ನಾನೂ ಈಗಲೂ ಬಿಜೆಪಿ ಸಂಸದೆ: ಜೆ. ಶಾಂತಾ
ಜಮಖಂಡಿ: ಲೋಕಸಭೆ ಅಥವಾ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಈವರೆಗೂ ಯೋಚಿಸಿಲ್ಲ. ಆದರೆ, ಜನರು ಬಯಸಿದರೇ ಸ್ಪರ್ಧಿಸಲು ಸಿದ್ಧ ಎಂದು ಸಂಸದೆ ಜೆ. ಶಾಂತಾ ಹೇಳಿದರು. ಭಾನುವಾರ ಇಲ್ಲಿ ಬಿಎಸ್ಆರ್ ಕಾಂಗ್ರೆಸ್ ಹಮ್ಮಿಕೊಂಡಿದ್ದ ವಿಕಲಾಂಗ ದಂಪತಿಗೆ ಉಡಿ ತುಂಬುವ ಕಾರ್ಯಕ್ರಮದಲ್ಲಿ ಭಾಗವಹಿಸುವ ಮುನ್ನ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಬಿಜೆಪಿ ಸಂಸದರಾಗಿದ್ದರೂ ಬಿಎಸ್ಆರ್ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ನಡೆಸಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಈಗಲೂ ಬಿಜೆಪಿ ಸಂಸದೆ, ಜನ ಮನ್ನಣೆಯಿಂದ ಹಾಗೂ ಸಹೋದರರಾದ ಜನಾರ್ದನ ರೆಡ್ಡಿ, ಶ್ರೀರಾಮುಲು ಅವರ ಜನಪರ ಕೆಲಸಗಳು ನನ್ನ ಗೆಲವಿಗೆ ಕಾರಣ. ಅದಕ್ಕಾಗಿ ಬಿಜೆಪಿ ನನಗೆ ಟಿಕೆಟ್ ನೀಡಿ ಸ್ಪರ್ಧಿಸಲು ಅವಕಾಶ ನೀಡಿತ್ತು. ಅಪಾರ ಜನಬೆಂಬಲವಿದ್ದ ಕಾರಣ ಸಂಸದೆಯಾಗಿ ಆಯ್ಕೆಯಾದೆ. ಈಗ ಅದೇ ಜನ ಬಿಎಸ್ಆರ್ ಕಾಂಗ್ರೆಸ್ ಪರ ಪ್ರಚಾರ ನಡೆಸಲು ಆದೇಶಿಸಿದ್ದರಿಂದ ಈ ಕಾರ್ಯಕ್ರಮಕ್ಕೆ ಬಂದಿರುವುದಾಗಿ ಸಮರ್ಥಿಸಿಕೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

