ಗೆದ್ದಾಗ ಒಂದು ಲೆಕ್ಕ, ಸೋತಾಗ ಮತ್ತೊಂದು ಲೆಕ್ಕ; ರಾಹುಲ್ ಆರೋಪಗಳಿಗೆ 12 ರಾಜ್ಯಗಳ ಸಿಎಂಗಳನ್ನೇ ರಂಗಕ್ಕಿಳಿಸಿದ ಬಿಜೆಪಿ!

ಚುನಾವಣಾ ಆಯೋಗದಲ್ಲಿನ ಆಂತರಿಕ ಭಿನ್ನಾಭಿಪ್ರಾಯಗಳ ವರದಿಗಳ ಬೆನ್ನಲ್ಲೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ನಿರ್ಧಾರಗಳ ವಿರುದ್ಧ ರಾಹುಲ್ ಗಾಂಧಿ ಮಾಡಿರುವ ಗಂಭೀರ ಆರೋಪಗಳನ್ನು ಎದುರಿಸಲು, ಬಿಜೆಪಿ ತನ್ನ 12 ರಾಜ್ಯಗಳ ಮುಖ್ಯಮಂತ್ರಿಗಳನ್ನು ಏಕಕಾಲದಲ್ಲಿ ರಂಗಕ್ಕಿಳಿಸಿ ತಿರುಗೇಟು ನೀಡಿದೆ.
Rahul Gandhi Targets Election Commission, BJP Counters With 12 Chief Ministers In High-Stakes Faceoff
ರಾಹುಲ್ v/s 12CM’sOnline Desk
Updated on: 

ನವದೆಹಲಿ: ಚುನಾವಣಾ ಆಯೋಗದಲ್ಲಿನ ಆಂತರಿಕ ಭಿನ್ನಾಭಿಪ್ರಾಯಗಳ ವರದಿಗಳ ಬೆನ್ನಲ್ಲೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ನಿರ್ಧಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಾಡಿರುವ ಗಂಭೀರ ಆರೋಪಗಳನ್ನು ಎದುರಿಸಲು, ಬಿಜೆಪಿ ತನ್ನ 12 ರಾಜ್ಯಗಳ ಮುಖ್ಯಮಂತ್ರಿಗಳನ್ನು ಏಕಕಾಲದಲ್ಲಿ ರಂಗಕ್ಕಿಳಿಸಿ ಪ್ರಬಲ ತಿರುಗೇಟು ನೀಡಿದೆ. ಆ ಕುರಿತ ವರದಿ ಇಲ್ಲಿದೆ:

ವಿವಾದದ ಹಿನ್ನೆಲೆ ಏನು?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಸೇರಿದಂತೆ ಚುನಾವಣಾ ಆಯೋಗದ ಹಲವು ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ, ಇತರ ಇಬ್ಬರು ಚುನಾವಣಾ ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ಕಳೆದ 10 ತಿಂಗಳುಗಳಲ್ಲಿ ಸುಮಾರು 14 ಬಾರಿ ಲಿಖಿತ ಆಕ್ಷೇಪಣೆಗಳನ್ನು ವ್ಯಕ್ತಪಡಿಸಿದ್ದರು ಎಂದು ವರದಿಯಾಗಿತ್ತು. ಈ ಆಕ್ಷೇಪಣೆಗಳನ್ನು ಕಡೆಗಣಿಸಿ ಸಿಇಸಿ ಜ್ಞಾನೇಶ್ ಕುಮಾರ್ ಅವರು ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಚುನಾವಣಾ ಮ್ಯಾಚ್ ಫಿಕ್ಸಿಂಗ್

ಮುಂದುವರೆದು, ಜ್ಞಾನೇಶ್ ಕುಮಾರ್ ಅವರು ದೇಶದಲ್ಲಿ ಮತ ಕಳ್ಳತನ ಮಾಡುತ್ತಿದ್ದಾರೆ ಮತ್ತು ಪ್ರಜಾಪ್ರಭುತ್ವವನ್ನು ನಾಶಪಡಿಸುತ್ತಿದ್ದಾರೆ ಎಂದು ಆರೋಪಿಸಿದ ರಾಹುಲ್ ಗಾಂಧಿ, ಮುಖ್ಯ ಚುನಾವಣಾ ಆಯುಕ್ತರನ್ನು ದೇಶದ್ರೋಹಿ ಎಂದು ಕರೆದು ತಕ್ಷಣವೇ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದರು. ಜೊತೆಗೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಜ್ಞಾನೇಶ್ ಕುಮಾರ್ ಅವರಿಗೆ ರಕ್ಷಣೆ ನೀಡುತ್ತಿದ್ದು, ಈ ಕಾರಣದಿಂದಾಗಿ 2024ರ ಲೋಕಸಭಾ ಚುನಾವಣೆ ಹಾಗೂ ಇತ್ತೀಚಿನ ವಿಧಾನಸಭಾ ಚುನಾವಣೆಗಳಲ್ಲಿ ಚುನಾವಣಾ ಮ್ಯಾಚ್ ಫಿಕ್ಸಿಂಗ್ ನಡೆದಿದೆ ಎಂದು ರಾಹುಲ್ ಗಾಂಧಿ ದೂರಿದ್ದಾರೆ. ಇದರೊಂದಿಗೆ, ಕಾಂಗ್ರೆಸ್ ಪಕ್ಷವು ಸಿಇಸಿ ಜ್ಞಾನೇಶ್ ಕುಮಾರ್ ಅವರ ವಜಾ ಮತ್ತು ಬಂಧನಕ್ಕೆ ಆಗ್ರಹಿಸಿ ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿತ್ತು.

Rahul Gandhi Targets Election Commission, BJP Counters With 12 Chief Ministers In High-Stakes Faceoff
'2017ರಲ್ಲಿ ECಯನ್ನು ನಂಬಿದ್ದೆವು'; 2022ರಲ್ಲಿ ಚುನಾವಣಾ ಅಧಿಕಾರಿಗಳು SP ಮತಗಳನ್ನು ಅಳಿಸಿಹಾಕಿದ್ದಾರೆ: ಅಖಿಲೇಶ್ ಯಾದವ್

ಗೆದ್ದಾಗ ಒಂದು ವಾದ, ಸೋತಾಗ ಮತ್ತೊಂದು ವಾದ

ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡುತ್ತಿದ್ದಂತೆ, ಬಿಜೆಪಿಯು ತನ್ನ 12 ರಾಜ್ಯಗಳ ಮುಖ್ಯಮಂತ್ರಿಗಳನ್ನು ಆಯಾ ರಾಜ್ಯಗಳ ರಾಜಧಾನಿಗಳಲ್ಲಿ ಏಕಕಾಲಕ್ಕೆ ಪತ್ರಿಕಾಗೋಷ್ಠಿ ನಡೆಸುವಂತೆ ಮಾಡಿ ರಾಹುಲ್ ಗಾಂಧಿ ವಿರುದ್ಧ ಮಾಸ್ಟರ್ ಸ್ಟ್ರೋಕ್ ದಾಳಿ ಸಂಘಟಿಸಿತು. ಅದರಂತೆ, ಪಶ್ಚಿಮ ಬಂಗಾಳದ ಸುವೇಂದು ಅಧಿಕಾರಿ ಹಾಗೂ ಮಹಾರಾಷ್ಟ್ರದ ಏಕನಾಥ್ ಶಿಂಧೆ ಅವರು, ಕಾಂಗ್ರೆಸ್ ಮತ್ತು ಇಂಡಿ (INDIA) ಒಕ್ಕೂಟದ ಪಕ್ಷಗಳು ಕೇರಳ, ತೆಲಂಗಾಣ, ಹಿಮಾಚಲ ಪ್ರದೇಶ ಅಥವಾ ಕರ್ನಾಟಕದಲ್ಲಿ ಗೆದ್ದಾಗ ಚುನಾವಣಾ ಆಯೋಗ ಅಥವಾ ಇವಿಎಂ ಸರಿಯಾಗಿರುತ್ತದೆ. ಆದರೆ ಉಳಿದಡೆ ಸೋತಾಗ ಸಾಂವಿಧಾನಿಕ ಸಂಸ್ಥೆಗಳನ್ನು ದೂಷಿಸುತ್ತವೆ ಎಂದು ತಿರುಗೇಟು ನೀಡಿದ್ದಾರೆ. ಜೊತೆಗೆ, ವಿವಾದ ಹಿನ್ನೆಲೆ ಮತನಾಡಿದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್, "ದೇಶದಲ್ಲಿ ಯಾವುದೇ ಮತ ಕಳ್ಳತನವಾಗಿಲ್ಲ, ಬದಲಿಗೆ ರಾಹುಲ್ ಗಾಂಧಿ ಅವರ ಬುದ್ಧಿ ಕಳ್ಳತನವಾಗಿದೆ. ಸಂವಿಧಾನ ರಕ್ಷಣೆಯ ಹೆಸರಿನಲ್ಲಿ ಅವರು ಸಾಂವಿಧಾನಿಕ ಸಂಸ್ಥೆಗಳ ತೇಜೋವಧೆ ಮಾಡಿ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆ" ಎಂದು ಆರೋಪಿಸಿದರು.

Rahul Gandhi Targets Election Commission, BJP Counters With 12 Chief Ministers In High-Stakes Faceoff
'BJP ಟಿಕೆಟ್‌ನಲ್ಲಿ ಸ್ಪರ್ಧಿಸುವಂತೆ ಜ್ಞಾನೇಶ್ ಕುಮಾರ್ ಕೇಳಿದ್ದರು': ಕೇರಳದ ಮಾಜಿ ಮುಖ್ಯ ಕಾರ್ಯದರ್ಶಿ ಹೇಳಿಕೆ

ಇಂಡಿ ಒಕ್ಕೂಟವಲ್ಲ, ಸೋತವರ ಒಕ್ಕೂಟ

ಮತ್ತೊಂದೆಡೆ, ಕಾಂಗ್ರೆಸ್ ವಿರುದ್ದ ಹರಿಹಾಯ್ದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು, "ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (SIR) ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿಲ್ಲ; 1952, 1957, 1961, 1965 ಮತ್ತು 2003 ರಲ್ಲೂ ನಡೆದಿತ್ತು. ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ಇಂತಹ ಪ್ರಕ್ರಿಯೆಯ ಬಗ್ಗೆ ವಿಪಕ್ಷಗಳು ಅನಗತ್ಯ ಗೊಂದಲ ಮೂಡಿಸುತ್ತಿವೆ" ಎಂದು ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ ವಿಪಕ್ಷಗಳ ಒಕ್ಕೂಟದ ವಿರುದ್ದ ವ್ಯಂಗ್ಯವಾಡಿದ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರು "ರಾಹುಲ್ ಗಾಂಧಿ ನೇತೃತ್ವದ ಇಂಡಿ (INDIA) ಒಕ್ಕೂಟವನ್ನು ಸೋತವರ ಒಕ್ಕೂಟ" ಎಂದು ಟೀಕಿಸಿದರು.

ಏತನ್ಮಧ್ಯೆ, ಬಿಜೆಪಿ ಆಡಳಿತವಿಲ್ಲದ ರಾಜ್ಯಗಳಲ್ಲಿ ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ವಿರೋಧ ಪಕ್ಷದ ನಾಯಕರು ಸುದ್ದಿಗೋಷ್ಠಿ ನಡೆಸಿ, ವಿರೋಧ ಪಕ್ಷಗಳು ಚುನಾವಣಾ ಆಯೋಗದ ನಿಷ್ಪಕ್ಷಪಾತತೆಯನ್ನು ಪ್ರಶ್ನಿಸುವ ಮೂಲಕ ಸಾಂವಿಧಾನಿಕ ಸಂಸ್ಥೆಗಳನ್ನು ಹತ್ತಿಕ್ಕುವ ಪಿತೂರಿ ನಡೆಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com