ದೆಹಲಿಯ ಕರ್ತವ್ಯಪಥದಲ್ಲಿ ಇದೇ 26ರಂದು ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪ್ರದರ್ಶಿಸಲು ಅಸ್ಸಾಂ, ಮಹಾರಾಷ್ಟ್ರ, ಉತ್ತರಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಗುಜರಾತ್, ಪಶ್ಚಿಮಬಂಗಾಳ ಸೇರಿ ಹಲವು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಈ ಬಾರಿ ‘ನಾರಿ ಶಕ್ತಿ’ ಪರಿಕಲ್ಪನೆಯಡಿ ಸಜ್ಜುಗೊಳಿಸುತ್ತಿರುವ ವರ್ಣರಂಜಿತ ಸ್ತಬ್ಧ ಚಿತ್ರಗಳು ಮೆರವಣಿಗೆಗೆ ಕಳೆ ತರಲಿವೆ.