ಅಭಿವೃದ್ಧಿಯಲ್ಲಿ 12ನೇ ಸ್ಥಾನಕ್ಕೆ ಕುಸಿದ ರಾಜ್ಯ: ಬಿಎಸ್ವೈ

ಶಿಡ್ಲಘಟ್ಟ: ತಾವು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರಾಜ್ಯವು ಅಭಿವೃದ್ಧಿಯಲ್ಲಿ 2 ಸ್ಥಾನದಲ್ಲಿತ್ತು. ಇದೀಗ ರಾಷ್ಟ್ರದಲ್ಲಿ 12 ನೇ ಸ್ಥಾನಕ್ಕೆ ಬಂದಿದೆ. ಇದಕ್ಕೆ ನನ್ನ ನಂತರ ಬಂದಿರುವ ಮುಖ್ಯಮಂತ್ರಿಗಳೇ ಕಾರಣರಾಗಿದ್ದು, ರಾಜ್ಯದ ಅಭಿವೃದ್ಧಿಯನ್ನು ಹಾಳು ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ಪಟ್ಟಣದ ನೆಹರು ಕ್ರೀಡಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ವಿವಿಧ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಮಂಡಿಸುವ ಬಜೆಟ್ಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಅದು ಕೇವಲ ಬಿಜೆಪಿ ಪ್ರಣಾಳಿಕೆಯಾಗಿಯೇ ಇರುತ್ತದೆ. ಶೆಟ್ಟರ್ ಅವರು ಬಜೆಟ್ ಮಂಡಿಸಿದರೂ ಮುಂದೆ ಬಿಜೆಪಿ ಸರ್ಕಾರ ಬರುವುದಿಲ್ಲ. ಬಜೆಟ್ನಲ್ಲಿ ಮಂಡಿಸುವ ಯೋಜನೆಗಳನ್ನು ಮುಂದಿನ ಸರ್ಕಾರ ಜಾರಿಗೆ ತರುವುದಿಲ್ಲ. ಈ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ಯಾವ ಪುರುಷಾರ್ಥಕ್ಕೆ ಬಜೆಟ್ ಮಂಡನೆ ಮಾಡುವುದು ಎಂದು ಪ್ರಶ್ನಿಸಿದರು. ನಾನು ಯಾವುದೇ ಒಂದು ಜಾತಿಗೆ ಸೀಮಿತಗೊಂಡವನಲ್ಲ. ಎಲ್ಲ ಜಾತಿ ಧರ್ಮಗಳನ್ನು ಸಮನಾಗಿ ಕಾಣುವಂತಹವನು. ಮುಖ್ಯಮಂತ್ರಿಯಾಗಿದ್ದಾಗ ಮುಸ್ಲಿಮರಿಗಾಗಿ ಒಂದೂವರೆ ಕೋಟಿ ವೆಚ್ಚದಲ್ಲಿ ಹಜ್ ಭವನ ನಿರ್ಮಾಣ, ಕಾಗಿನೆಲೆಯಲ್ಲಿ ಕನಕದಾಸರ ಪ್ರತಿಷ್ಠಾನದ ಅಭಿವೃದ್ಧಿಗಾಗಿ 10 ಕೋಟಿ ಕೊಟಿ, ಎಲ್ಲಾ ವರ್ಗಗಳಿಗೂ ಸಮಾನ ಆದ್ಯತೆ ನೀಡಿ ರಾಜ್ಯದ ಜನರ ಹಿತ ಕಾಪಾಡುವ ಕೆಲಸ ಮಾಡಿದ್ದೇನೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


