'ಮಾತು ಕೊಟ್ಟು ಈಗ FIR ದಾಖಲಿಸುತ್ತಿದ್ದೀರಿ, ಸ್ವಲ್ಪವಾದರೂ ನಾಚಿಕೆ ಇದ್ದರೆ ಅಮಿತ್ ಶಾ ರಾಜೀನಾಮೆ ಪಡೆಯಿರಿ': ಪ್ರಧಾನಿ ಮೋದಿ ವಿರುದ್ಧ ಖರ್ಗೆ ವಾಗ್ದಾಳಿ
ಹತ್ತು ದಿನಗಳ ಹಿಂದೆ ನಿಮ್ಮ ಸರ್ಕಾರ ದೇಶದ ಯುವಕರ ಮೇಲೆ ಲಾಠಿ ಹಾಗೂ ಪೆಲೆಟ್ ಗನ್‌ಗಳನ್ನು ಬಳಸಿ ದಾಳಿ ನಡೆಸಿತು. ವಿದ್ಯಾರ್ಥಿಗಳು ತಮ್ಮ ಪ್ರತಿಭಟನೆಯನ್ನು ಹಿಂಪಡೆದ ನಂತರ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ, ಬಲವಂತವಾಗಿ ಬಂಧನಕ್ಕೆ ಒಳಪಡಿಸುವ ಮೂಲಕ ಸರ್ಕಾರ ಪ್ರತೀಕಾರದ ರಾಜಕಾರಣ ಮಾಡುತ್ತಿದೆ.


