ಶೀಫ್ರ ಕೃಷ್ಣ ಅವಧಿ ಗಣಿ ಅಕ್ರಮ ಬಯಲು
ರಾಯಚೂರು: ರಾಜ್ಯದಲ್ಲಿ ಈ ಹಿಂದೆ ಅಧಿಕಾರ ನಡೆಸಿದ ಎಸ್.ಎಂ. ಕೃಷ್ಣ ಅವಧಿಯಲ್ಲಿ ನಡೆದ ಗಣಿ ಅಕ್ರಮಗಳ ಬಗ್ಗೆ ಶೀಘ್ರವೇ ದಾಖಲೆಗಳನ್ನು ಬಹಿರಂಗಗೊಳಿಸುವುದಾಗಿ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ತಿಳಿಸಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ಕೃಷ್ಣ ಅವರು ನಡೆಸಿದ ಅಕ್ರಮಗಳ ಎಲ್ಲ ದಾಖಲೆಗಳನ್ನು ತಮ್ಮ ಪರ ಸುಪ್ರೀಂ ಕೋರ್ಟಿನಲ್ಲಿ ವಾದ ಮಂಡಿಸುತ್ತಿರುವ ಪ್ರಶಾಂತ್ ಭೂಷಣ್ ಅವರಿಗೆ ನೀಡಲಾಗಿದೆ. ರಾಜ್ಯದಲ್ಲಿ 2000ರಿಂದ 2010ರವರೆಗೆ ನಡೆದ ಅಕ್ರಮ ಗಣಿಗಾರಿಕೆ, ನೈಸರ್ಗಿಕ ಸಂಪತ್ತು ಲೂಟಿ ಮಾಡಿದವರ ವಿರುದ್ಧ ಸಂಸ್ಥೆ ನಡೆಸಿರುವ ಕಾನೂನು ಹೋರಾಟ ನಿಲ್ಲುವುದಿಲ್ಲ ಎಂದರು. ಮೈಸೂರು ಮಿನರಲ್ಸ್ ಸಂಸ್ಥೆ ಅದಿರು ಖರೀದಿ, ಕೋಟ್ಯಂತರ ರು. ಬಾಚಿಕೊಂಡ ಹಗರಣದ ಬಗ್ಗೆ ಕೇಂದ್ರೀಯ ಉನ್ನತಾಧಿಕಾರ ಸಮಿತಿ (ಸಿಇಸಿ) ತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಇದು ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ಗೆ ಭಯ ಮೂಡಿಸಿದೆ. ಅವರ ನಿಜವಾದ ಮುಖವನ್ನು ತನಿಖೆ ಬಯಲು ಮಾಡಲಿದೆ ಎಂಬ ಭಯದಿಂದ ನಾನು ಕುಮಾರಸ್ವಾಮಿ ಬಗ್ಗೆ ಮೃದು ಧೋರಣೆ ತಳೆದಿದ್ದಾಗಿ ಹೇಳಿಕೆ ನೀಡಿದ್ದಾರೆ. ಎಸ್.ಎಂ.ಕೃಷ್ಣ ಅವರು ಸಿಎಂ ಆಗಿದ್ದಾಗ ಅವರನ್ನು ಬಳಸಿ ಆಗಿನ ಸಚಿವ ಡಿ.ಕೆ.ಶಿವಕುಮಾರ್, ಮತ್ತಿತರ ಸಂಸ್ಥೆಗಳು ಅಕ್ರಮ ನಡೆಸಿದ್ದರ ಬಗ್ಗೆ 3 ಸಾವಿರ ಪುಟಗಳ ಪುರಾವೆಗಳನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

