ಬಿಸಿಸಿಐ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ತಾರೆಗಳ ಕಲರವ
2016-17 ಮತ್ತು 2017-18ನೇ ಸಾಲಿನ ಬಿಸಿಸಿಐ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಿನ ಪಂಚತಾರಾ ಹೊಟೇಲ್ ನಲ್ಲಿ ಅದ್ದೂರಿಯಾಗಿ ನೆರವೇರಿತು. ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮ ಸಮಾರಂಭದ ಮುಖ್ಯ ಆಕರ್ಷಣೆಯಾಗಿದ್ದರು.ಭಾರತ ತಂಡದ ಮಾಜಿ ನಾಯಕ ಮಾನ್ಸೂರ್ ಆಲಿ ಖಾನ್ ಪಟೌಡಿ
2016-17 ಮತ್ತು 2017-18ನೇ ಸಾಲಿನಲ್ಲಿ ಅತ್ಯುತ್ತಮ ಸಾಧನೆ ಪ್ರದರ್ಶಿಸಿದ ವಿರಾಟ್ ಕೊಹ್ಲಿಗೆ ವರ್ಷದ ಶ್ರೇಷ್ಠ ಕ್ರಿಕೆಟಿಗ ಪ್ರಶಸ್ತಿ ನೀಡಿ ಗೌರವಿಸಲಾಯಿತು. ತಮ್ಮ ವೃತ್ತಿ ಬದುಕಿನಲ್ಲಿ 5ನೇ ಬಾರಿಗೆ ಕೊಹ್ಲಿ ಪಾಲಿ ಉಮ್ರಿಗರ್ ಶ್ರೇಷ್ಠ ಕ್ರಿಕೆಟಿಗ ಪ್ರಶಸ್ತಿಗೆ ಭಾಜನರಾದರು.
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡೇವಿಡ್ ಜಾನ್ ರಿಚರ್ಡ್ಸನ್ ಅವರಿಂದ ಪ್ರಶಸ್ತಿ ಸ್ವೀಕರಿಸಿದ ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ.
6ನೇ ಎಂ.ಎ.ಕೆ ಪಟೌಡಿ ಸ್ಮರಣಾರ್ಥ ಉಪನ್ಯಾಸ ಮತ್ತು ಬಿಸಿಸಿಐ ವಾರ್ಷಿಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್.
ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಗ್ರೂಪ್ ಫೋಟೋ ಸೆಷನ್ ನಲ್ಲಿ ಎಡಗಡೆಯಿಂದ ಬಲಕ್ಕೆ ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅವರ ಪತ್ನಿ ದೀಪಿಕಾ ಪಳ್ಳಿಕಳ್, ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮ ಮತ್ತು ಕೆ ಎಲ್ ರಾಹುಲ್
ಭಾರತ ತಂಡದ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಮತ್ತು ಅವರ ಪತ್ನಿ ಭಾರತದ ಸ್ಕ್ವಾಶ್ ಆಟಗಾರ್ತಿ ದೀಪಿಕಾ ಪಳ್ಳಿಕಳ್ ಬಿಸಿಸಿಐ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ವಿರಾಟ್ ಕೊಹ್ಲಿ ಮತ್ತು ಅನುಷ್ಕಾಶರ್ಮ ಜೊತೆ.
ಕಾರ್ಯಕ್ರಮದಲ್ಲಿ ದಿನೇಶ್ ಕಾರ್ತಿಕ್ ಮತ್ತು ದೀಪಿಕಾ ಪಳ್ಳಿಕಳ್ ಜೊತೆ ಫೋಟೋ ತೆಗೆಸಿಕೊಂಡ ಕ್ರಿಕೆಟರ್ ಗಳಾದ ಹಾರ್ದಿಕ್ ಪಾಂಡ್ಯ ಮತ್ತು ಕೆ ಎಲ್ ರಾಹುಲ್