ಮಲ್ಯ ಭೇಟಿ ವಿವಾದ: ಅರುಣ್ ಜೇಟ್ಲಿ ರಾಜಿನಾಮೆಗೆ ರಾಹುಲ್ ಗಾಂಧಿ ಆಗ್ರಹ

Published: 12 Sep 2018 11:58 PM IST
ರಾಹುಲ್ ಗಾಂಧಿ
ನವದೆಹಲಿ: ವಿದೇಶದಲ್ಲಿ ತಲೆಮರೆಸಿಕೊಂಡಿರುವ ಮದ್ಯದ ದೊರೆ ವಿಜಯ್ ಮಲ್ಯ, ತಾನು ದೇಶ ಬಿಡುವ ಮುನ್ನ ಹಣಕಾಸು ಸಚಿವರನ್ನು ಭೇಟಿ ಮಾಡಿರುವುದಾಗಿ ಹೇಳಿದ ಬೆನ್ನಲ್ಲೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು  ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ವಿಜಯ್ ಮಲ್ಯ ಹೇಳಿಕೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕೂಡಲೇ ಸ್ವತಂತ್ರ ತನಿಖೆಗೆ ಆದೇಶಿಸಬೇಕು ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಲಂಡನ್ ನಲ್ಲಿ ವಿಜಯ್ ಮಲ್ಯ ಅವರು ಗಂಭೀರ ಆರೋಪ ಮಾಡಿದ್ದು, ಈ ಕುರಿತು ಪ್ರಧಾನಿ ಮೋದಿ ಕೂಡಲೇ ತನಿಖೆಗೆ ಆದೇಶಿಸಬೇಕು ಮತ್ತು ಅರುಣ್ ಜೇಟ್ಲಿ ಅವರಿಂದ ರಾಜಿನಾಮೆ ಪಡೆದುಕೊಳ್ಳಬೇಕು ಎಂದು ರಾಹುಲ್ ಆಗ್ರಹಿಸಿದ್ದಾರೆ.

ಈ ಮಧ್ಯೆ, ಕಾಂಗ್ರೆಸ್ ನಾಯಕ ಪಿಎಲ್ ಪುನಿಯಾ ಅವರು, ವಿಜಯ್ ಮಲ್ಯ ಮತ್ತು ಅರುಣ್ ಜೇಟ್ಲಿ ಅವರು ಸಂಸತ್ ನ ಸೆಂಟ್ರಲ್ ಹಾಲ್ ನಲ್ಲಿ ಚರ್ಚಿಸುತ್ತಿರುವುದನ್ನು ನಾನು ನೋಡಿದ್ದೇನೆ. ಇದನ್ನು ಆ ದಿನದ ಸಿಸಿಟಿವಿ ದೃಶ್ಯಗಳಲ್ಲಿ ಪರಿಶೀಲಿಸಬಹುದು ಎಂದು ಹೇಳಿದ್ದಾರೆ.
Posted by: LSB | Source: ANI

ಈ ವಿಭಾಗದ ಇತರ ಸುದ್ದಿ