'Pushpa 2': ನಟ ಅಲ್ಲು ಅರ್ಜುನ್ ವಿರುದ್ಧ ಕೇಸ್- ಹೈದರಾಬಾದ್ ಪೊಲೀಸ್
ಹೈದರಾಬಾದ್: ಪುಷ್ಪ 2 ಸಿನಿಮಾ ನಟ ಅಲ್ಲು ಅರ್ಜುನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಹೈದರಾಬಾದ್ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸಿನಿಮಾದ ಪ್ರೀಮಿಯರ್ ಶೋ ವೇಳೆಯಲ್ಲಿ ಯಾವುದೇ ಮಾಹಿತಿ ನೀಡದೇ ಹೈದರಾಬಾದ್ ನ ಥಿಯೇಟರ್ ಒಂದಕ್ಕೆ ಅಲ್ಲು ಅರ್ಜುನ್ ಭೇಟಿ ನೀಡಿದ್ದರು. ನೆಚ್ಚಿನ ನಟನನ್ನು ನೋಡಲು ಅಲ್ಲಿ ನೆರೆದಿದ್ದ ಜನರು ಮುಗಿಬಿದ್ದ ಪರಿಣಾಮ ಕಾಲ್ತುಳಿತ ಉಂಟಾಗಿತ್ತು. ಘಟನೆಯಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದರು.
ಘಟನೆಯ ಸಂಬಂಧ ಅಲ್ಲು ಅರ್ಜುನ್ ವಿರುದ್ಧ 105, 118(1)r/w 3(5) ಬಿಎನ್ಎಸ್ ಕಾಯ್ದೆಯಡಿ ಚಿಕ್ಕಡಪಲ್ಲಿ ಪೊಲೀಸ್ ಠಾಣೆಯಲ್ಲಿ ಮೃತರ ಕುಟುಂಬ ಸದಸ್ಯರ ದೂರನ್ನು ಆಧರಿಸಿ ಪ್ರಕರಣ ದಾಖಲಿಸಲಾಗಿದೆ ಎಂದು ಹೈದರಾಬಾದ್ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ನಟ ಅಲ್ಲು ಅರ್ಜುನ್ ಅಷ್ಟೇ ಅಲ್ಲದೇ ಹೆಚ್ಚುವರಿ ಭದ್ರತೆಗೆ ವ್ಯವಸ್ಥೆ ಮಾಡದ, ಜನದಟ್ಟನೆ ನಿರ್ವಹಣೆಗೆ ಕ್ರಮ ಕೈಗೊಳ್ಳದ ಸಂಧ್ಯಾ ಥಿಯೇಟರ್ ನ ಆಡಳಿತ ಮಂಡಳಿಯ ವಿರುದ್ಧವೂ ಪ್ರಕರಣ ದಾಖಲಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೈದರಾಬಾದ್ ಪೊಲೀಸ್ ಕಮಿಷನರ್ ಸಿವಿ ಆನಂದ್ ಹೇಳಿಕೆ ನೀಡಿದ್ದು, "ಥಿಯೇಟರ್‌ಗೆ ಭೇಟಿ ನೀಡುವ ಕುರಿತು ಥಿಯೇಟರ್ ಆಡಳಿತ ಅಥವಾ ನಟರ ತಂಡದಿಂದ ಯಾವುದೇ ಸೂಚನೆ ಬಂದಿಲ್ಲ" ಎಂದು ತಿಳಿಸಿದ್ದಾರೆ.
ಥಿಯೇಟರ್ ಆಡಳಿತಕ್ಕೆ ಅವರ ಆಗಮನದ ಬಗ್ಗೆ ತಿಳಿದಿದ್ದರೂ ಸಹ ನಟ ಮತ್ತು ಅವರ ತಂಡಕ್ಕೆ ಪ್ರತ್ಯೇಕ ಪ್ರವೇಶ ಅಥವಾ ನಿರ್ಗಮನವಿಲ್ಲ ಎಂದು ಉನ್ನತ ಪೋಲೀಸ್ ಹೇಳಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ