ರಾಜಕೀಯ

ಬಳ್ಳಾರಿ ಜಿಲ್ಲಾಧಿಕಾರಿ ವಿರುದ್ಧ ತಿರುಗಿ ಬಿದ್ದ ಸಚಿವ ಜಾರಕಿಹೊಳಿ

Published On :

ಬೆಂಗಳೂರು: ನಗರೋತ್ಥಾನ ಯೋಜನೆ ಅನುಷ್ಠಾನಕ್ಕೆ ಅಡ್ಡಿ ಮಾಡುತ್ತಿರುವ ಬಳ್ಳಾರಿ ಜಿಲ್ಲಾಧಿಕಾರಿ ಹಾಗೂ ಪ್ರಾದೇಶಿಕ ಅಧಿಕಾರಿ ಅನಿಲ್ ಬಿಸ್ವಾಸ್ ವಿರುದ್ಧ ಮುಖ್ಯಮಂತ್ರಿ ಹಾಗೂ ರಾಜ್ಯ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆಯಲು ಪೌರಾಡಳಿತ ಸಚಿವ ಬಾಲಚಂದ್ರ ಜಾರಕಿಹೊಳಿ ನಿರ್ಧರಿಸಿದ್ದಾರೆ.
ಬಿಸ್ವಾಸ್ ವಿರುದ್ಧ ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಬಹಿರಂಗ ಆಕ್ರೋಶ ವ್ಯಕ್ತಪಡಿಸಿರುವ ಜಾರಕಿಹೊಳಿ, 'ಡಿಸಿಯವರಿಗೆ ಬಹುಶಃ ಅಭಿವೃದ್ಧಿ ಕೆಲಸ ಇಷ್ಟವಿಲ್ಲದೇ ಇರಬಹುದು. ಹೀಗಾಗಿ ನಗರೋತ್ಥಾನ ಯೋಜನೆಗೆ ಟೆಂಡರ್ ಕರೆಯುತ್ತಿಲ್ಲ. ಈ ಸಂಬಂಧ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹಾಗೂ ಮುಖ್ಯ ಕಾರ್ಯದರ್ಶಿ ಎಸ್.ವಿ. ರಂಗನಾಥ್ ಅವರಿಗೆ ಪತ್ರ ಬರೆದು ಬಿಸ್ವಾಸ್ ಅವರಿಂದ ವರದಿ ತರಿಸಿಕೊಳ್ಳುವಂತೆ ಆಗ್ರಹಿಸುತ್ತೇನೆ ಎಂದು ತಿಳಿಸಿದರು.
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಗರೋತ್ಥಾನ ಯೋಜನೆ ಅಡಿ ರಸ್ತೆ ಹಾಗೂ ಚರಂಡಿ ವ್ಯವಸ್ಥೆ ಸುಧಾರಿಸಲು 80 ಅನುಪಾತ 20ರ ಪ್ರಕಾರ ಅನುದಾನ ನೀಡಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಾಗಿದೆ. ಎಲ್ಲ ಜಿಲ್ಲೆಗಳಲ್ಲಿ ಫೆಬ್ರವರಿ 15ರ ನಂತರ ಟೆಂಡರ್ ಕರೆಯಲಾಗುತ್ತದೆ. ಆದರೆ ಬಳ್ಳಾರಿ, ಬೀದರ್, ಯಾದಗಿರಿ, ಕೊಪ್ಪಳ ಜಿಲ್ಲೆಗಳಿಗೆ ಸಂಬಂಧಿಸಿದ 200 ಕೋಟಿ ಟೆಂಡರ್ ಕರೆಯುತ್ತಿಲ್ಲ. ಇದಕ್ಕೆ ಪ್ರಾದೇಶಿಕ ಅಧಿಕಾರಿ ಹುದ್ದೆಯನ್ನೂ ನಿಭಾಯಿಸುತ್ತಿರುವ ಬಿಸ್ವಾಸ್ ಅಡ್ಡಿಪಡಿಸುತ್ತಿದ್ದಾರೆ ಎಂದು ದೂರಿದರು..

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.