

ಕಥುವಾ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್ಎಫ್)ಯ ಯೋಧ, ಓರ್ವ ಅಧಿಕಾರಿ ಸೇರಿದಂತೆ ನಾಲ್ವರು ಸಹೋದ್ಯೋಗಿಗಳನ್ನು ಗುಂಡಕ್ಕಿ ಹತ್ಯೆ ಮಾಡಿದ ಭೀಕರ ಘಟನೆ ನಡೆದಿದೆ.
ಸಿಬ್ಬಂದಿಗಳ ನಡವೆ ನಡೆದ ಜಗಳ ನಾಲ್ವರ ಕೊಲೆಯಲ್ಲಿ ಅಂತ್ಯವಾದ ಭೀಕರ ಘಟನೆ ಸೋಮವಾರ ಕಥುವಾದಲ್ಲಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಮೂಲಗಳ ಪ್ರಕಾರ, ಈ ಘಟನೆ ಬಸೋಹ್ಲಿಯ ಬೆಟ್ಟಗಳಲ್ಲಿರುವ ಸೇವಾ ವಿದ್ಯುತ್ ಯೋಜನೆಯ ಸಿಐಎಸ್ಎಫ್ ಶಿಬಿರದಲ್ಲಿ ನಡೆದಿದೆ.
ಗುಂಡಿನ ದಾಳಿಯಲ್ಲಿ ಸಹಾಯಕ ಕಮಾಂಡೆಂಟ್ ಸಹ ಮೃತಪಟ್ಟಿದ್ದು, ಗುಂಡು ಹಾರಿಸಿದ ಜವಾನ್ ಹೆಡ್ ಕಾನ್‌ಸ್ಟೆಬಲ್ ಆಗಿದ್ದು, ಆತನನ್ನು ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ತಿಳಿಸಿದೆ.