ಆರಂಭವಾದ ಪ್ರತಿಭಟನೆ ಇಂದು ಬೆಳಗಿನವರೆಗೂ ಮುಂದುವರಿಯಿತು.
ಪಂಜಾಬ್‌ನ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ 'ಅತ್ಯಾಚಾರ' ಕೇಸ್: ಹಿಂಸಾಚಾರಕ್ಕೆ ತಿರುಗಿದ ವಿದ್ಯಾರ್ಥಿಗಳ ಪ್ರತಿಭಟನೆ, ದಾಂಧಲೆ; ಹೆದ್ದಾರಿ ತಡೆ
Updated on: 

ಚಂಡೀಗಢ: ಪಂಜಾಬ್‌ನ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ (LPU) ಆವರಣದಲ್ಲಿ, ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ನಡೆದಿದ್ದು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಘಟನೆಯನ್ನು ಖಂಡಿಸಿ ನಡೆದ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆದುಕೊಂಡ ನಂತರ, ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ದಾಂಧಲೆ ನಡೆಸಿ ಕಟ್ಟಡದ ಕೆಲವು ಭಾಗಗಳಿಗೆ ಬೆಂಕಿ ಹಚ್ಚಿದರು. ನಿನ್ನೆ ತಡರಾತ್ರಿ ಆರಂಭವಾದ ಪ್ರತಿಭಟನೆ ಇಂದು ಬೆಳಗಿನವರೆಗೂ ಮುಂದುವರಿಯಿತು.

ಆರಂಭದಲ್ಲಿ ವಿದ್ಯಾರ್ಥಿಗಳ ದೊಡ್ಡ ಗುಂಪು ಘೋಷಣೆಗಳನ್ನು ಕೂಗುತ್ತಾ ಮತ್ತು ನ್ಯಾಯಕ್ಕಾಗಿ ಆಗ್ರಹಿಸುತ್ತಾ ಪ್ರತಿಭಟನೆ ನಡೆಸುತ್ತಿರುವುದು ವಿಡಿಯೋಗಳಲ್ಲಿ ಕಂಡುಬಂದಿದೆ. ಆದರೆ, ಕೆಲ ವಿದ್ಯಾರ್ಥಿಗಳು ಕ್ಯಾಂಪಸ್‌ನೊಳಗಿನ ಕಿಟಕಿ ಗಾಜುಗಳು ಮತ್ತು ಹೂವಿನ ಕುಂಡಗಳನ್ನು ಧ್ವಂಸಗೊಳಿಸಿದಾಗ ಪರಿಸ್ಥಿತಿ ಹಿಂಸಾಚಾರಕ್ಕೆ ತಿರುಗಿತು. ವಿಶ್ವವಿದ್ಯಾಲಯದ ಕಟ್ಟಡದ ಭಾಗಗಳು ಸೇರಿದಂತೆ ಕೆಲವು ವಸ್ತುಗಳಿಗೆ ಬೆಂಕಿ ಹಚ್ಚಲಾಯಿತು.

ವಿದ್ಯಾರ್ಥಿಗಳ ಗುಂಪೊಂದು ಜಲಂಧರ್-ಫಗ್ವಾರಾ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ನಿಲ್ಲಿಸಿದ್ದರಿಂದ ಭಾರಿ ಸಂಚಾರ ದಟ್ಟಣೆ ಉಂಟಾಯಿತು.

ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿನಿಯೊಬ್ಬಳ ಮೇಲೆ ಸುಮಾರು ಮೂರು ದಿನಗಳ ಹಿಂದೆ ಅತ್ಯಾಚಾರ ನಡೆದಿದೆ ಮತ್ತು ಆಕೆ ತನ್ನ ಮನೆಗೆ ಮರಳಿದ್ದಾಳೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ ಎಂದು ಜಲಂಧರ್ ವಲಯದ ಉಪ ಪೊಲೀಸ್ ಮಹಾನಿರೀಕ್ಷಕ (DIG) ನವೀನ್ ಸಿಂಗ್ಲಾ ತಿಳಿಸಿದ್ದಾರೆ.

"ಆ ಹೇಳಿಕೆಯ ಆಧಾರದ ಮೇಲೆ ನಾವು ಅತ್ಯಾಚಾರ ಪ್ರಕರಣವನ್ನು ದಾಖಲಿಸಿಕೊಂಡಿದ್ದೇವೆ" ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಕ್ಯಾಂಪಸ್‌ನಲ್ಲಿ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಕಾರ್ಮಿಕನೊಬ್ಬ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ್ದಾನೆ ಮತ್ತು ನಂತರ ಕಾಲೇಜು ಆಡಳಿತ ಮಂಡಳಿಯು ಆಕೆಯನ್ನು ಮನೆಗೆ ಕಳುಹಿಸಿದೆ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಯೊಬ್ಬರು ಆರೋಪಿಸಿದರು. ಬಳಿಕ ಆಕೆಯ ರೂಮ್‌ಮೇಟ್ (ಜೊತೆಗಿದ್ದ ವಿದ್ಯಾರ್ಥಿನಿ), ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಇತರ ವಿದ್ಯಾರ್ಥಿಗಳಿಗೆ ತಿಳಿಸಿದ್ದಾರೆ.

ಪಂಜಾಬ್‌ನ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ 'ಅತ್ಯಾಚಾರ' ಕೇಸ್: ಹಿಂಸಾಚಾರಕ್ಕೆ ತಿರುಗಿದ ವಿದ್ಯಾರ್ಥಿಗಳ ಪ್ರತಿಭಟನೆ, ದಾಂಧಲೆ; ಹೆದ್ದಾರಿ ತಡೆ
ಪಂಜಾಬ್ LPU ಕ್ಯಾಂಪಸ್‌ನಲ್ಲಿ ಭೀಕರ ಹಿಂಸಾಚಾರ: ಕಿಡಿ ಹೊತ್ತಿಸಿದ ಸಾಮಾಜಿಕ ಜಾಲತಾಣದ ಸುಳ್ಳು ವದಂತಿ! ಅತ್ಯಾಚಾರ ಆರೋಪ ತಳ್ಳಿಹಾಕಿದ ಪೊಲೀಸರು

ಆರಂಭದಲ್ಲಿ ಪ್ರತಿಭಟನೆ ಶಾಂತಿಯುತವಾಗಿತ್ತು ಎಂದು ವಿದ್ಯಾರ್ಥಿಯೊಬ್ಬರು ವಿಡಿಯೋದಲ್ಲಿ ಹೇಳಿದ್ದಾರೆ. ಆದರೆ, ವಿಶ್ವವಿದ್ಯಾಲಯದ ಗೇಟ್‌ಗಳು ತೆರೆದಾಗ, ಕಾಲೇಜಿನ ಭಾಗವಾಗಿರದ ಕೆಲವು ಹೊರಗಿನವರು ಒಳಗೆ ನುಗ್ಗಿ ಗದ್ದಲ ಸೃಷ್ಟಿಸಿದರು. "ಅವರು ಕ್ಯಾಂಪಸ್‌ನಲ್ಲಿ ದಾಂಧಲೆ ನಡೆಸಿದರು. ಆದಾಗ್ಯೂ, ಇದೆಲ್ಲವೂ ಕೇವಲ ವದಂತಿ ಎಂದು ಆಡಳಿತ ಮಂಡಳಿ ಸಂದೇಶ ರವಾನಿಸಿತು."

ಯಾವುದೇ ಅತ್ಯಾಚಾರ ಘಟನೆಯ ಬಗ್ಗೆ ಪೊಲೀಸರ ಬಳಿ ಮಾಹಿತಿ ಇಲ್ಲ ಎಂದು ಕಪುರ್ಥಲಾದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (SSP) ಗೌರವ್ ತೂರಾ ಈ ಮೊದಲು ಹೇಳಿದ್ದರು.

"ವಿದ್ಯಾರ್ಥಿಗಳು ಜಲಂಧರ್ ಹೆದ್ದಾರಿಯನ್ನು ತಡೆದಿದ್ದಾರೆ ಎಂಬ ವಿಷಯ ನಿನ್ನೆ ರಾತ್ರಿ ನಮಗೆ ತಿಳಿಯಿತು. ನಾವು ಅಲ್ಲಿಗೆ ತೆರಳಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದೆವು. LPU ಆಡಳಿತ ಮಂಡಳಿಯೊಂದಿಗೆ ವಿದ್ಯಾರ್ಥಿಗಳು ಕೆಲವು ಸಮಸ್ಯೆಗಳನ್ನು ಪ್ರಸ್ತಾಪಿಸಿದ್ದಾರೆ ಮತ್ತು ಅತ್ಯಾಚಾರ ಪ್ರಕರಣದ ಬಗ್ಗೆ ವದಂತಿಗಳಿವೆ ಎಂಬುದು ಆಗ ನಮಗೆ ತಿಳಿದುಬಂತು. ಅಂತಹ ಅಪರಾಧದ ಬಗ್ಗೆ ನಮಗೆ ಯಾವುದೇ ದೂರು ಅಥವಾ ಮಾಹಿತಿ ಬಂದಿರಲಿಲ್ಲ" ಎಂದು ಅವರು ಹೇಳಿದರು.

LPUನ ವಿದ್ಯಾರ್ಥಿ ಸಂಘಟನೆಗಳೊಂದಿಗೆ ಮಾತನಾಡಿದ್ದೇನೆ ಮತ್ತು ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ತೂರಾ ಸೇರಿಸಿದರು. "ವಿಶ್ವವಿದ್ಯಾಲಯ ಮತ್ತು ವಿದ್ಯಾರ್ಥಿಗಳ ನಡುವೆ ತಪ್ಪು ತಿಳುವಳಿಕೆ ಉಂಟಾಗಿರುವಂತೆ ತೋರುತ್ತಿದೆ. ನಾವು ಅವರ ನಡುವೆ ಸಭೆಯೊಂದನ್ನು ಏರ್ಪಡಿಸಲು ಪ್ರಯತ್ನಿಸುತ್ತೇವೆ," ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com