ಚಿತ್ರದುರ್ಗ: ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಸಮಾಜವಾದಿ ಪಕ್ಷ ಸೇರಲು ನಿರ್ಧರಿಸಿದ್ದಾರೆ. ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧೆ ಮಾಡುವುದಕ್ಕಿಂತ ಯಾವುದಾದರೂ ಚಿಹ್ನೆಯಡಿ ಇದ್ದರೆ ಒಳ್ಳೆಯದು. ಹೀಗಾಗಿ ಸಮಾಜವಾದಿ ಪಕ್ಷ ಸೇರಲು ನಿರ್ಧರಿಸಿದ್ದೇನೆ. ಮುಂಬರುವ ಲೋಕಸಭೆ ಚುನಾವಣೆಗೆ ಸೈಕಲ್ ಚಿಹ್ನೆಯಡಿ ಚಿತ್ರದುರ್ಗ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಸಿ.ಪಿ.ಯೋಗೇಶ್ವರ್ ಇದ್ದರು.