ಸಿಎಂ ಸಹಿತ ಸಚಿವರ ಗೈರು: ಅಸಮಾಧಾನ
ಬೆಳಗಾವಿ: 'ನಾಡಿನ ದೊರೆ ಬರ್ತಾರೆ, ನಮ್ಗೆ ಪ್ರಶಸ್ತಿ ಕೊಟ್ಟು ಸನ್ಮಾನಿಸುತ್ತಾರೆ' ಎಂಬ ಆಸೆ ಹೊತ್ತು ಕಾಯುತ್ತಿದ್ದ ಅನ್ನದಾತರಿಗೆ ನಿಜಕ್ಕೂ ನಿರಾಸೆ ಕಾದಿತ್ತು.
ಬೆಳಗಾವಿ ಸುವರ್ಣವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಂತರ ಸೋಮವಾರ ಮೊಟ್ಟಮೊದಲ ಬಾರಿಗೆ ಕೃಷಿ ಇಲಾಖೆಯ 2011-12ನೇ ಸಾಲಿನ 'ಕೃಷಿ ಪಂಡಿತ' ಹಾಗೂ 'ಕೃಷಿ' ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಪ್ರಶಸ್ತಿ ಸ್ವೀಕರಿಸಲು ಕೃಷಿಯಲ್ಲಿ ಸಾಧಿಸಿದ ರೈತರು ರಾಜ್ಯದ ವಿವಿಧೆಡೆಯಿದಂ ಆಗಮಿಸಿದ್ದರು. ಆದರೆ, ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಬರಲೇ ಇಲ್ಲ. ಕೃಷಿ ಸಚಿವರ ತವರಲ್ಲೇ ಸಮಾರಂಭವಿದ್ದರೂ ಕೃಷಿ ಸಚಿವ ಉಮೇಶ ಕತ್ತಿ ಬರಲಿಲ್ಲ.
ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿ, ರೈತಪರ ಇರುವುದಾಗಿ ಬಿಜೆಪಿ ಸರ್ಕಾರ ಹೇಳುತ್ತದೆ. ಪ್ರಸಕ್ತ ಸಾಲಿನಲ್ಲಿ 20 ಸಾವಿರ ಕೋಟಿ ಬಜೆಟ್ ಮಂಡಿಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಆದರೆ, ಮುಖ್ಯಮಂತ್ರಿಗಳಿಂದ ಪ್ರಶಸ್ತಿ ಸ್ವೀಕರಿಸಲು ನಾವು ಬಂದರೆ, ಅವ್ರೇ ಇಲ್ಲ ಅಂದ್ರೆ ಏನಿದರರ್ಥ? ವಾರದ ಮುಂಚೆಯೇ ಈ ಸಮಾರಂಭದ ದಿನಾಂಕ ನಿಗದಿಪಡಿಸಲಾಗಿತ್ತು. ಮುಖ್ಯಮಂತ್ರಿ ಬಾರದಿರುವುದು ನಮಗೆ ನೋವುಂಟು ಮಾಡಿದೆ ಎಂದು ಹೇಳಲು ಹೇಳಲಿಚ್ಛಿಸದ ಕೃಷಿ ಪ್ರಶಸ್ತಿ ಪುರಸ್ಕೃತ ರೈತರೊಬ್ಬರು ಅಸಮಾಧಾನ ವ್ಯಕ್ತಪಡಿಸಿದರು. ಈ ಮಧ್ಯೆ ರೈತರೆಲ್ಲರೂ ನಾಡಿನ ದೊರೆಯನ್ನು ಕಾಣದಿದ್ದರೂ ಸುವರ್ಣವಿಧಾನ ಸೌಧದವನ್ನು ವೀಕ್ಷಿಸಿ ಸಂಭ್ರಮಿಸಿದರು.
ಸಮಾರಂಭದ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಲಾಗಿದ್ದ ಮುಖ್ಯ ಅತಿಥಿಗಳು, ವಿಶೇಷ ಆಹ್ವಾನಿತರು ಆಗಮಿಸರಲಿಲ್ಲ. ಹಾಗಾಗಿ, ಬೇರೆಯವರು ವೇದಿಕೆ ಮೇಲೆ ಆಸೀನರಾಗಿದ್ದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಗ್ರಾಮೀಣ ಶಾಸಕ ಸಂಜಯ್ ಪಾಟೀಲ್, ಸಮಾರಂಭಕ್ಕೆ ಮುಖ್ಯಮಂತ್ರಿ, ಕೃಷಿ ಸಚಿವರು ಸೇರಿದಂತೆ ಯಾರೊಬ್ಬರು ಬಾರದಿರುವುದರಿಂದ ನಮಗೆ ಒಳ್ಳೆಯದಾಗಿದೆ. ನಾವೇ ಪ್ರಶಸ್ತಿ ಪ್ರದಾನ ಮಾಡಿದ್ದು ತುಂಬಾ ಖುಷಿ ತಂದಿದೆ ಎಂದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

