ಕ.ಪ್ರ. ವಾರ್ತೆ, ಬೆಂಗಳೂರು, ಜು. 9-
ವಿಧಾನಸಭೆ ಉಪಾಧ್ಯಕ್ಷ ಹುದ್ದೆಗೆ ಗೌರಿಬಿದನೂರು ಕ್ಷೇತ್ರದ ಶಾಸಕ ಶಿವಶಂಕರ ರೆಡ್ಡಿ ಅವರು ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸಿದ ನಂತರ ಉಪಾಧ್ಯಕ್ಷ ಹುದ್ದೆಗೆ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ. ಜು 17 ನಾಮಪತ್ರ ಸಲ್ಲಿಸುವುದಕ್ಕೆ ಕಡೆಯ ದಿನವಾಗಿದ್ದು, 18ಕ್ಕೆ ಚುನಾವಣೆ ನಡೆಯಲಿದೆ. ಆದರೆ ಉಪಾಧ್ಯಕ್ಷ ಹುದ್ದೆಗೆ ಪ್ರತಿಪಕ್ಷಗಳು ನಾಮಪತ್ರ ಸಲ್ಲಿಸುವ ಸಾಧ್ಯತೆ ಕಡಿಮೆ ಇದ್ದು ಶಿವಶಂಕರ ರೆಡ್ಡಿ ಆಯ್ಕೆ ಅವಿರೋಧವಾಗಿ ನಡೆಯಲಿದೆ ಎನ್ನಲಾಗಿದೆ.