ಪ್ರಪಾತಕ್ಕೆ ಬಿದ್ದ ಖಾಸಗಿ ಬಸ್; ಹಿಮಾಚಲ ಪ್ರದೇಶದ ಚಂಬಾದಲ್ಲಿ ಭೀಕರ ಅಪಘಾತ; 7 ಜನ ಸಾವು
ಹಿಮಾಚಲ ಪ್ರದೇಶದಲ್ಲಿ ಬೆಳ್ಳಂಬೆಳ್ಳಗೆ ಜವರಾಯ ಅಟ್ಟಹಾಸ ಮೆರೆದಿದ್ದು, ತೀಸ್ಸಾ-ಬೈರಾಗಢ ರಸ್ತೆಯ ಅಪಾಯಕಾರಿ ತಿರುವಿನಲ್ಲಿ ಖಾಸಗಿ ಬಸ್ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿದ್ದಿದೆ. ಇದರ ಪರಿಣಾಮ ಕನಿಷ್ಠ 7 ಜನರು ಸಾವನ್ನಪ್ಪಿದ್ದಾರೆ ಮತ್ತು 11 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.


