ರಾಜಕೀಯ

ಕೆಜೆಪಿ ಅಧಿಕಾರಕ್ಕೆ ಬಂದರೆ ಮಠಗಳ ಅಭಿವೃದ್ಧಿಗೆ ಸಾವಿರ ಕೋಟಿ: ಬಿಎಸ್‌ವೈ

ಕೆಜೆಪಿ ಅಧಿಕಾರಕ್ಕೆ ಬಂದರೆ ಮಠಗಳ ಅಭಿವೃದ್ಧಿಗೆ ಸಾವಿರ ಕೋಟಿ: ಬಿಎಸ್‌ವೈ
Published On :

ಹೊಸದುರ್ಗ: ರಾಜ್ಯದಲ್ಲಿ ಕೆಜೆಪಿ ಅಧಿಕಾರಕ್ಕೆ ಬಂದರೆ ಸಾವಿರಾರು ಕೋಟಿ ಮೊತ್ತವನ್ನು ಮಠಗಳ ಅಭಿವಣದ್ಧಿಗೆ ಅನುದಾನ ನೀಡುವೆ ಎಂದು ಮಾಜಿ ಮುಖ್ಯಮಂತ್ರಿ ಕೆಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.  ಶನಿವಾರ ತಾಲೂಕಿನ ಕಸಬಾ ಹೋಬಳಿ ಜಮ್ಮಾಪುರ ಗ್ರಾಮದಲ್ಲಿ ಶ್ರೀ ಸೋಮಲಿಂಗೇಶ್ವರ ಸ್ವಾಮಿ, ಶ್ರೀ ಚೌಡೇಶ್ವರಿ ದೇವಿ ಹಾಗೂ ಶ್ರೀ ಆಂಜನೇಯ ಸ್ವಾಮಿ ನೂತನ ದೇವಾಲಯದ ಪ್ರಾರಂಭೋತ್ಸವದ ಅಂಗವಾಗಿ ಆಯೋಜಿಸಿದ್ದ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.  ಮಠಗಳು ಮಾಡುತ್ತಿರುವ ಕ್ರಿಯಾಶೀಲ ಸಾಮಾಜಿಕ ಕಾರ್ಯಗಳಿಗೆ ಹಣ ನೀಡುವುದು ತಪ್ಪಲ್ಲ.  ಭಕ್ತರ ಸೌಲಭ್ಯಕ್ಕೆ ಮಠಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರ ನೆರವಾಗುವುದು ಸರಿಯಾದ ಕ್ರಮ. ರಾಜ್ಯದಲ್ಲಿ ಮಠಗಳ ಅಭಿವೃದ್ಧಿಗೆ ಹಣ ನೀಡುವುದಕ್ಕೆ ಚಾಲನೆ ನೀಡಿ ನನ್ನ ಅಧಿಕಾರಾವಧಿಯಲ್ಲಿ ಸುಮಾರು 700 ಕೋಟಿ ಅನುದಾನ ನೀಡಿದೆ ಎಂದರು.  ಬಾಳೆಹೊನ್ನೂರು ರಂಭಾಪುರಿ ವೀರಸಿಂಹಾಸನಧೀಶ್ವರ ಜಗದ್ಗುರು ವೀರ ಸೋಮೆಶ್ವರ ರಾಜದೇಶಿಕೇಂದ್ರ ಸ್ವಾಮೀಜಿ, ಹಣ್ಣೆ ಮಠದ ಶಿವಾನಂದ ಸ್ವಾಮೀಜಿ, ಹಾಲುಸ್ವಾಮಿ ಮಠದ ಗುರುಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಕುಪ್ಪೂರು ಡಾ. ಯತೀಶ್ವರ ಶಿವಾಚಾರ್ಯ ಸ್ವಾಮಿಗಳು, ತಾವರೆಕೆರೆ ಶಿಲಾ ಮಠದ ಶ್ರೀ ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.