Photos: ಹಿಮಾಚಲ ಪ್ರದೇಶದಲ್ಲಿ ನಿಲ್ಲದ ಮಳೆ; ಹಲವೆಡೆ ಭೂಕುಸಿತ, ಈವರೆಗೂ ಕನಿಷ್ಠ 30 ಜನರು ಸಾವು

ಹಿಮಾಚಲ ಪ್ರದೇಶದಲ್ಲಿ ಎಡಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಮಂಗಳವಾರದ ಹೊತ್ತಿಗೆ ಹಿಮಾಚಲ ಪ್ರದೇಶದಾದ್ಯಂತ ಕನಿಷ್ಠ 30 ಜನರು ಸಾವಿಗೀಡಾಗಿದ್ದು, 36 ಭೂಕುಸಿತಗಳು ವರದಿಯಾಗಿವೆ. ಕಾಂಗ್ರಾ ಜಿಲ್ಲೆಯಲ್ಲಿ ಸುಮಾರು 500 ಜನರನ್ನು ಸ್ಥಳಾಂತರಿಸಲಾಗಿದೆ.
ಭಾರಿ ಮಳೆಯಿಂದಾಗಿ ಮಂಗಳವಾರದ ಹೊತ್ತಿಗೆ ಹಿಮಾಚಲ ಪ್ರದೇಶದಾದ್ಯಂತ ಕನಿಷ್ಠ 30 ಜನರು ಸಾವಿಗೀಡಾಗಿದ್ದು, 36 ಭೂಕುಸಿತಗಳು ವರದಿಯಾಗಿವೆ. ಕುಲು ಜಿಲ್ಲೆಯಲ್ಲಿ ಬಿಯಾಸ್ ನದಿ ತುಂಬಿ ಹರಿಯುತ್ತಿದೆ.

Updated on
ಕಾಂಗ್ರಾ ಜಿಲ್ಲೆಯಲ್ಲಿ ಸುಮಾರು 500 ಜನರನ್ನು ಸ್ಥಳಾಂತರಿಸಲಾಗಿದೆ. ಮಂಡಿ, ಕಂಗ್ರಾ ಮತ್ತು ಚಂಬಾ ಜಿಲ್ಲೆಗಳಲ್ಲಿ ಗರಿಷ್ಠ ಹಾನಿ ವರದಿಯಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ತಿಳಿಸಿದೆ.

ಭಾರಿ ಮಳೆಯಿಂದಾಗಿ ಹಲವು ನದಿಗಳು ತುಂಬಿ ಹರಿಯುತ್ತಿದ್ದು, ಚರಂಡಿ ನೀರು ಮನೆಗೆ ನುಗ್ಗಿದೆ. ಹಲವೆಡೆ ಮನೆ ಕುಸಿತ, ಭೂಕುಸಿತ ಮತ್ತು ಮೇಘಸ್ಫೋಟ ಉಂಟಾಗಿದೆ ಎಂದು ಸರ್ಕಾರದ ಮಾಹಿತಿ ತಿಳಿಸಿದೆ.

ಚಂಬಾ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ರಸ್ತೆಯಲ್ಲಿ ಕಮರಿ ಉಂಟಾಗಿದ್ದು, ಬಂಡೆಯ ಅಂಚಿನಲ್ಲಿದ್ದ ಬಸ್ ಸ್ವಲ್ಪದರಲ್ಲಿ ಬಚಾವ್ ಆಗಿದೆ.

ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರು ಮಳೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರ ಮನೆಗಳಿಗೆ ಭೇಟಿ ನೀಡಿದ್ದಾರೆ. ಸಿಎಂ ತವರು ಜಿಲ್ಲೆ ಮಂಡಿಯಲ್ಲಿ ಶನಿವಾರದ ವೇಳೆಗೆ 13 ಮಂದಿ ಮೃತಪಟ್ಟಿದ್ದು, ಇನ್ನೂ ಐವರು ಸಾವಿಗೀಡಾಗಿರುವ ಭೀತಿ ಎದುರಾಗಿದೆ.

ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಭಾರಿ ಮಳೆಯಿಂದಾಗಿ ಹಾನಿಗೊಳಗಾದ ರಸ್ತೆಯನ್ನು ಮಹಿಳೆ ಮತ್ತು ಮಗು ನೋಡುತ್ತಿದ್ದಾರೆ.

ಮಂಡಿಯಲ್ಲಿ ಭಾರಿ ಮಳೆಯಿಂದಾಗಿ ಉಂಟಾದ ಭೂಕುಸಿತದಲ್ಲಿ ಮನೆಯೊಂದು ಸಮಾಧಿಯಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಕಳೆದ ಶುಕ್ರವಾರ ಕಾಂಗ್ರಾದ ಮೆಕ್‌ಲಿಯೋಡ್ ಗಂಜ್‌ನಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ರಸ್ತೆಯ ಮೇಲೆ ಮಣ್ಣಿನ ರಾಶಿ ಬಿದ್ದಿದೆ.

ಧರ್ಮಶಾಲಾದಲ್ಲಿ ಭಾರಿ ಮಳೆಯಿಂದಾಗಿ ಉಂಟಾದ ಹಠಾತ್ ಪ್ರವಾಹದಿಂದ ಚಕ್ಕಿ ನದಿ ಮೇಲೆ ನಿರ್ಮಿಸಿದ್ದ ರೈಲ್ವೆ ಸೇತುವೆ ಕುಸಿದಿದೆ.

ಮಂಡಿಯಲ್ಲಿ ಭಾರಿ ಮಳೆಯಿಂದಾಗಿ ಹಠಾತ್ ಪ್ರವಾಹಕ್ಕೆ ಸಿಲುಕಿ ಹಾನಿಗೊಳಗಾದ ವಾಹನಗಳು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com