
ಭಾರತ ತಂಡದ ಖ್ಯಾತ ಕ್ರಿಕೆಟಿಗ ಜಸ್ಪ್ರೀತ್ ಬುಮ್ರಾ ಹಾಗೂ ಖ್ಯಾತ ಕ್ರೀಡಾ ಟಿವಿ ನಿರೂಪಕಿ ಸಂಜನಾ ಗಣೇಶನ್ ಅವರು ಇಂದು ಪರಸ್ಪರ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.
1 / 10

ಈ ಜೋಡಿ ಆಪ್ತ ಸ್ನೇಹಿತರು ಮತ್ತು ಸಂಬಂಧಿಕರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದು, ಕೋವಿಡ್ ಕಾರಣದಿಂದಾಗಿ ಕೆಲವೇ ಆಪ್ತ ಸ್ನೇಹಿತರು ಮತ್ತು ಕುಟುಂಬಸ್ಥರಿಗೆ ಮಾತ್ರ ವಿವಾಹಕ್ಕೆ ಆಹ್ವಾನ ನೀಡಲಾಗಿತ್ತು.
2 / 10

ನವಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಫೋಟೋಗಳನ್ನು ಐಪಿಎಲ್ ತಂಡವಾದ ಮುಂಬೈ ಇಂಡಿಯನ್ಸ್ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.
3 / 10

ಹಲವು ದಿನಗಳಿಂದ ಈ ಜೋಡಿಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಗಳು ಹರಿದಾಡುತ್ತಿದ್ದವು. ಆದರೆ ಇದ್ಯಾವೂದಕ್ಕೂ ತಲೆ ಕೇಡಿಸಿಕೊಳ್ಳದ ಈ ಜೋಡಿ ಇಂದು ವೈವಾಹಿಕ ಜೀವನಕ್ಕೆ ಕಾಲಿರಿಸಿವೆ.
4 / 10

28 ವರ್ಷದ ಸಂಜನಾ ಗಣೇಶನ್ ಮೂಲತಃ ಪುಣೆಯವರು. ಮಾಡೆಲಿಂಗ್ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದ ಸಂಜನಾ 2014ರಲ್ಲಿ ಫೆಮಿನಾ ಮಿಸ್ ಇಂಡಿಯಾ ಸೌಂದರ್ಯ ಸ್ಪರ್ಧೆಯ ಫೈನಲಿಸ್ಟ್ ಕೂಡ ಆಗಿದ್ದಾರೆ.
5 / 10

2016ರಲ್ಲಿ ಸ್ಟಾರ್ಸ್ಪೋರ್ಟ್ಸ್ಗೆ ಕ್ರೀಡಾ ನಿರೂಪಕಿಯಾಗಿ ಸೇರ್ಪಡೆಯಾಗಿದ್ದಾರೆ. 2014ರಲ್ಲಿ ಎಂಟಿವಿಯ ರಿಯಾಲಿಟಿ ಶೋ ಒಂದರಲ್ಲಿ ಸಂಜನಾ ಭಾಗವಹಿಸಿದ್ದರು.
6 / 10

2016ರ ಈಚೆಗೆ ಕ್ರೀಡೆಗೆ ಸಂಬಂಧಪಟ್ಟ ಶೋ, ಸಂದರ್ಶನಗಳಲ್ಲಿ ಸಕ್ರಿಯವಾಗಿದ್ದಾರೆ. ಐಪಿಲ್ ವೇಳೆ ಕೋಲ್ಕತ್ತ ನೈಟ್ ರೈಡರ್ಸ್ ತಂಡದ ನೈಟ್ ಕ್ಲಬ್ ಶೋನ ನಿರೂಪಕಿ ಇವರು.
7 / 10

ಜಸ್ ಪ್ರೀತ್ ಬುಮ್ರಾ-ಸಂಜನಾ
8 / 10

ಕಾರ್ಯಕ್ರಮವೊಂದರಲ್ಲಿ ಜಸ್ ಪ್ರೀತ್ ಬುಮ್ರಾ ಸಂದರ್ಶನ ಮಾಡಿದ್ದ ಸಂಜನಾ
9 / 10

ಜಸ್ ಪ್ರೀತ್ ಬುಮ್ರಾ-ಸಂಜನಾ
10 / 10
Stay up to date on all the latest ಕ್ರೀಡೆ news