1983ರ ವಿಶ್ವಕಪ್ ವಿಜೇತ ಭಾರತ ತಂಡದ ನಾಯಕನ ಕಥೆ ಹೇಳಲಿರುವ ಕಪೀಲ್ ದೇವ್ ಬಯೋಪಿಕ್ ನಲ್ಲಿ ರಣವೀರ್ ಸಿಂಗ್ ನಾಯನ ನಟನಾಗಿ ಅಭಿನಯಿಸುತ್ತಿದ್ದಾರೆ.
ಮಾನವ ಕಂಪ್ಯೂಟರ್ ಎಂದೇ ಖ್ಯಾತಿ ಗಳಿಸಿದ್ದ ವಿಶ್ವವಿಖ್ಯಾತ ಭಾರತೀಯ ಗಣಿತಶಾಸ್ತ್ರಜ್ಞೆ ಶಕುಂತಲಾ ದೇವಿ ಜೀವನಾಧಾರಿತ ಚಿತ್ರದಲ್ಲಿ ವಿದ್ಯಾಬಾಲನ್ ಶಕುಂತಲಾ ದೇವಿ ಆಗಿ ಅಭಿನಯಿಸುತ್ತಿದ್ದಾರೆ.
ಕಾರ್ಗಿಲ್ ಯುದ್ಧ ವಲಯ ಪ್ರವೇಶಿಸಿದ ಭಾರತೀಯ ವಾಯುಪಡೆಯ ಮೊದಲ ಮಹಿಳೆ ಗುಂಜನ್ ಸಕ್ಸೇನಾ ಪಾತ್ರದಲ್ಲಿ ಜಾಹ್ನವಿ ಕಪೂರ್ ಕಾಣಿಸಿಕೊಳ್ಳಲಿದ್ದಾರೆ.
ಕಾರ್ಗಿಲ್ ಯುದ್ಧದಲ್ಲಿ ಅಭೂತಪೂರ್ವ ಶೌರ್ಯ ಪ್ರದರ್ಶಿಸಿ ಮರಣೋತ್ತರವಾಗಿ ಶೌರ್ಯ ಪ್ರಶಸ್ತಿಪಡೆದಿದ್ದ ಭಾರತೀಯ ಸೇನಾಧಿಕಾರಿ ಕ್ಯಾಪ್ಟನ್ ವಿಕ್ರಮ್ ಬಾತ್ರಾ ಬಗ್ಗೆ ಸಿದ್ದಾರ್ಥ್ ಮಲ್ಹೋತ್ರಾ ಚಿತ್ರ ಮಾಡುತ್ತಿದ್ದಾರೆ.
ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಸರ್ದಾರ್ ಉದ್ಧಮ್ ಸಿಂಗ್ ಪಾತ್ರದಲ್ಲಿ ವಿಕ್ಕಿ ಕೌಶಲ್ ಕಾಣಿಸಿಕೊಳ್ಳಲಿದ್ದಾರೆ.
ಪುಬ್ಬಾಲ್ ಕೋಚ್ ಸೈಯದ್ ಅಬ್ದುಲ್ ರಹೀಂ ಅವರ ಕಥೆಯಾಧಾರಿತ 'ಮೈದಾನ್' ಚಿತ್ರದಲ್ಲಿ ಅಜಯ್ ದೇವಗನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.