ಧಾರ್ಮಿಕ ಕಾರಣಗಳಿಂದ 'ವಂದೇ ಮಾತರಂ' ಹಾಡಲು ಆಕ್ಷೇಪಿಸುವವರ ವಿರುದ್ಧ ದಂಡನಾತ್ಮಕ ಕ್ರಮ ಇಲ್ಲ: ಸುಪ್ರೀಂ ಕೋರ್ಟ್
ಕೃಷ್ಣ ಪರ ವಾದ ಮಂಡಿಸಿದ ಹಿರಿಯ ವಕೀಲ ಎಸ್. ಮುರಳೀಧರ್, ಆರು ಚರಣಗಳ ಪೈಕಿ ನಾಲ್ಕು ಚರಣಗಳಲ್ಲಿ ಹಿಂದೂ ದೇವತೆಗಳ ಮೇಲಿನ ಭಕ್ತಿಯನ್ನು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಹೀಗಾಗಿ ಅವುಗಳನ್ನು ಕಡ್ಡಾಯವಾಗಿ ಹಾಡುವಂತೆ ಮಾಡುವುದು ಸಂವಿಧಾನದ ಜಾತ್ಯತೀತ ಸ್ವರೂಪಕ್ಕೆ ವಿರುದ್ಧವಾಗುತ್ತದೆ ಎಂದು ವಾದಿಸಿದರು.


