Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
4 Soldiers Killed In Overnight Encounter In Pulwama: Sources

ಪುಲ್ವಾಮದಲ್ಲಿ ಮತ್ತೆ ಉಗ್ರರ ಅಟ್ಟಹಾಸ, ರಾತ್ರೋರಾತ್ರಿ 4 ಸೈನಿಕರು ಹುತಾತ್ಮ

Amid Indo-Pak tension, ICJ to hold public hearings in Kulbhushan Jadhav case from today

ಅಂತಾರಾಷ್ಟ್ರೀಯ ಕೋರ್ಟ್​ನಲ್ಲಿ ಇಂದಿನಿಂದ ಕುಲಭೂಷಣ್ ಜಾದವ್ ಪ್ರಕರಣದ ವಿಚಾರಣೆ

AnanthKumar Hegde

ಮುಸ್ಲಿಮರ ಬಗ್ಗೆ ಮಾತನಾಡಿದರೆ ಜೀವ ತೆಗೆಯುತ್ತೇವೆ: ಕೇಂದ್ರ ಸಚಿವ ಹೆಗಡೆಗೆ ಜೀವ ಬೆದರಿಕೆ ಕರೆ

Kamal hassan and M.k Stalin

ನಾನು ಹರಿದ ಅಂಗಿ ಧರಿಸಿ ನೌಟಂಕಿ ರಾಜಕಾರಣ ಮಾಡುವುದಿಲ್ಲ: ಸ್ಟಾಲಿನ್ ಗೆ ಕಮಲ್ ಹಾಸನ್ ಟಾಂಗ್

Assam CM Sarbananda Sonowal likens Pulwama incident to

ಭಾರತದ ಮೇಲೆ ಮೊಘಲರ ದಾಳಿ ಇನ್ನೂ ನಿಂತಿಲ್ಲ, ಪುಲ್ವಾಮ ದಾಳಿ ಇದಕ್ಕೊಂದು ಉದಾಹರಣೆ: ಅಸ್ಸಾಂ ಸಿಎಂ

Fact Check: Not CCTV clip of Pulwama Terror Attack, old footage from Iraq being pushed on social media

'ಫೇಕ್ ನ್ಯೂಸ್' ಅಬ್ಬರ: ಪುಲ್ವಾಮ ದಾಳಿ ವಿಡಿಯೋ ಅಲ್ಲ, ಇರಾನ್ ನ ವಿಡಿಯೋ!

Devotees take a dip at the on-going Kumbh Mela

ಟಿ ನರಸೀಪುರ: ತ್ರಿವೇಣಿ ಸಂಗಮದ ಕುಂಭಮೇಳ; ಮೊದಲ ದಿನವೇ ಸಾವಿರಾರು ಭಕ್ತರ ಆಗಮನ

M.B patil

'ಭಗವಾನ್, ಪ್ರತಾಪ್ ಸಿಂಹ ಅನಂತ್ ಕುಮಾರ್ ಹೆಗಡೆ' ನಿಮ್ಮ ನಾಲಗೆ ನಿಯಂತ್ರಣದಲ್ಲಿರಲಿ: ಪಾಟೀಲ್ ವಾರ್ನಿಂಗ್

Won

ಅಸ್ಸಾಂ ಮತ್ತೊಂದು ಕಾಶ್ಮೀರವಾಗಲು ಬಿಡುವುದಿಲ್ಲ: ಅಮಿತ್ ಶಾ

Siddaramiah

ಕುಮಾರಸ್ವಾಮಿಯನ್ನು ಸಿಲುಕಿಸಲು ಎಸ್‌ಐಟಿ ತನಿಖೆಗೆ ಸಿದ್ದರಾಮಯ್ಯ ಒತ್ತಾಯ: ಬಿಜೆಪಿ ಆರೋಪಕ್ಕೆ 'ಸಿದ್ದು' ತಿರುಗೇಟು

ChrisGayle

ವಿಶ್ವಕಪ್ ನಂತರ ವೆಸ್ಟ್ ಇಂಡೀಸ್ ಬ್ಯಾಟ್ಸ್ ಮನ್ ಕ್ರೀಸ್ ಗೇಲ್ ಏಕದಿನ ಕ್ರಿಕೆಟ್ ಗೆ ಗುಡ್ ಬೈ!

Casual Photo

ಪ್ರೇಮಿಗಳ ದಿನ ಬ್ಯಾಗ್ ನಲ್ಲಿದ್ದ ಪ್ರೇಮಪತ್ರ ಶಿಕ್ಷಕರ ಕೈಗೆ ಸಿಕ್ಕಿದ್ದರಿಂದ ವಿದ್ಯಾರ್ಥಿ ಆತ್ಮಹತ್ಯೆ

Jobless growth, rural indebtedness, urban chaos have made aspirational youth restless: Manmohan Singh

ನಿರುದ್ಯೋಗ ಹೆಚ್ಚಳ ಆಶಾವಾದಿ ಯುವಕರನ್ನು ಪ್ರಕ್ಷುಬ್ಧಗೊಳಿಸಿದೆ: ಮನಮೋಹನ್ ಸಿಂಗ್

ಮುಖಪುಟ >> ರಾಷ್ಟ್ರೀಯ

ಪೆಟ್ರೋಲ್ ದರ ಏರಿಕೆ ವಿರೋಧಿಸಿ ಇಡೀ ದೇಶ ಬೀದಿಗಿಳಿದಿದ್ದರೂ, ಪ್ರಧಾನಿ ಮೋದಿ ಮಾತ್ರ ಮೌನಿ: ರಾಹುಲ್ ಗಾಂಧಿ

ತೈಲೋತ್ಪನ್ನಗಳ ಬೆಲೆ ಏರಿಕೆ ಖಂಡಿಸಿ ಭಾರತ್ ಬಂದ್, ದೆಹಲಿ ಪ್ರತಿಭಟನಾ ರ್ಯಾಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ
PM Modi has not spoken a word on rising prices of fuel: Rahul Gandhi

ದೆಹಲಿ ಪ್ರತಿಭಟನಾ ರ್ಯಾಲಿಯಲ್ಲಿ ರಾಹುಲ್ ಗಾಂಧಿ

ನವದೆಹಲಿ: ನಿರಂತರ ಪೆಟ್ರೋಲಿಯಂ ಉತ್ಪನ್ನಗಳ ದರ ಏರಿಕೆ ವಿರೋಧಿಸಿ ಇಂದು ಇಡೀ ದೇಶ ಬೀದಿಗಿಳಿದು ಹೋರಾಟ ಮಾಡುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಮಾತ್ರ ಈ ಬಗ್ಗೆ ತಮ್ಮ ಮೌನ ಮುಂದುವರೆಸಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ತೈಲೋತ್ಪನ್ನಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷ ಕರೆ ನೀಡಿರುವ ಭಾರತ್ ಬಂದ್ ಚಾಲ್ತಿಯಲ್ಲಿದ್ದು, ದೆಹಲಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ಬೃಹತ್ ಪ್ರತಿಭಟನಾ ರ್ಯಾಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೂಡ ಪಾಲ್ಗೊಂಡಿದ್ದಾರೆ. ಈ ಹಿಂದೆ ಕೈಲಾಸ ಮಾನಸ ಸರೋವರ ಯಾತ್ರೆ ಕೈಗೊಂಡಿದ್ದ ರಾಹುಲ್ ಗಾಂಧಿ ಭಾರತ್ ಬಂದ್ ಹಿನ್ನಲೆಯಲ್ಲಿ ತಮ್ಮ ಯಾತ್ರೆಯನ್ನು ಅರ್ಧಕ್ಕೇ ಮೊಟಕುಗೊಳಿಸಿ ದೆಹಲಿಗೆ ವಾಪಸ್ ಆಗಿದ್ದಾರೆ.  ಅಲ್ಲದೆ ಇಂದು ದೆಹಲಿಯಲ್ಲಿ ಕಾಂಗ್ರೆಸ್ ಮುಖಂಡರೊಂದಿಗೆ ಸೇರಿ ಪಕ್ಷದ ಪ್ರತಿಭಟನಾ ಮೆರವಣಿಗೆಯಲ್ಲೂ ಪಾಲ್ಗೊಳ್ಳುವ ಮೂಲಕ ರಾಹುಲ್ ಬಂದ್ ಗೆ ಬೆಂಬಲ ನೀಡಿದರು. ಇಂದು ಬೆಳಗ್ಗೆ ಪಕ್ಷದ ಹಿರಿಯ ಮುಖಂಡರಾದ ಗುಲಾಂನಬಿ ಆಜಾದ್, ಅಶೋಕ್ ಗೆಹ್ಲೋಟ್ ಮತ್ತು ಆನಂದ್ ಶರ್ಮಾ ಅವರೊಂದಿಗೆ ರಾಜ್ ಘಾಟ್ ಗೆ ತೆರಳಿದ್ದ ರಾಹುಲ್ ಅಲ್ಲಿ ಮಹಾತ್ಮಗಾಂಧಿ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು. ಬಳಿಕ ಅಲ್ಲಿಯೇ ಸಮೀಪವಿದ್ದ ಪೆಟ್ರೋಲ್ ಬಂಕ್ ಗೆ ತೆರಳಿದ ರಾಹುಲ್ ಅಲ್ಲಿ ಪಕ್ಷದ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡರು. 

ಬಳಿಕ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರೆಲ್ಲರೂ ಪಾಲ್ಗೊಂಡಿದ್ದ ಪ್ರತಿಭಟನಾ ರ್ಯಾಲಿಯಲ್ಲಿ ಪಾಲ್ಗೊಂಡು ಮಾತನಾಡಿದ ರಾಹುಲ್ ಗಾಂಧಿ, ಮೋದಿ ಸರ್ಕಾರದ ಸರ್ವಾಧಿಕಾರಿ ಧೋರಣೆಯಿಂದಾಗಿ ಇಂದು ದೇಶದ ಜನ ಬೀದಿಗಿಳಿಯುವಂತಾಗಿದೆ. ತೈಲೋತ್ಪನ್ನಗಳ ದರ ಏರಿಕೆಯಿಂದಾಗಿ ಬೇಸತ್ತ ಜನ ಇಂದು ತಾವೇ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಆದರೆ ಪ್ರಧಾನಿ ಮೋದಿ ಮಾತ್ರ ತಮ್ಮ ಮೌನ ಮುಂದುವರೆಸಿದ್ದಾರೆ. ದರ ಏರಿಕೆಯಿಂದಾಗಿ ಇಂದು ಜನ ತತ್ತರಿಸಿ ಹೋಗಿದ್ದರೂ ಪ್ರಧಾನಿ ಮೋದಿ ಮಾತ್ರ ಈ ಬಗ್ಗೆ ಒಂದೇ ಒಂದು ಶಬ್ಧ ಮಾತನಾಡುತ್ತಿಲ್ಲ. ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ದೇಶದಲ್ಲಿ ಕೋಮು ಗಲಭೆ, ಗೋ ರಕ್ಷಣೆ ಹೆಸರಲ್ಲಿ ಹಿಂಸಾಚಾರ, ಮಹಿಳೆಯರ ಮೇಲಿನ ಹಿಂಸಾಚಾರ ಹೆಚ್ಚಾಗಿದ್ದರೂ ಪ್ರಧಾನಿ ಮೋದಿ ಮಾತ್ರ ಇನ್ನೂ ತಮ್ಮ ಮೌನ ಮುರಿದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದರು.

ಇಂದು ಈ ಸರ್ವಾಧಿಕಾರಿ ಸರ್ಕಾರದ ವಿರುದ್ಧ ವಿಪಕ್ಷಗಳು ಒಗ್ಗೂಡಿದ್ದು, ಭಾರತ್ ಬಂದ್ ನಮ್ಮ ಬಲ ಪ್ರದರ್ಶನಕ್ಕೆ ಸಾಕ್ಷಿಯಾಗಿದೆ. ಜನರ ಸಮಸ್ಯೆಗಳ ಬಗ್ಗೆ ಕಿಂಚಿತ್ತೂ ಆಲೋಚಿಸದ ಬಿಜೆಪಿ ಸರ್ಕಾರವನ್ನು ನಾವು ಕಿತ್ತೊಗೆಯುತ್ತೇವೆ. ಮುಂದಿನ ಚುನಾವಣೆಯಲ್ಲಿ ಜನ ತಮ್ಮ ಶಕ್ತಿ ಏನು ಎಂಬುದನ್ನು ಮೋದಿ ಮತ್ತು ಬಿಜೆಪಿಗೆ ತೋರಿಸುತ್ತಾರೆ ಎಂದು ರಾಹುಲ್ ಗಾಂಧಿ ಹೇಳಿದರು.

ಕಳೆದ ಆಗಸ್ಟ್ 31ರಂದು ಕೈಲಾಸ ಮಾನಸ ಸರೋವರ ಯಾತ್ರೆಗೆ ತೆರಳಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೆಪ್ಟೆಂಬರ್ 12ರಂದು ವಾಪಸ್ ಆಗಮಿಸಬೇಕಿತ್ತು. ಆದರೆ ತಮ್ಮ ಪಕ್ಷದ ನೇತೃತ್ವದಲ್ಲಿ ಭಾರತ್ ಬಂದ್ ಘೋಷಣೆ ಮಾಡಿರುವುದರಿಂದ ರಾಹುಲ್ ತಮ್ಮ ಯಾತ್ರೆಯನ್ನು ಮೊಟಕುಗೊಳಿಸಿ 2 ದಿನ ಮುಂಚಿತವಾಗಿಯೇ ದೆಹಲಿಗೆ ವಾಪಸ್ ಆಗಿದ್ದಾರೆ.
ಸಂಬಂಧಿಸಿದ್ದು...
Posted by: SVN | Source: ANI

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ!

Topics : New Delhi, Bharat Bandh, Rahul Gandhi, Congress, BJP, PM Modi, ನವದೆಹಲಿ, ಭಾರತ್ ಬಂದ್, ರಾಹುಲ್ ಗಾಂಧಿ, ಕಾಂಗ್ರೆಸ್, ಬಿಜೆಪಿ, ಪ್ರಧಾನಿ ಮೋದಿ

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS