ಕಾಂಗ್ರೆಸ್ನಿಂದ ಕುದುರೆ ವ್ಯಾಪಾರ: ಸಿಎಂ ಶೆಟ್ಟರ್

ಹುಬ್ಬಳ್ಳಿ: ಸರ್ಕಾರ ಕೆಡವಲು ಕಾಂಗ್ರೆಸ್ ಹುನ್ನಾರು ನಡೆಸಿದೆ. ಕುದುರೆ ವ್ಯಾಪಾರಕ್ಕೆ ಕೈ ಹಾಕಿದೆ. ಇಷ್ಟಾಗಿಯೂ ಕಾಂಗ್ರೆಸ್ನ ಈ ಪ್ರಯತ್ನ ವಿಫಲವಾಗಲಿದೆ. ಸರ್ಕಾರ ಸುಭದ್ರವಾಗಿದೆ ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದರು.
ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಕಾಂಗ್ರೆಸ್ನಲ್ಲಿ ಮುಂಚೂಣಿ ನಾಯಕರಿಲ್ಲ. ಹೊಂದಾಣಿಕೆಯಂತೂ ಇಲ್ಲವೇ ಇಲ್ಲ. ಸಾಲದ್ದಕ್ಕೆ ಇವರ ಬಳಿ ಸರ್ಕಾರದ ವಿರುದ್ಧ ಮಾತನಾಡಲು ವಿಷಯವೂ ಇಲ್ಲ. ಹೀಗಾಗಿ ಶಾಸಕರನ್ನು ಖರೀದಿ ಮಾಡುವ ಮೂಲಕ ಸರ್ಕಾರವನ್ನು ಅತಂತ್ರಗೊಳಿಸಲು ಹವಣಿಸುತ್ತಿದೆ' ಎಂದು ದೂರಿದರು. ಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂಬ ಭ್ರಮೆಯಲ್ಲಿದೆ. ಕಾಂಗ್ರೆಸ್ನ ಈ ಆಸೆ ಈಡೇರುವುದು ಕನಸಿನ ಮಾತು. ಬಿಜೆಪಿಯ ಅಭಿವೃದ್ಧಿ ಕಾರ್ಯ ಜನ ಒಪ್ಪಿದ್ದಾರೆ. ಬಿಜೆಪಿಯೇ ಮುಂದೆ ಅಧಿಕಾರಕ್ಕೆ ಬರಲಿದೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿಯೂ ಬಿಜೆಪಿಯೇ ಗೆಲುವು ಸಾಧಿಸಲಿದೆ ಎಂದರು.
ಹೈ ಅಲರ್ಟ್: ಹೈದರಾಬಾದ್ ಬಾಂಬ್ ಸ್ಫೋಟ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಸೂಕ್ಷ್ಮ ಹಾಗೂ ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಭಯೋತ್ಪಾದಕ ಚಟುವಟಿಕೆಗಳ ಮೇಲೆ ನಿಗಾ ಇಡಲು ಕೇಂದ್ರ ಸರ್ಕಾರ ಹಿಂಜರಿಯಬಾರದು. ಇದೇ ವೇಳೆ ಭಯೋತ್ಪಾದಕರಿಗೆ ಕಠಿಣ ಶಿಕ್ಷೆ ನೀಡುವ ವಿಷಯದಲ್ಲೂ ಮೀನಮೇಷ ಎಣಿಸಬಾರದು. ಉಗ್ರರ ಈ ಕೃತ್ಯ ಖಂಡನೀಯ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


