ಮತದಾರರ ಪಟ್ಟಿಯಲ್ಲಿ ಭಗತ್ ಸಿಂಗ್ ಫೋಟೋ: ಚುನಾವಣಾ ಆಯೋಗದ ವಿರುದ್ಧ ಭುಗಿಲೆದ್ದ ಆಕ್ರೋಶ!
ಪಂಜಾಬ್‌ನ ಲುಧಿಯಾನದಲ್ಲಿ ಮತದಾರರ ಪಟ್ಟಿಯಲ್ಲಿ ಭಗತ್ ಸಿಂಗ್ ಅವರನ್ನು ಹೋಲುವ ಫೋಟೋ ಕಾಣಿಸಿಕೊಂಡ ನಂತರ ವಿವಾದ ಭುಗಿಲೆದ್ದಿತು. ಪೂರ್ವ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರನ್ನು ಹೋಲುವ ಫೋಟೋ ಮುದ್ರಿಸಲಾಗಿದೆ.


