ರಾಜ್ಯಕ್ಕೆ ನೂತನ ಸಾರಥಿ: ಬಸವ'ರಾಜ' ಬೊಮ್ಮಾಯಿಗೆ ಸಿಎಂ ಪಟ್ಟ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಜುಲೈ 28, 2021ರ ಬುಧವಾರ ಪ್ರಮಾಣ ವಚನ ಸ್ವೀಕರಿಸಿಕೊಂಡಿದ್ದಾರೆ. ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಪದಗ್ರಹಣದ ಚಿತ್ರಗಳು.
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಜುಲೈ 28, 2021ರ ಬುಧವಾರ ಪ್ರಮಾಣ ವಚನ ಸ್ವೀಕರಿಸಿಕೊಂಡಿದ್ದಾರೆ.

Updated on
ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು.

ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮುನ್ನ ಬೊಮ್ಮಾಯಿಯವರು ಬಿ ಎಸ್ ಯಡಿಯೂರಪ್ಪ, ಧರ್ಮೇಂದ್ರ ಪ್ರಧಾನ್, ಕಿಶನ್ ರೆಡ್ಡಿ ಮತ್ತು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿದ್ದರು.

ರಾಜಕೀಯ ವಿದ್ಯಾಮಾನದಲ್ಲಿ ಬಿ ಎಸ್ ಯಡಿಯೂರಪ್ಪನವರು 4ನೇ ಅವಧಿಗೆ ಅಧಿಕಾರ ಪೂರ್ಣಗೊಳಿಸದೆ ರಾಜೀನಾಮೆ ಸಲ್ಲಿಸಿದರು. ನಂತರ ನಡೆದ ಬಿಜೆಪಿ ಶಾಸಕಾಂಗ ಪಕ್ಷ ಸಭೆಯಲ್ಲಿ ಬಸವರಾಜ ಬೊಮ್ಮಾಯಿಯವರನ್ನು ಸರ್ವಾನುಮತದಿಂದ ನೂತನ ಸಿಎಂ ಎಂದು ಘೋಷಿಸಲಾಯಿತು.

ಉತ್ತರ ಕರ್ನಾಟಕದ ಲಿಂಗಾಯತ ನಾಯಕ ಬೊಮ್ಮಾಯಿಯವರು ಯಡಿಯೂರಪ್ಪನವರಿಗೆ ನಿಷ್ಠಾವಂತ. ಬೊಮ್ಮಾಯಿಯವರ ಆಯ್ಕೆಯಲ್ಲಿ ಯಡಿಯೂರಪ್ಪನವರ ಪಾತ್ರ ಮತ್ತು ಪ್ರಭಾವ ನಿಚ್ಚಳವಾಗಿದೆ ಎಂದು ಪಕ್ಷದ ಮೂಲಗಳು ಹೇಳುತ್ತವೆ.

ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ಆರ್ ಬೊಮ್ಮಾಯಿಯವರ ಮಗ ಇಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಈ ಹಿಂದೆ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಗೃಹ, ಕಾನೂನು, ಸಂಸದೀಯ ವ್ಯವಹಾರಗಳ ಸಚಿವರಾಗಿ ಅಧಿಕಾರ ನಡೆಸಿದ ಅನುಭವವಿದೆ.

ತಿಂಗಳುಗಳಿಂದ ಬಿ ಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನದಿಂದ ಇಳಿಯುತ್ತಾರೆ ಎಂಬ ಊಹಾಪೋಹಗಳಿಗೆ ಕೊನೆಗೂ ಪೂರ್ಣ ವಿರಾಮ ಹಾಕಿದ್ದು ಮೊನ್ನೆ ಸೋಮವಾರ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಿದ್ದರು. ಬಿಜೆಪಿ ಸರ್ಕಾರದಲ್ಲಿ 2 ವರ್ಷ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ್ದರು.

ಹಾವೇರಿ ಜಿಲ್ಲೆಯ ಶಿಗ್ಗಾಂವ್ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿ ಬಂದಿರುವ ಬೊಮ್ಮಾಯಿಯವರು ಎರಡು ಬಾರಿ ವಿಧಾನಪರಿಷತ್ ಸದಸ್ಯರು ಕೂಡ ಆಗಿದ್ದಾರೆ.

ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿರುವುದು ಪಕ್ಷದಲ್ಲಿ ಎಲ್ಲರಿಗೂ ಖುಷಿಯ ವಿಚಾರ. ನಾನು ಮತ್ತು ಬೊಮ್ಮಾಯಿ ಸ್ನೇಹಿತರು, ಪಕ್ಷದ ಸೂಚನೆಯಂತೆ ಇನ್ನು ಮುಂದೆಯೂ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.

ನಿನ್ನೆಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ವೀಕ್ಷಕರಾಗಿ ಕೇಂದ್ರದಿಂದ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್ ಮತ್ತು ಜಿ ಕಿಶನ್ ರೆಡ್ಡಿ, ಕರ್ನಾಟಕದ ಉಸ್ತುವಾರಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ರಾ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com